ಧಾರಾಕಾರ ಮಳೆ; ಸೇತುವೆ ದಾಟುವ ವೇಳೆ ಕೊಚ್ಚಿ ಹೋದ ಕಾರು, 3 ಸಾವು, ಮೂವರು ನಾಪತ್ತೆ
ಎಂಟು ಪ್ರಯಾಣಿಕರೊಂದಿಗೆ ತೆರಳುತ್ತಿದ್ದ ಎಸ್ ಯುವಿ ಕೊಚ್ಚಿಕೊಂಡು ನದಿಗೆ ಬಿದ್ದಿತ್ತು
Team Udayavani, Jul 13, 2022, 10:57 AM IST
ನಾಗ್ಪುರ್: ಭಾರೀ ಮಳೆಯ ಪರಿಣಾಮ ಸೇತುವೆಯ ಮೇಲೆ ತೆರಳುತ್ತಿದ್ದ ಕಾರು ಕೊಚ್ಚಿಕೊಂಡು ಹೋಗಿದ್ದು, ಮೂವರು ಸಾವನ್ನಪ್ಪಿರುವ ಘಟನೆ ನಾಗ್ಪುರ್ ನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ.
ಇದನ್ನೂ ಓದಿ:ಉಡುಪಿ: ಕಡಲ್ಕೊರೆತ ತಡೆಗೆ ನವ ತಂತ್ರಜ್ಞಾನ; ಸಿಎಂ ಬೊಮ್ಮಾಯಿ
ಸೇತುವೆ ಮೇಲೆ ಕಾರು ತೆರಳುತ್ತಿದ್ದಾಗ ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋಗಿದ್ದು, ಈ ಸಂದರ್ಭದಲ್ಲಿ ನೂರಾರು ಜನರು ಅಕ್ಕ-ಪಕ್ಕ ನಿಂತು ನೋಡುತ್ತಿದ್ದರು. ಇನ್ನು ಕೆಲವರು ವಿಡಿಯೋ ಚಿತ್ರೀಕರಣ ಮಾಡುತ್ತಿದ್ದು, ಯಾರೊಬ್ಬರು ರಕ್ಷಿಸುವ ಗೋಜಿಗೆ ಹೋಗಿಲ್ಲ ಎಂದು ವರದಿ ವಿವರಿಸಿದೆ.
ಕಾರು ಸೇತುವೆಯಿಂದ ಕೆಳಕ್ಕೆ ಬಿದ್ದು ನೀರಿನ ರಭಸಕ್ಕೆ ಕೊಚ್ಚಿಕೊಂಡು ಹೋದ ಘಟನೆಯಲ್ಲಿ ಮಹಿಳೆ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. ಸೇತುವೆಯ ಎರಡೂ ಭಾಗಗಳಲ್ಲಿ ತಡೆಬೇಲಿ ಇಲ್ಲದ ಪರಿಣಾಮ ನೀರು ಸೇತುವೆ ಮೇಲಿಂದ ರಭಸವಾಗಿ ಹರಿದು ಹೋಗುತ್ತಿತ್ತು. ಈ ವೇಳೆ ಎಂಟು ಪ್ರಯಾಣಿಕರೊಂದಿಗೆ ತೆರಳುತ್ತಿದ್ದ ಎಸ್ ಯುವಿ ಕೊಚ್ಚಿಕೊಂಡು ನದಿಗೆ ಬಿದ್ದಿತ್ತು ಎಂದು ವರದಿ ವಿವರಿಸಿದೆ.
Video: Car Washed Away Crossing Bridge In Heavy Rain In Nagpur, 3 Dead https://t.co/0jPms5CVSL pic.twitter.com/tpMX9nTEop
— NDTV (@ndtv) July 12, 2022
ಮೂವರು ಶವ ಪತ್ತೆಯಾಗಿದ್ದು, ಇನ್ನೂ ಮೂವರು ಪ್ರಯಾಣಿಕರು ನಾಪತ್ತೆಯಾಗಿದ್ದಾರೆ ಎಂದು ಹೆಸರು ಹೇಳಲು ಇಚ್ಚಿಸದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ಪಿಟಿಐ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.