ಸಿದ್ದರಾಮಯ್ಯ ‘ದಲಿತ ಮಾತ್ರವಲ್ಲ, ಲಿಂಗಾಯತರ ವಿರೋಧಿ’: ಛಲವಾದಿ ನಾರಾಯಣಸ್ವಾಮಿ

ರಾಹುಲ್ ಗಾಂಧಿ ಸಿದ್ದರಾಮೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರೆ...

Team Udayavani, Jul 14, 2022, 6:41 PM IST

chalavadi

ಬೆಂಗಳೂರು: ಕಾಂಗ್ರೆಸ್ ಪಕ್ಷ ವಿನಾಶದತ್ತ ನಡೆದಿದೆ. ರಾಹುಲ್ ಗಾಂಧಿಯವರು ಸಿದ್ದರಾಮೋತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರೆ ಆ ಪಕ್ಷ ಎಷ್ಟು ದುರ್ಬಲವಾಗಿದೆ ಎಂಬುದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ಆದ್ದರಿಂದ ಆ ಪಕ್ಷ ಬಿಟ್ಟು ಎಲ್ಲರೂ ದೂರ ಸರಿಯಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾಂಗ್ರೆಸ್ ಪಕ್ಷದ ರಾಜ್ಯದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಈಗ ಕೇವಲ ರಬ್ಬರ್ ಸ್ಟಾಂಪ್ ಆಗಿ ಉಳಿದಿದ್ದಾರೆ ಎಂದು ಟೀಕಿಸಿದರು.

ಸಿದ್ದರಾಮಯ್ಯರನ್ನು ಕಂಡರೆ ಕಾಂಗ್ರೆಸ್ ಬೆಚ್ಚಿಬೀಳುತ್ತಿದೆ. ಅವರನ್ನು ವಿರೋಧಿಸಿದರೆ ನಮ್ಮ ಭವಿಷ್ಯ ಏನಾದೀತು ಎಂಬ ಭಯ ಕಾಂಗ್ರೆಸ್ ನಾಯಕರಲ್ಲಿದೆ. ಸಿದ್ದರಾಮಯ್ಯರದು ದೇವರಾಜ ಅರಸರನ್ನು ಮೀರಿಸಿದ ನಾಯಕತ್ವ ಎಂದು ಕಾಂಗ್ರೆಸ್‍ನ ಡಾ. ಪರಮೇಶ್ವರ್ ಹೇಳಿದ್ದಾರೆ. ಇದು ಬಿಸಿಹಾಲು ಕುಡಿದು ಮೂತಿ ಸುಟ್ಟುಕೊಂಡ ಬೀರಬಲ್ಲನ ಬೆಕ್ಕಿನ ಕಥೆಯಂತಿದೆ ಎಂದು ವಿಶ್ಲೇಷಿಸಿದರು. ಡಾ. ಪರಮೇಶ್ವರ್ ಸೇರಿ ಕಾಂಗ್ರೆಸ್ ನಾಯಕರು ಮೂತಿ ಸುಟ್ಟ ಬೆಕ್ಕಿನಂತೆ ಸಿದ್ದರಾಮಯ್ಯರ ಓಲೈಕೆ ಮಾಡುತ್ತಿದ್ದಾರೆ ಎಂದರು.

ಒಂದೆಡೆ ಸಿದ್ದರಾಮೋತ್ಸವ, ಇನ್ನೊಂದೆಡೆ ಶಿವಕುಮಾರೋತ್ಸವ ಹೀಗೆ ಅನೇಕ ಉತ್ಸವಗಳನ್ನು ನಡೆಸಲು ಕಾಂಗ್ರೆಸ್ ಮುಂದಾಗಿದೆ. ಅವರೇನು ಮಾಡಿದರೂ ಅದು ಪಕ್ಷದ ಆಂತರಿಕ ವಿಚಾರ. ಆದರೂ ಒಂದು ರಾಜಕೀಯ ಪಕ್ಷವಾಗಿ ಜನರಿಗೆ ಯಾವ ರೀತಿಯ ಸಂದೇಶ ಕೊಡುತ್ತಿದ್ದಾರೆ ಎಂಬುದು ಮುಖ್ಯವಾಗುತ್ತದೆ ಎಂದರು.

ಶಕ್ತಿಹೀನ ಕಾಂಗ್ರೆಸ್ ಹೈಕಮಾಂಡ್

ಹಿಂದಿನ ದಿನಗಳಲ್ಲಿ ಉತ್ಸವಗಳು ಗಾಂಧಿ ಕುಟುಂಬಕ್ಕೆ ಸೀಮಿತವಾಗಿದ್ದವು. ವಿ.ಪಿ.ಸಿಂಗ್ ಅವರು ರಾಜೀವ್ ಗಾಂಧಿಯವರನ್ನು ಮೀರಿಸುವ ಸಾಧ್ಯತೆ ಗಮನಿಸಿ ಅವರಿಗೂ ಚಿತ್ರಹಿಂಸೆ ಕೊಡಲಾಗಿತ್ತು. ಸಿದ್ದರಾಮೋತ್ಸವದ ಮೂಲಕ ಕಾಂಗ್ರೆಸ್ ಉಳಿಯಲು ಬಯಸುತ್ತಿದೆ ಎಂದರೆ ಕಾಂಗ್ರೆಸ್ ಸ್ಥಿತಿ ಎಷ್ಟು ಚಿಂತಾಜಕವಾಗಿದೆ ಎಂಬುದು ಸ್ಪಷ್ಟವಾಗುತ್ತದೆ ಎಂದು ತಿಳಿಸಿದರು. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯರಿಗೆ ಶರಣಾಗಿದೆ. ಹೈಕಮಾಂಡ್ ತನ್ನೆಲ್ಲ ಶಕ್ತಿಯನ್ನು ಕಳೆದುಕೊಂಡಿದೆ. ಕಾಂಗ್ರೆಸ್ ಸಂಪೂರ್ಣ ಕುಸಿದಿರುವುದಕ್ಕೆ ಇದು ಸ್ಪಷ್ಟ ನಿದರ್ಶನ. ಜನರ ಆಶೋತ್ತರಗಳನ್ನು ಈಡೇರಿಸಲು ಅದಕ್ಕೆ ಶಕ್ತಿ ಇಲ್ಲ ಎಂದು ಆರೋಪಿಸಿದರು.

ದಿವಂಗತ ಎಸ್.ಬಂಗಾರಪ್ಪ ಅವರು ಹಿಂದೆ ಮುಖ್ಯಮಂತ್ರಿಯಾಗಿದ್ದ 1990ನೇ ದಶಕದಲ್ಲಿ ಕಾಂಗ್ರೆಸ್ ಹೈಕಮಾಂಡನ್ನು ಮುಟ್ಟಲಾಗದ ಸ್ಥಿತಿ ಇತ್ತು. ಮುಖ್ಯಮಂತ್ರಿಯಾಗಿ 2 ವರ್ಷ ಪೂರೈಸಿದ ಸಂದರ್ಭದಲ್ಲಿ ಒಂದು ದೊಡ್ಡ ಆಂದೋಲನವನ್ನು ಬಂಗಾರಪ್ಪ ಅವರು ಮಾಡಿದ್ದರು. ಲಕ್ಷಗಟ್ಟಲೆ ಜನ ಅದರಲ್ಲಿ ಸೇರಿದ್ದರು. ಅದು ಕಾಂಗ್ರೆಸ್ ಉತ್ಸವ ಆಗಿರಲಿಲ್ಲ, ಬಂಗಾರಪ್ಪ ಅವರ ಉತ್ಸವವಾಗಿತ್ತು. ಇದನ್ನು ಗಮನಿಸಿದ ಹೈಕಮಾಂಡ್ ಬಂಗಾರಪ್ಪ ಅವರನ್ನು ಒಂದೇ ತಿಂಗಳಲ್ಲಿ ಅವರಿಗೆ ಹಿಂಸೆ ಕೊಟ್ಟು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿತ್ತು. ಹೈಕಮಾಂಡ್ ಮೀರಿದ ವ್ಯಕ್ತಿತ್ವ ಎಲ್ಲೂ ವೈಯಕ್ತಿಕವಾಗಿ ಬೆಳೆಯಬಾರದೆಂಬ ಸಿದ್ಧಾಂತ ಕಾಂಗ್ರೆಸ್‍ನದ್ದಾಗಿತ್ತು ಎಂದರು.

ಸಿದ್ದರಾಮಯ್ಯ ಕೇವಲ ದಲಿತ ವಿರೋಧಿಯಲ್ಲ. ಅವರು ಲಿಂಗಾಯತರ ವಿರೋಧಿಯೂ ಆಗಿದ್ದಾರೆ. ಗೌಡರ, ಒಕ್ಕಲಿಗರ ವಿರೋಧಿ. ಮಾಜಿ ಪ್ರಧಾನಿ ದೇವೇಗೌಡರನ್ನು 4 ಜನರು ಒಯ್ಯುವ ಕಾಲ ಬರಲಿದೆ ಎಂದು ರಾಜಣ್ಣ ಹೇಳಿದರು. ಅಂಥ ವ್ಯಕ್ತಿಯನ್ನು ಸಿದ್ದರಾಮೋತ್ಸವದ ಅಧ್ಯಕ್ಷರಾಗಿ ಮಾಡಿದ್ದಾರೆ.  ಇದರ ಅರ್ಥ ಏನು? ಸಿದ್ದರಾಮಯ್ಯನವರೇ ಈ ಹೇಳಿಕೆ ಕೊಡಿಸಿರಬಹುದೇ ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ, ದೇವೇಗೌಡರ ಸಾವು ಬಯಸುವವರು. ಹಿತ ಬಯಸುವ ವ್ಯಕ್ತಿಯಲ್ಲ. ಕಾಂಗ್ರೆಸ್‍ನವರು ತಮ್ಮ ಗುಂಡಿಯನ್ನು ತಾವೇ ತೋಡಿಕೊಳ್ಳುತ್ತಿದ್ದಾರೆ, ದೇವೇಗೌಡರಿಗೆ ಇನ್ನಷ್ಟು ಆರೋಗ್ಯ ಮತ್ತು ಆಯುಷ್ಯವನ್ನು ದೇವರು ದಯಪಾಲಿಸಲಿ. ಅವರಿಗೆ ಇನ್ನಷ್ಟು ಜನಸೇವೆಯ ಭಾಗ್ಯ ಸಿಗಲಿ. ನಾವು ಎಲ್ಲರ ಹಿತ ಬಯಸುವವರು ಎಂದರು.

ಸಿದ್ದರಾಮಯ್ಯನವರು ತಮ್ಮ ಅಧಿಕಾರದ ಅವಧಿಯಲ್ಲಿ ಎಸ್‍ಸಿ, ಎಸ್‍ಟಿಗಳ ಅಭಿವೃದ್ಧಿಗೆ 24 ಸಾವಿರ ಕೋಟಿ ಕೊಡುವುದಾಗಿ ಹೇಳಿದ್ದರು. ಕೊಟ್ಟ ಮೊತ್ತದಲ್ಲಿ ಮೆಟ್ರೊ, ಪಿಡ್ಲ್ಯುಡಿಗೆ ಹಣ ಖರ್ಚು ಮಾಡಿದ್ದರು. ಇವುಗಳು ದಲಿತರವೇ ಎಂದು ಕೇಳಿದರು. ಈ ದುಡ್ಡನ್ನು ಸಿದ್ದರಾಮಯ್ಯ ಬೇರೆ ಉದ್ದೇಶಕ್ಕೆ ಕೊಟ್ಟಾಗ ಮಾತನಾಡದ ಕಾಂಗ್ರೆಸ್ ಪಕ್ಷದ ಧ್ರುವನಾರಾಯಣ್ ಆಗ ಕಡ್ಲೆಪುರಿ ತಿನ್ನುತ್ತಿದ್ದರೇ ಎಂದು ಪ್ರಶ್ನಿಸಿದರು. ಧ್ರುವನಾರಾಯಣ್ ಅವರೂ ದಲಿತ ನಾಯಕರೇ ಆಗಿದ್ದಾರೆ. ಸಿದ್ದರಾಮಯ್ಯನವರು ದಲಿತರಿಗೆ ಕೇವಲ ಮೂಗಿಗೆ ತುಪ್ಪ ಸವರುವ ಕೆಲಸವನ್ನಷ್ಟೇ ಮಾಡಿದವರು ಎಂದು ಟೀಕಿಸಿದರು. ಸಿದ್ದರಾಮಯ್ಯ ಕೇವಲ ಸುಳ್ಳು ಹೇಳುತ್ತಾರೆ ಎಂದು ಆಕ್ಷೇಪಿಸಿದರು.

ರಾಜ್ಯದ ಬಿಜೆಪಿ ಸರಕಾರವು ಎಸ್‍ಸಿ, ಎಸ್‍ಟಿಗಳಿಗೆ 28 ಸಾವಿರ ಕೋಟಿ ಹಣ ನೀಡಿದೆ. ಆ ಹಣವನ್ನು ಬೇರೆ ಅಭಿವೃದ್ಧಿ ಕಾರ್ಯಕ್ಕೆ ವರ್ಗಾವಣೆ ಮಾಡಿಲ್ಲ ಎಂದೂ ಅವರು ವಿವರಿಸಿದರು.

ಟಾಪ್ ನ್ಯೂಸ್

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Congress-Symbol

Congress Government: ಮೇಲ್ಮನೆ ನಾಮನಿರ್ದೇಶನ: ಕಾಂಗ್ರೆಸ್‌ನಲ್ಲಿ ಲಾಬಿ ಆರಂಭ

Yatindra

Congress; ನಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ: ಯತೀಂದ್ರ ಸಿದ್ದರಾಮಯ್ಯ

IMD

Temperature; ಮುಂದಿನ 20 ವರ್ಷ ಮಳೆ ಜಾಸ್ತಿ, ಉಷ್ಣಾಂಶ ಏರಿಕೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.