ಎಸ್‌ಸಿ-ಎಸ್‌ಟಿ ಮೀಸಲು ಹೆಚ್ಚಳಕ್ಕೆ15 ದಿನ ಗಡುವು

ರಾಜಧಾನಿವರೆಗೂ ಪಾದಯಾತ್ರೆ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ.

Team Udayavani, Jul 12, 2022, 6:31 PM IST

ಎಸ್‌ಸಿ-ಎಸ್‌ಟಿ ಮೀಸಲು ಹೆಚ್ಚಳಕ್ಕೆ15 ದಿನ ಗಡುವು

ಚಿತ್ರದುರ್ಗ: ಮುಂದಿನ 15 ದಿನಗಳ ಒಳಗಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಳ ಮಾಡದಿದ್ದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಎಲ್ಲಿಯೂ ಓಡಾಡಲು ಬಿಡುವುದಿಲ್ಲ. ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ ಎಂದು ಬಿಎಸ್‌ಪಿ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಎಚ್ಚರಿಕೆ ನೀಡಿದರು.

ವಾಲ್ಮೀಕಿ ನಾಯಕ ಸಮುದಾಯಕ್ಕೆ ಶೇ. 7.5 ಮೀಸಲಾತಿಗೆ ಒತ್ತಾಯಿಸಿ ಕಳೆದ 152 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಧರಣಿ ನಡೆಸುತ್ತಿರುವ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಹೋರಾಟ ಬೆಂಬಲಿಸಿ ನಗರದ ಒನಕೆ ಓಬವ್ವ ವೃತ್ತದಲ್ಲಿ ಹಮ್ಮಿಕೊಂಡಿದ್ದ ಬೃಹತ್‌ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 51 ಶಾಸಕರಿದ್ದಾರೆ. ದೇಶದಲ್ಲಿ 151 ಸಂಸದರಿದ್ದಾರೆ. ಎಲ್ಲರೂ ಧ್ವನಿ ಎತ್ತಬೇಕಾಗಿದೆ. ಒಳ ಜಾತಿಗಳೇನೇ ಇದ್ದರೂ, ಮೀಸಲಾತಿ ವಿಚಾರ ಬಂದಾಗ ಎಲ್ಲರೂ ಒಗ್ಗಟ್ಟಾಗಬೇಕು ಎಂದು ಕರೆ ನೀಡಿದರು.

ನ್ಯಾ| ನಾಗಮೋಹನ ದಾಸ್‌ ವರದಿ ನೀಡಿ ಎರಡು ವರ್ಷಗಳಾದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ತುಳಿತಕ್ಕೊಳಗಾದವರಿಗೆ ಮೀಸಲಾತಿ ನೀಡಬೇಕು ಎಂದು ಸಂವಿಧಾನ ಹೇಳಿದೆ. ಆದರೆ ಸರ್ಕಾರ ತಳ ಸಮುದಾಯಗಳನ್ನು ತಾತ್ಸಾರ ಮಾಡುತ್ತಿದೆ. ಇನ್ನಾದರೂ ಸರ್ಕಾರ ನಿದ್ದೆಯಿಂದ ಎಚ್ಚೆತ್ತು ಮೀಸಲಾತಿ ಜಾರಿ ಮಾಡಬೇಕು. ಇಲ್ಲವಾದಲ್ಲಿ ಸಿಎಂ ಹಾಗೂ ಸಚಿವರು ಓಡಾಡುವುದು ಕಷ್ಟವಾಗಲಿದೆ ಎಂದರು.

ಮಾಜಿ ಸಚಿವ ಎಚ್‌. ಆಂಜನೇಯ ಮಾತನಾಡಿ, ಮೀಸಲಾತಿ ಹೆಚ್ಚಳ ಮಾಡಲು ಇಷ್ಟು ದಿನ ಬೇಕಾಗಿರಲಿಲ್ಲ. ಆದರೆ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ಹೋರಾಟಕ್ಕೆ ಮನೆಗೊಬ್ಬರು ಬರಬೇಕು. ಬೆಂಗಳೂರು ದಿಗ್ಬಂಧನ ಮಾಡಬೇಕು. ಆಗ ಸರ್ಕಾರ ಎಚ್ಚೆತ್ತುಕೊಳ್ಳಲಿದೆ. ಎಲ್ಲರೂ ಒಗ್ಗೂಡಿ ಹೋರಾಟ ಮಾಡೋಣ ಎಂದು ತಿಳಿಸಿದರು.

ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್‌. ಮಂಜುನಾಥ್‌ ಮಾತನಾಡಿ, ಇಲ್ಲಿಯವರೆಗೂ ಪರಿಶಿಷ್ಟರಿಗೆ ಮೋಸ ಮಾಡಿಕೊಂಡು ಬರುತ್ತಿರುವ ಸರ್ಕಾರಗಳಿಗೆ ಪಾಠ ಕಲಿಸಿ ಮುಂದಿನ ಚುನಾವಣೆಯಲ್ಲಿ ಕಿತ್ತೂಗೆಯಬೇಕು. ಇಲ್ಲದಿದ್ದರೆ ಎಸ್‌ಸಿ-ಎಸ್‌ಟಿಗಳ ಸರ್ವನಾಶವಾಗುವುದರಲ್ಲಿ ಅನುಮಾನವಿಲ್ಲ ಎಂದರು.

ಮೇಲ್ವರ್ಗದವರು ಕೇಳದಿದ್ದರು ಶೇ. 10ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರ ನೀಡಿದೆ. ಆದರೆ ಪ್ರಸನ್ನಾನಂದ ಸ್ವಾಮೀಜಿ ಕಳೆದ 152 ದಿನಗಳಿಂದ ಮೀಸಲಾತಿ ಹೆಚ್ಚಳಕ್ಕಾಗಿ ಬೆಂಗಳೂರಿನಲ್ಲಿ ಧರಣಿ ನಡೆಸುತ್ತಿದ್ದರೂ ಮೋಸ ಮಾಡುವ ಪಕ್ಷಗಳಿಗೆ ಮಣೆ ಹಾಕುವ ಕೆಲಸ ಮಾಡುತ್ತಿದ್ದೇವೆ. ಈ ನಿಟ್ಟಿನಲ್ಲಿ ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸಬೇಕು ಎಂದು ಹೇಳಿದರು.

ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮಾತನಾಡಿ, ವಾಲ್ಮೀಕಿ ಶ್ರೀಗಳು 152 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ರಾಜನಹಳ್ಳಿಯಿಂದ ರಾಜಧಾನಿವರೆಗೂ ಪಾದಯಾತ್ರೆ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ. ಅಧಿವೇಶನದಲ್ಲಿ ಮೂರು ಬಾರಿ ಪ್ರತಿಭಟನೆ ನಡೆಸಿದ್ದೇವೆ, ಧರಣಿ ಮಾಡಿದ್ದೇವೆ. ಜನಸಂಖ್ಯೆಗನುಗುಣವಾಗಿ ಮೀಸಲಾತಿ ಸಿಗಬೇಕು ಎಂದು ಒತ್ತಾಯಿಸಿದ್ದೇವೆ. ಆದರೂ ಬಿಜೆಪಿ ನೇತೃತ್ವದ ಸರ್ಕಾರ ನಮಗೆ ಮೋಸ ಮಾಡುತ್ತಿದೆ. ಧರ್ಮದ ವಿಚಾರವನ್ನು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಂಜಾರ ಗುರುಪೀಠದ ಸರ್ದಾರ್‌ ಸೇವಾಲಾಲ್‌ ಸ್ವಾಮೀಜಿ, ಬಸವಪ್ರಭು ಕೇತೇಶ್ವರ ಸ್ವಾಮೀಜಿ ಮಾತನಾಡಿದರು.ನಾಯಕ ಸಮಾಜದ ಜಿಲ್ಲಾಧ್ಯಕ್ಷ ಎಚ್‌.ಜೆ. ಕೃಷ್ಣಮೂರ್ತಿ, ತಾಲೂಕು ಅಧ್ಯಕ್ಷ ಬಿ. ಕಾಂತರಾಜ್‌, ಮುಖಂಡರಾದ ಹರ್ತಿಕೋಟೆ ವೀರೇಂದ್ರಸಿಂಹ, ಡಿ. ಗೋಪಾಲಸ್ವಾಮಿ ನಾಯಕ, ಕೆ.ಪಿ. ಸಂಪತ್‌ಕುಮಾರ್‌, ಫಾ| ಎಂ.ಎಸ್‌. ರಾಜು, ನಗರಸಭೆ ಸದಸ್ಯರಾದ ವೆಂಕಟೇಶ್‌, ದೀಪು, ಮಾಜಿ ಸದಸ್ಯರಾದ ತಿಪ್ಪೇಸ್ವಾಮಿ, ಸಿ.ಟಿ. ರಾಜೇಶ್‌, ಲಿಂಗವ್ವನಾಗತಿಹಳ್ಳಿ ತಿಪ್ಪೇಸ್ವಾಮಿ, ಎಚ್‌. ಅಂಜಿನಪ್ಪ, ದಲಿತ ಮುಖಂಡ ಡಿ.ಟಿ. ರಾಜಗಿರಿ, ಬಾಳೆಕಾಯಿ ಶ್ರೀನಿವಾಸ್‌, ಜಿಪಂ ಮಾಜಿ ಸದಸ್ಯರಾದ ಆರ್‌ .ನರಸಿಂಹರಾಜು, ಬಿ.ಪಿ.ಪ್ರಕಾಶ್‌ಮೂರ್ತಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಪರಿಶಿಷ್ಟ ಜಾತಿಗೆ ಶೇ. 17 ಹಾಗೂ ಪಂಗಡದ ಶೇ. 7.5ರಷ್ಟು ಮೀಸಲಾತಿ ಹೆಚ್ಚಳ ಮಾಡಲು ಕೇಳುತ್ತಿದ್ದೇವೆ. ನಮ್ಮ ಸಂವಿಧಾನಬದ್ಧ ಹಕ್ಕನ್ನು ಕೊಡಿ. ಮೀಸಲಾತಿ ವಿಚಾರದಲ್ಲಿ ಸರ್ಕಾರದ ತಾತ್ಸಾರ ಭಾವನೆ ಸರಿಯಲ್ಲ. ನಮ್ಮ ತಾಳ್ಮೆ ಪರೀಕ್ಷೆ ಮಾಡದೇ ಮೀಸಲಾತಿ ಕಲ್ಪಿಸಿ ವಾಲ್ಮೀಕಿ ಶ್ರೀಗಳ ಧರಣಿ ಅಂತ್ಯವಾಗುವಂತೆ ನೋಡಿಕೊಳ್ಳಿ.

ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ

ಆಳುವ ಸರ್ಕಾರಗಳು ಯಾವುದೇ ಇರಬಹುದು. ಆದರೆ ಹೋರಾಟ ಪರಿಪಕ್ವವಾಗಿದ್ದಾಗ ಮಾತ್ರ ಧರಣಿ, ಚಳವಳಿಗಳಿಗೆ ಯಶಸ್ಸು ಸಿಗುತ್ತದೆ. ರಾಜ್ಯದಲ್ಲಿ ಶೇ. 30ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿದ್ದೇವೆ. ತಾಳ್ಮೆ ಕೆಣಕಿದರೆ ಮುಂದಿನ ಪರಿಸ್ಥಿತಿ ನೆಟ್ಟಗಿರುವುದಿಲ್ಲ. ವಿಳಂಬ ನೀತಿ ಅನುಸರಿಸಿದಂತೆಲ್ಲಾ ವಿರೋಧಗಳ ಶಕ್ತಿ ಹೆಚ್ಚುತ್ತದೆ. ನ್ಯಾ| ನಾಗಮೋಹನ ದಾಸ್‌ ವರದಿ ಸ್ಪಷ್ಟ, ನಿಖರ, ನೇರವಾಗಿದೆ. ಪರಿಶೀಲಿಸುವ ಅಗತ್ಯವಿಲ್ಲ. ಸರ್ಕಾರ ಮೀಸಲಾತಿ ಹೆಚ್ಚಿಸಲಿ.
ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ

ಟಾಪ್ ನ್ಯೂಸ್

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-chitradurga

Chitradurga: ನಿವೃತ್ತ ಶಿಕ್ಷಕಿ ಬಳಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ರೇಡ್‌

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

Challakere: ಗೆಳೆಯನ ವಿವಾಹದಲ್ಲಿ ಕುಣಿವಾಗ ಕುಸಿದು ಬಿದ್ದು ಯುವಕ ಸಾವು

4-bharamasagara

Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್‌ ಆದ ಯುವಕನ ಹತ್ಯೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.