ಕಾಫಿನಾಡಿನಲ್ಲಿ ಮಳೆ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತ; ತುಂಬಿ ಹರಿಯುತ್ತಿರುವ ನದಿಗಳು
ಕಳಸ ತಾಲೂಕು ತನೂಡಿ ಗ್ರಾಮದ ಉಮೇಶ್ ಎಂಬುವವರ ಮನೆ ಕುಸಿದು ಬಿದ್ದಿದೆ.
Team Udayavani, Jul 12, 2022, 6:24 PM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಲೆನಾಡು ಭಾಗದಲ್ಲಿ ಹರಿಯುವ ತುಂಗಾ, ಭದ್ರಾ, ಹೇಮಾವತಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ.
ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಅನೇಕ ಕಡೆಗಳಲ್ಲಿ ಗುಡ್ಡ ಕುಸಿದಿದೆ. ಕಲ್ಲು- ಮಣ್ಣು ರಸ್ತೆಯ ಮೇಲೆ ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ. ಗುಡ್ಡ ಕುಸಿತದಿಂದ ಕಾಫಿತೋಟಗಳಿಗೆ ಹಾನಿಯಾಗಿದೆ. ಅನೇಕ ಮನೆಗಳು ಕುಸಿದು ಬಿದ್ದಿವೆ. ವಿದ್ಯುತ್ ಕಂಬಗಳು, ಸೇತುವೆಗಳಿಗೆ ಹಾನಿಯಾಗಿದೆ.
ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಅಲ್ಲಲ್ಲಿ ಗುಡ್ಡ ಕುಸಿದು ರಸ್ತೆ ಮೇಲೆ ಬಿದ್ದಿದ್ದು, ಜಿಲ್ಲಾಡಳಿತ ಪ್ರವಾಸಿಗರಿಗೆ ನಿರ್ಬಂಧಗಳನ್ನು ವಿಧಿ ಸಿದೆ. ಬಾಳೆಹೊನ್ನೂರು- ಮಾಗೋಡು ಸಮೀಪ ಅರೆನೂರು ಗ್ರಾಮದಲ್ಲಿ 100 ಅಡಿ ಎತ್ತರದಿಂದ ಗುಡ್ಡ ಕುಸಿದಿದ್ದು, ರಾಮು ಎಂಬುವವರಿಗೆ ಸೇರಿದ ಕಾಫಿ, ಅಡಕೆ, ಕಾಳುಮೆಣಸು ಬೆಳೆಗಳಿಗೆ ಹಾನಿಯಾಗಿದೆ.
ಚಿಕ್ಕಮಗಳೂರು ತಾಲೂಕು ಆವತಿ ಹೋಬಳಿ ಕಸ್ಕೆಮನೆಯಲ್ಲಿ ಗುಡ್ಡ ಕುಸಿದ ಪರಿಣಾಮ ಧರ್ಮೇಗೌಡ ಎಂಬುವವರಿಗೆ ಸೇರಿದ ಕಾಫಿತೋಟದಲ್ಲಿ ಗುಡ್ಡ ಕುಸಿದು ಕಾಫಿಗಿಡಗಳು ಮಣ್ಣು ಪಾಲಾಗಿವೆ.
ಕಳಸ ತಾಲೂಕು ತನೂಡಿ ಗ್ರಾಮದ ಉಮೇಶ್ ಎಂಬುವವರ ಮನೆ ಕುಸಿದು ಬಿದ್ದಿದೆ. ಮನೆ ಕುಸಿಯುವ ಶಬ್ದವನ್ನು ಅಂದಾಜಿಸಿ ಮನೆಯವರು ಮನೆಯಿಂದ ಹೊರ ಬಂದಿದ್ದು, ಕ್ಷಣ ಮಾತ್ರದಲ್ಲಿ ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾರೀ ಗಾಳಿ-ಮಳೆಗೆ ಮೂಡಿಗೆರೆ ತಾಲೂಕು ಸಬ್ಬಿ ಗ್ರಾಮದ ರಾಮಮ್ಮ ಎಂಬುವವರ ಮನೆ ಸಂಪೂರ್ಣ ಕುಸಿದು ಹೋಗಿದೆ. ಮನೆಯವರು ನೆಂಟರಮನೆಗೆ ಹೋಗಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿರುವುದರಿಂದ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ.
24 ಗಂಟೆಯಲ್ಲಿ 33 ಮನೆಗಳಿಗೆ ಹಾನಿ
ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 33 ಮನೆಗಳಿಗೆ ಹಾನಿಯಾಗಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ 3 ಮನೆಗಳು ಸಂಪೂರ್ಣ ಹಾನಿಯಾಗಿ ದ್ದರೆ 12 ಮನೆಗಳು ಭಾಗಶಃ ಹಾನಿಯಾಗಿವೆ. ಮೂಡಿಗೆರೆ ತಾಲೂಕಿನಲ್ಲಿ 1ಮನೆ ಸಂಪೂರ್ಣ ಹಾನಿಯಾದರೇ, 5 ಮನೆಗಳು ಭಾಗಶಃ ಹಾನಿಯಾಗಿವೆ. ಕೊಪ್ಪ ತಾಲೂಕಿನಲ್ಲಿ 1ಮನೆಗೆ ಸಂಪೂರ್ಣ ಹಾನಿಯಾಗಿದೆ. 3 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ನರಸಿಂಹರಾಜಪುರ ತಾಲೂಕಿನಲ್ಲಿ 5 ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಅಜ್ಜಂಪುರ ತಾಲೂಕಿನಲ್ಲಿ 2ಮನೆಗಳು ಭಾಗಶಃ ಹಾನಿಯಾಗಿವೆ. ಕಳಸ ತಾಲೂಕಿನಲ್ಲಿ 1ಮನೆ ಸಂಪೂರ್ಣ ಹಾನಿಯಾಗಿದೆ. ಜೂ.1ರಿಂದ ಇದುವರೆಗೂ ಜಿಲ್ಲಾದ್ಯಂತ 163 ಮನೆಗಳಿಗೆ ಹಾನಿಯಾಗಿದೆ.
19.40 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ
ಭಾರೀ ಮಳೆಯಿಂದ ಇದುವರೆಗೂ 19.40 ಹೆಕ್ಟೇರ್ ಪ್ರದೇಶದಲ್ಲಿ ಬೆಳೆಗಳಿಗೆ ಹಾನಿಯಾಗಿದೆ. 147 ವಿದ್ಯುತ್ ಕಂಬ, 143.52 ಕಿ.ಮೀ. ರಸ್ತೆ, 9 ಸೇತುವೆ ಹಾಗೂ 2.9.ಕಿ.ಮೀ. ವಿದ್ಯುತ್ ತಂತಿ ಹಾಳಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.