ದನಗಳಿಗೆ ಎಪಿಎಂಸಿ ಪಶು ಆಸ್ಪತ್ರೆ ಚಿಕಿತ್ಸೆ ಕೊಡಿಸಿ
Team Udayavani, Jul 13, 2022, 5:44 PM IST
ವಿಜಯಪುರ: ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ವಾರಕ್ಕೊಮ್ಮೆ ಜಾನುವಾರು ಸಂತೆ ನಡೆಯಲಿದೆ. ಈ ಸಂತೆಗೆ ಆಗಮಿಸುವ ರೈತರರು ತಮ್ಮ ಜಾನುವಾರುಗಳ ರೋಗ ಪರೀಕ್ಷೆ, ಚಿಕಿತ್ಸೆ ಕೊಡಿಸುವ ಮೂಲಕ ಪಶು ಆಸ್ಪತ್ರೆಯ ಅನುಕೂಲ ಪಡೆಯಬೇಕು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ವಿಜಯಪುರ ನಗರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ಪಶು ಆಸ್ಪತ್ರೆ ಸೇವೆಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರಿಗೆ ತಮ್ಮ ರೋಗಪೀಡಿ ಜಾನುವಾರುಗಳಿಗೆ ಚಿಕಿತ್ಸೆ ಕೊಡಿಸಲು ಎಪಿಎಂಸಿ ಪಶು ಆಸ್ಪತ್ರೆ ಸಹಕಾರಿ ಆಗಲಿದೆ ಎಂದರು.
ಬಳಿಕ ಶಾಸಕರು ಎಪಿಎಂಸಿ ಕಚೇರಿಗೆ ತೆರಳಿ, ಎಪಿಎಂಸಿ ಆಡಳಿತಾಧಿ ಕಾರಿಗಳು ಆಗಿರುವ ವಿಜಯಪುರ ತಹಶೀಲ್ದಾರ್ ಸಿದ್ಧರಾಮ ಬೋಸಗಿ, ಎಪಿಎಂಸಿ ಕಾರ್ಯದರ್ಶಿಗಳಾದ ಎಚ್.ಸಿ.ಎಂ. ರಾಣಿ, ಸಹಾಯಕ ಕಾರ್ಯದರ್ಶಿ ಔರಂಗಬಾದ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಸೇರಿದಂತೆ ಇನ್ನಿತರರೊಂದಿಗೆ ಸಭೆ ನಡೆಸಿ, ಎಪಿಎಂಸಿಯು ಜನಸ್ನೇಹಿಯಾಗಿ ಕಾರ್ಯನಿರ್ವಹಿಸುವುದಕ್ಕೆ ಸಂಬಂಧಿಸಿದಂತೆ ಚರ್ಚಿಸಿ ಕೆಲವು ಮಹತ್ವದ ಸಲಹೆಗಳನ್ನು ನೀಡಿದರು.
ವಿಜಯಪುರ ಎಪಿಎಂಸಿ ಆಡಳಿತಾ ಧಿಕಾರಿಗಳಾದ ವಿಜಯಪುರ ತಹಸೀಲ್ದಾರ ಸಿದ್ಧರಾಮ ಬೋಸಗಿ, ಎಪಿಎಂಸಿ ಕಾರ್ಯದರ್ಶಿ ಎಚ್.ಸಿ.ಎಂ. ರಾಣಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್
Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ
Vijayapura: ಕೃಷಿ ಹೊಂಡದಲ್ಲಿ ಮುಳುಗಿ ತಾಯಿ, ಇಬ್ಬರು ಮಕ್ಕಳು ಸಾ*ವು
ಅಮಿತ್ ಶಾ ರಾಜೀನಾಮೆಗೆ ಒತ್ತಾಯಿಸಿ ವಿಜಯಪುರ ಬಂದ್: ಬಸ್ ಸಂಚಾರ ಸ್ಥಗಿತ, ತೆರೆಯದ ಅಂಗಡಿಗಳು
ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಒಎಂಆರ್ ಶೀಟ್-ನೋಂದಣಿ ಸಂಖ್ಯೆ ಅದಲು-ಬದಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.