ಭಾರತದಲ್ಲಿ ಜನಸಂಖ್ಯೆ ಹೆಚ್ಚಿದರೆ ಭದ್ರತಾ ಮಂಡಳಿ ಸ್ಥಾನ ಖಚಿತ?
ವಿಶ್ವಸಂಸ್ಥೆಯ ಹಿರಿಯ ಅಧಿಕಾರಿ ವಿಲಿಯಮ್ಸ್ ಪ್ರತಿಪಾದನೆ
Team Udayavani, Jul 13, 2022, 6:55 AM IST
ವಿಶ್ವಸಂಸ್ಥೆ: ಮುಂದಿನ ವರ್ಷಾಂತ್ಯಕ್ಕೆ ಜನಸಂಖ್ಯೆಯಲ್ಲಿ ಚೀನವನ್ನು ಭಾರತ ಮೀರಿಸಿದರೆ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಮಾನ ಪಡೆಯಲು ಹೆಚ್ಚಿನ ಅನುಕೂಲವಾಗಲಿದೆ.
ಹೀಗೆಂದು ವಿಶ್ವಸಂಸ್ಥೆಯ ಜನಸಂಖ್ಯೆ ವಿಭಾಗದ ಅಧಿಕಾರಿಯೊಬ್ಬರು ಹೇಳಿದ್ದಾರೆ. ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ವಿಭಾಗದ ಒಂದು ಭಾಗವಾಗಿರುವ ಜನಸಂಖ್ಯಾ ವಿಭಾಗದ ನಿರ್ದೇಶಕ ಜಾನ್ ವಿಲಿಯಂ ಮಾತನಾಡಿ “ಜಗತ್ತಿನಲ್ಲಿ ಅತ್ಯಂತ ಹೆಚ್ಚಿನ ಸಂಖ್ಯೆಯ ಜನಸಂಖ್ಯೆ ಹೊಂದಿರುವ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾದರೆ ಕೆಲವೊಂದು ಲಾಭಗಳೂ ಇವೆ. ವಿಶ್ವಸಂಸ್ಥೆಯಲ್ಲಿ ಅಂಥ ರಾಷ್ಟ್ರಕ್ಕೆ ಪ್ರಭಾವಶಾಲಿ ಹೊಣೆ ಸಿಗಬಹುದು. ವಿಶೇಷವಾಗಿ ಭದ್ರತಾ ಮಂಡಳಿಯಲ್ಲಿನ ಶಾಶ್ವತ ಐದು ಸ್ಥಾನಗಳಲ್ಲಿಯೂ ಸ್ಥಾನ ಸಿಗುವ ಸಾಧ್ಯತೆ ಇದೆ’ ಎಂದಿದ್ದಾರೆ.
ಹಲವು ದಶಕಗಳಿಂದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಸ್ಥಾನ ಪಡೆಯಬೇಕು ಎನ್ನುವುದು ಭಾರತದ ಹಂಬಲವಾಗಿದೆ. ಆದರೆ, ಅದು ಇನ್ನೂ ಪರಿಶೀಲನೆಯ ಹಂತದಲ್ಲಿ ಮತ್ತು ಏಷ್ಯಾ ವತಿಯಿಂದ ಚೀನಾ ಸ್ಥಾನ ಪಡೆದಿದೆ. ಹೀಗಾಗಿ, ಭಾರತದ ಹಂಬಲಕ್ಕೆ ಚೀನ ಅಡ್ಡವಾಗಿ ಇರುವುದರಿಂದಲೂ ಆ ಬೇಡಿಕೆ ಇನ್ನೂ ಈಡೇರಿಲ್ಲ.
ಚೀನ ಸರ್ಕಾರ ಜನಸಂಖ್ಯೆಯ ನಿಯಂತ್ರಣಕ್ಕಾಗಿ 1970 ಮತ್ತು 1980ರ ದಶಕದಲ್ಲಿ ಕೈಗೊಂದ್ದರಿಂದ ಆ ದೇಶದ ಜನರಲ್ಲಿ ಮಕ್ಕಳನ್ನು ಪಡೆಯುವ ಸಾಮರ್ಥ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಿದೆ. ಹೀಗಾಗಿ, ಇತ್ತೀಚಿನ ವರ್ಷಗಳಲ್ಲಿ ಅಲ್ಲಿನ ಜನಸಂಖ್ಯೆಯ ವೃದ್ಧಿಯ ಮೇಲೆ ಕೂಡ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಜಾನ್ ವಿಲಿಯಂ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.