ಜನರ ಸಮಸ್ಯೆಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಡಿಸಿ ಪಾಠ


Team Udayavani, Jul 14, 2022, 2:58 PM IST

12DC

ಜೇವರ್ಗಿ: ತಾಲೂಕು ಕಚೇರಿಗೆ ಸಮಸ್ಯೆಗಳನ್ನು ಹೊತ್ತುಕೊಂಡು ಬರುವ ಜನರೊಂದಿಗೆ ವಿನಯತೆಯಿಂದ ವರ್ತಿಸಿ, ಸ್ಥಳದಲ್ಲೇ ಪರಿಹಾರ ಒದಗಿಸಿ ಜನರ ತೊಂದರೆಗಳಿಗೆ ಸ್ಪಂದಿಸಬೇಕು ಎಂದು ಜಿಲ್ಲಾಕಾರಿ ಯಶವಂತ ವಿ. ಗುರುಕರ ಹೇಳಿದರು.

ಪಟ್ಟಣದ ತಹಶೀಲ್ದಾರ್‌ ಕಚೇರಿಯಲ್ಲಿ ಮಂಗಳವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿ ನಂತರ ಅಧಿಕಾರಿಗಳ ಸಭೆ ನಡೆಸಿ ಸಲ್ಲಿಕೆಯಾದ ಅರ್ಜಿಗಳನ್ನು ಖುದ್ದು ಪರಿಶೀಲಿಸಿ ಅವರು ಮಾತನಾಡಿದರು.

ಸಾರ್ವಜನಿಕರ ಕೆಲಸ, ಕಾರ್ಯಗಳನ್ನು ಸಕಾಲದಲ್ಲಿ ನಿರ್ವಹಿಸಬೇಕು. ಅಧಿಕಾರಿಗಳು, ಸಿಬ್ಬಂದಿ ಕೊರತೆ ನೆಪ ಹೇಳದೇ ಕಾರ್ಯನಿರ್ವಹಿಸಬೇಕು. ಶ್ರದ್ಧೆಯಿಂದ ಕೆಲಸ ಮಾಡಿ ವಿನಾಕಾರಣ ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸದೇ ತ್ವರಿತ ಸೇವೆ ನೀಡಿ ಅರ್ಜಿಗಳನ್ನು ತಕ್ಷಣವೇ ವಿಲೇವಾರಿ ಮಾಡುವಂತೆ ಜಿಲ್ಲಾಧಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬೀಜ, ಗೊಬ್ಬರ ಕೊರತೆ ಬಗ್ಗೆ ಕೆಲವರಿಂದ ಸುಳ್ಳು ವದಂತಿ ಹರಡಿಸಲಾಗುತ್ತಿದೆ. ಕೃಷಿ ಇಲಾಖೆ ತಾಲೂಕಿನ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ತೊಗರಿ, ಹೆಸರು, ಉದ್ದು, ಸೋಯಾಬಿನ್‌, ಸಜ್ಜೆ, ಮೆಕ್ಕೆಜೋಳ, ಸೂರ್ಯಕಾಂತಿ ಬೀಜಗಳನ್ನು ದಾಸ್ತಾನು ಮಾಡಲಾಗಿದೆ. 731ಮೆಟ್ರಿಕ್‌ ಟನ್‌ ಡಿಎಪಿ ಕೃಷಿ ಪರಿಕರ ಮಾರಾಟಗಾರರ ಮಳಿಗೆಗಳಲ್ಲಿ ದಾಸ್ತಾನು ಮಾಡಲಾಗಿದೆ. ರೈತರಿಗೆ ತೊಂದರೆಯಾದಲ್ಲಿ ಹಾಗೂ ಹೆಚ್ಚಿನ ಬೆಲೆಯಲ್ಲಿ ಮಾರಾಟ ಮಾಡಿದ್ದು ಕಂಡು ಬಂದಲ್ಲಿ ಕೂಡಲೇ ಸಮೀಪದ ರೈತ ಸಂಪರ್ಕ ಕೇಂದ್ರ ಹಾಗೂ ಸಹಾಯಕ ಕೃಷಿ ನಿರ್ದೇಶಕರನ್ನು ಭೇಟಿ ಮಾಡಲು ಸೂಚಿಸಿದರು.

ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಗೆ ಒಟ್ಟು 29 ಮನೆಗಳು ಬಿದ್ದಿದ್ದು, ಮನೆ ಹಾನಿಗೀಡಾದ ಕುಟುಂಬದ ಸದಸ್ಯರಿಗೆ ತಕ್ಷಣ ರೂ.10 ಸಾವಿರ ರೂ. ಪರಿಹಾರ ಧನ ನೀಡಲಾಗುವುದು. ಯಡ್ರಾಮಿ ಹಾಗೂ ಜೇವರ್ಗಿ ತಾಲೂಕಿನಲ್ಲಿ ಕಳೆದ ವರ್ಷ ಭೀಮಾನದಿ ಪ್ರವಾಹದಿಂದ ಹಾಗೂ ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾದ 24,999 ರೈತರಿಗೆ 31.4ಕೋಟಿ ರೂ. ಬೆಳೆಹಾನಿ ಪರಿಹಾರ ನೀಡಲಾಗಿದೆ. 729 ರೈತರಿಗೆ ತಾಂತ್ರಿಕ ಕಾರಣದಿಂದ ಪರಿಹಾರ ಧನ ಬಿಡುಗಡೆಯಾಗಿಲ್ಲ. ಸಂಬಂಧಪಟ್ಟ ಕಂದಾಯ ಇಲಾಖೆ ಅಧಿಕಾರಿಗಳು ಪರಿಹಾರ ದೊರೆಯದ ರೈತರಿಗೆ ಪರಿಹಾರ ಸಿಗುವಂತೆ ಮಾಡಬೇಕು ಎಂದು ಸೂಚಿಸಿದರು.

ಪಟ್ಟಣದ ಬುಟ್ನಾಳ ರಸ್ತೆಯಲ್ಲಿರುವ ಸಾರ್ವಜನಿಕ ಸ್ಮಶಾನ ಭೂಮಿಗೆ ತೆರಳಲು ರಸ್ತೆ ಸಮಸ್ಯೆ ಉಂಟಾಗಿದ್ದು, ಸ್ಮಶಾನ ಭೂಮಿಗೆ ತೆರಳಲು ಯಾರಾದ್ರೂ ಅಡ್ಡಿಪಡಿಸಿದರೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ತಹಶೀಲ್ದಾರ್‌ ಖುದ್ದು ಸ್ಥಳಕ್ಕೆ ಭೇಟಿ ನೀಡಿ ರಸ್ತೆ ಸಮಸ್ಯೆ ಬಗೆಹರಿಸಬೇಕು ಎಂದು ತಹಶೀಲ್ದಾರ್‌ ದಾಸರಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

ನರಿಬೋಳ ಭೇಟಿ: ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಜಿಲ್ಲಾ ಧಿಕಾರಿ ಯಶವಂತ ಗುರುಕರ ಅವರನ್ನು ಭೇಟಿ ಮಾಡಿ ತಾಲೂಕಿನ ರೈತರ ಸಮಸ್ಯೆ ಕುರಿತು ಚರ್ಚಿಸಿ ಭೀಮಾನದಿ ಪ್ರವಾಹದಿಂದ ಹಾಗೂ ಅತಿವೃಷ್ಟಿಯಿಂದ ಬೆಳೆ ಹಾನಿಗೀಡಾದ ರೈತರಿಗೆ ಶೀಘ್ರದಲ್ಲಿ ಪರಿಹಾರ ಹಣ ಬಿಡುಗಡೆಗೆ ಒತ್ತಾಯಿಸಿದರು.

ತಹಶೀಲ್ದಾರ್‌ ಸಂಜೀವಕುಮಾರ ದಾಸರ್‌, ಗ್ರೇಡ್‌-2 ತಹಶೀಲ್ದಾರ್‌ ಡಾ| ರಮೇಶ ಹಾಲು, ಸಮಾಜ ಕಲ್ಯಾಣ ಇಲಾಖೆಯ ಅಶೋಕ ನಾಯಕ, ಅಬಕಾರಿ ನಿರೀಕ್ಷಕಿ ವನಿತಾ ಸೀತಾಳೆ, ಕೃಷಿ ಇಲಾಖೆಯ ಶರಣಗೌಡ ರಂಗಣಗೌಡ, ಟಿಎಚ್‌ಒ ಡಾ| ಸಿದ್ಧು ಪಾಟೀಲ, ಸಿಪಿಐ ಶಿವಪ್ರದಾಸ ಮಠದ್‌, ಸಿಡಿಪಿಒ ದೀಪಿಕಾ, ಪುರಸಭೆ ಮುಖ್ಯಾಧಿಕಾರಿ ಶರಣಯ್ಯಸ್ವಾಮಿ, ಡಿ.ಬಿ.ಪಾಟೀಲ, ಪಶು ಇಲಾಖೆ, ತೋಟಗಾರಿಕೆ, ಅರಣ್ಯ ಇಲಾಖೆ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್‌: ಛಲವಾದಿ

Contracters-Assoi

Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.