ಹಿಂದುಳಿದ ಜಾತಿ ಒಗ್ಗಟ್ಟು ಅಗತ್ಯ: ರಾಮಚಂದ್ರಪ್ಪ


Team Udayavani, Jul 14, 2022, 2:50 PM IST

11caste

ಕಲಬುರಗಿ: ರಾಜ್ಯದಲ್ಲಿ ಜಾತಿ, ವರ್ಗ ಸಂಘರ್ಷ ತಪ್ಪಿದ್ದಲ್ಲ. ಆದರೆ, ಹಿಂದುಳಿದ ವರ್ಗಗಳು ಒಗ್ಗಟ್ಟಿನಿಂದ ನಡೆದಾಗ ಮಾತ್ರವೇ ನಾವು ವಂಚಿತ ಹಕ್ಕಿನ ಲಾಭ ಪಡೆಯಬಹುದು ಎಂದು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಹೇಳಿದರು.

ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ನಡೆದ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಆಶ್ರಯದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 75ನೇ ಜನ್ಮ ದಿನದ ಪ್ರಯುಕ್ತವಾಗಿ ಹಮ್ಮಿಕೊಂಡಿದ್ದ ಅಮೃತಮಹೋತ್ಸವ ಕಾರ್ಯಕ್ರಮ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಹಿತಚಿಂತಕ ಸಿದ್ದರಾಮಯ್ಯ. ಈ ಹಿಂದೆ ಅಹಿಂದ ಕಟ್ಟಿದ್ದು ಅವರೇ. ಅಂತಹ ವ್ಯಕ್ತಿಯ ಅಮೃತ ಮಹೋತ್ಸವದಲ್ಲಿ ನಾವೆಲ್ಲರೂ ಖಂಡಿತವಾಗಿ ಭಾಗಿಯಾಗಬೇಕು. ಅವರು ಅಧಿಕಾರದಲ್ಲಿದ್ದಾಗ ಹಿಂದುಳಿದ ಜಾತಿಗಳಿಗಾಗಿ ಹಲವಾರು ಯೋಜನೆಗಳನ್ನು ರೂಪಿಸುವುದರ ಮೂಲಕ ಅವಿಸ್ಮರಣೀಯ ಕಾರ್ಯ ಮಾಡಿದ್ದಾರೆ. ದೊಡ್ಡಮಟ್ಟದಲ್ಲಿ ನಾವು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಕರೆ ನೀಡಿದರು.

ಒಕ್ಕೂಟದ ಜಿಲ್ಲಾ ಮುಖಂಡ ಲಚ್ಚಪ್ಪ ಜಮಾದಾರ ಮಾತನಾಡಿ, ಸಿದ್ದರಾಮಯ್ಯ ಅವರು ಹಿಂದುಳಿದ ವರ್ಗಗಳ ಅಸ್ಮಿತೆ. ಅವರು ತಮ್ಮ ಸರಕಾರದ ಅವಧಿಯಲ್ಲಿ ಅನ್ನಭಾಗ್ಯ, ಶಿಕ್ಷಣ ಭಾಗ್ಯ ಹಲವು ಭಾಗ್ಯಗಳನ್ನು ನೀಡುವ ಮೂಲಕ ರಾಜ್ಯದ ಹಿಂದುಳಿದ ವರ್ಗವನ್ನು ಸಶಕ್ತ ಮಾಡಿದ್ದಾರೆ. ಆದರೆ, ಈಗ ಪರಿಸ್ಥಿತಿ ಭಿನ್ನವಾಗಿದೆ. ನಮ್ಮ ಹಿಂದುಳಿದ ವರ್ಗಗಳ ಮಕ್ಕಳ ಶೈಕ್ಷಣಿಕ ಹಕ್ಕು ಮೊಟಕುಗೊಳ್ಳುತ್ತಿದೆ. ಶಿಷ್ಯವೇತನ, ಬಸ್‌ ಪಾಸಿಗಾಗಿ ಪರದಾಡುವಂತಹ ಪರಿಸ್ಥಿತಿ ಇದೆ. ದಿ. ದೇವರಾಜು ಅರಸು ಬಳಿಕ ಹಿಂದುಳಿದ ವರ್ಗಗಳ ಕಲ್ಯಾಣ ಬಯಸಿದ್ದು ಸಿದ್ದರಾಮಯ್ಯ ಅವರು. ಅವರಿಲ್ಲದೆ ಹೋದರೆ ಹಿಂದುಳಿದ ವರ್ಗವನ್ನು ಊಹಿಸಿಕೊಳ್ಳುವುದು ಕೂಡ ಅಸಾಧ್ಯ ಎಂದರು.

ಮಹಾಂತೇಶ ಕೌಲಗಿ, ಬಸವರಾಜ್‌ ಬೂದಿಹಾಳ್‌, ವಾಣಿಶ್ರೀ ಸಗರಕರ್‌, ಬೈಲಪ್ಪ ನೆಲೋಗಿ ಮಾತನಾಡಿದರು. ಸಮಾರಂಭದಲ್ಲಿ ಗೋವಿಂದ ಯಾದವ್‌, ಡಾ| ವಿಠಲ್‌ ದೊಡ್ಡಮನಿ, ಹಣಮಂತರಾವ ಹೂಗಾರ, ಮಲ್ಲಿಕಾರ್ಜುನ ಪೂಜಾರಿ ಹಾಗೂ ವಿವಿಧ ಮುಖಂಡರು ಇದ್ದರು.

ಟಾಪ್ ನ್ಯೂಸ್

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

SPB: ತಿರುವಳ್ಳೂರ್ ನಲ್ಲಿ ಎಸ್.ಪಿ. ಬಾಲಸುಬ್ರಹ್ಮಣ್ಯಂ ಸ್ಮಾರಕ ನಿರ್ಮಾಣ

SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ

naa ninna bidalare movie releasing today

Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

1

Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.