ಕೃಷ್ಣೆಗೆ ಹರಿದ ನೀರು; ಸದ್ಯಕ್ಕಿಲ್ಲ ಪ್ರವಾಹ ಭೀತಿ
Team Udayavani, Jul 14, 2022, 4:01 PM IST
ರಬಕವಿ-ಬನಹಟ್ಟಿ: ಮಹಾರಾಷ್ಟ್ರದ ಜಲಾನಯನ ಪ್ರದೇಶಗಳಲ್ಲಿ ವರುಣಾರ್ಭಟ ಹೆಚ್ಚಾಗಿದ್ದು ರಬಕವಿ-ಬನಹಟ್ಟಿ ಸಮೀಪದ ಕೃಷ್ಣಾ ನದಿ ನೀರಿನ ಒಳ ಹರಿವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಬಕವಿ-ಬನಹಟ್ಟಿ ತಹಶೀಲ್ದಾರ್ ಎಸ್.ಬಿ. ಇಂಗಳೆ ಬುಧವಾರ ಹಿಪ್ಪರಗಿ ಜಲಾಶಯಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ನೀರಿನ ಪರಿಸ್ಥಿತಿ ಅವಲೋಕಿಸಿದರು.
ನಂತರ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಹಿಪ್ಪರಗಿ ಜಲಾಶಯಕ್ಕೆ ಸಂಜೆ 1.9 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, 1.2 ಲಕ್ಷ ಕ್ಯೂಸೆಕ್ ನೀರು ಹೊರಬಿಡಲಾಗುತ್ತಿದೆ. ನೀರಿನ ಮಟ್ಟ 521.70 ಮೀ. ಇದೆ. ಮಹಾರಾಷ್ಟ್ರದ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ನೀರಿನ ಪ್ರಮಾಣ ಹೆಚ್ಚಾಗುತ್ತಿದ್ದು, ಸದ್ಯಕ್ಕೆ ಯಾವುದೇ ಪ್ರವಾಹದ ಭೀತಿ ಇಲ್ಲ. ನಮ್ಮ ಅಧಿಕಾರಿಗಳು ಮಹಾರಾಷ್ಟ್ರದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಪ್ರತಿದಿನ ಅಲ್ಲಿ ಆಗುವ ಮಳೆ ಹಾಗೂ ಅಲ್ಲಿನ ಬ್ಯಾರೇಜ್ ಗಳಿಂದ ಬಿಡುವ ನೀರಿನ ಬಗ್ಗೆ ಮಾಹಿತಿ ಪಡೆದು ನಿಗಾ ವಹಿಸುತ್ತಿದ್ದಾರೆ. ಸುರಕ್ಷತಾ ದೃಷ್ಟಿಯಿಂದ ನದಿ ಪಾತ್ರದ ಜನರು ತಮ್ಮ ಜಾನುವಾರುಗಳನ್ನು ಸುರಕ್ಷತಾ ಸ್ಥಳಗಳಿಗೆ ತೆಗೆದುಕೊಂಡು ಹೋಗಬೇಕು ಎಂದು ತಿಳಿಸಿದರು.
ನದಿ ಪಾತ್ರದ ಪ್ರತಿ ಗ್ರಾಮದಲ್ಲಿಯೂ ಒಬ್ಬ ನೋಡಲ್ ಅಧಿಕಾರಿ ನೇಮಿಸಲಾಗಿದೆ. ಪ್ರತಿ ಗಂಟೆಗೊಮ್ಮೆ ನೀರಿನ ಏರಿಳಿತಗಳ ಬಗ್ಗೆ ತಾಲೂಕು ಆಡಳಿತ ಮಾಹಿತಿ ಕಲೆ ಹಾಕುತ್ತಿದೆ. ಪ್ರವಾಹ ಭೀತಿ ಸದ್ಯಕ್ಕಿಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ತಾಲೂಕು ಆಡಳಿತ ಪ್ರವಾಹ ಮುನ್ನೆಚ್ಚರಿಕಾ ಕ್ರಮ ತೆಗೆದುಕೊಂಡಿದ್ದು ಸಮರ್ಥವಾಗಿ ಎದುರಿಸಲಿದೆ ಎಂದರು.
ಈ ವೇಳೆ ಹಿಪ್ಪರಗಿ ಜಲಾಶಯದ ಸಹಾಯಕ ಅಭಿಯಂತರ ವಿಠ್ಠಲ ನಾಯಕ, ತಾಲೂಕು ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿ ಸೇರಿದಂತೆ ಕಂದಾಯ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.