ಭಿಕ್ಷಾಟನೆ ನಿರ್ಮೂಲನೆಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸೂಚನೆ
Team Udayavani, Jul 14, 2022, 8:57 PM IST
ಬೆಂಗಳೂರು: ರಾಜ್ಯದಲ್ಲಿ ಭಿಕ್ಷಾಟನೆ ಹೆಸರಿನಲ್ಲಿ ಸಾರ್ವನಿಕ ಸ್ಥಳದಲ್ಲಿ ಸಾರ್ವಜನಿಕರು ಕಿರಿಕಿರಿ ಅನುಭವಿಸಿ ತಪ್ಪಿಸಿ ಭಿಕ್ಷಾಟನೆ ನಿರ್ಮೂಲನೆಗೆ ಕ್ರಮ ಕೈಗೊಳ್ಳುವಂತೆ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದ್ದಾರೆ.
ಗುರುವಾರ ವಿಕಾಸಸೌಧದಲ್ಲಿ ಈ ಕುರಿತು ಸಭೆ ನಡೆಸಿದ ಅವರು, ನಗರ ಮತ್ತು ಅರೆ ನಗರ ಪ್ರದೇಶಗಳಲ್ಲಿ ಮಕ್ಕಳನ್ನು ಎತ್ತಿಕೊಂಡು ಭಿಕ್ಷಾಟನೆಯಲ್ಲಿ ತೊಡಗಿರುವ ಮಹಿಳೆಯರು, ದೌರ್ಜನ್ಯಕ್ಕೊಳಗಾದ ಬೀದಿಯ ಮಕ್ಕಳು, ವಲಸೆ ಬಂದ ಅನಾಥ ಮಕ್ಕಳು ಸೇರಿದಂತೆ ಅನೇಕರು ನಿರಂತರ ಬಿಕ್ಷಾಟನೆಯಲ್ಲಿ ತೊಡಗಿದ್ದು, ಜನಸಂದಣಿಯ ಪ್ರದೇಶಗಳಲ್ಲಿ ತೃತಿಯಲಿಂಗಿಗಳು ಸೇರಿದಂತೆ ವಯಸ್ಕರು ಮತ್ತು ವೃದ್ಧರು ಬಿಕ್ಷಾಟನೆ ಮಾಡುತ್ತಿರುವುದು ಸಾರ್ವಜನಿಕರಿಗೆ ನಿರಂತರ ಸಮಸ್ಯೆ ಉಂಟಾಗುತ್ತಿದ್ದು, ಭಿಕ್ಷಾಟನೆ ತಡೆಗಟ್ಟುವ ಕುರಿತು ಮಕ್ಕಳ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಮಹಾನಗರ ಪಾಲಿಕೆ ಅಧಿಕಾರಿಗಳು ಜತೆಗೂಡಿ ಕೆಲಸ ಮಾಡಬೇಕು ಎಂದು ನಿರ್ದೇಶನ ನೀಡಿದರು.
ಭಿಕ್ಷಾಟನೆಯಲ್ಲಿ ತಾಯಿ ಮತ್ತು ಮಗು ಅಥವಾ ಮಗುವಿನೊಂದಿಗೆ ಮಹಿಳೆಯ ಯಾ ವ್ಯಕ್ತಿ ಇದ್ದಲ್ಲಿ ಮಕ್ಕಳ ಕಲ್ಯಾಣ ಇಲಾಖೆ ಕ್ರಮ ಜರುಗಿಸುವುದು ಹಾಗೂ ಕೂಡಲೇ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿ ಪುರ್ನ ವಸತಿ ಕಲ್ಪಿಸಬೇಕು, ಮಕ್ಕಳನ್ನು ಭಿಕ್ಷಾಟನೆಗೆ ದೂಡುವ ಯಾವುದೇ ವ್ಯಕ್ತಿಗಳ ಮೇಲೆ ಕಠಿಣ ಕ್ರಮ ಜರುಗಿಸಬೇಕು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮಕ್ಕಳ ರಕ್ಷಣಾ ಸಮಿತಿ ಸಮಪರ್ಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಬೇಕೆಂದು ತಿಳಿಸಿದರು.
ಬೆಂಗಳೂರು ನಗರದಲ್ಲಿರುವ ಮೇಲ್ಸೇತುವೆ, ವಿವಿಧ ಸಿಗ್ನಲ್‌ಗಳು, ಪ್ರಮುಖ ದೇವಾಲಯಗಳ ಮುಂಭಾಗ, ಎಲೆಕ್ಟ್ರಾನಿಕ್ ಸಿಟಿ ಸಹಿತ ವಿವಿಧ ಟೋಲ್ ಗೇಟ್‌ಗಳು, ಮಾರ್ಕೆಟ್ ಮುಂತಾದವುಗಳನ್ನು ಗುರುತಿಸಿ ಮಕ್ಕಳ ರಕ್ಷಣೆ ಕಾರ್ಯಚರಣೆಗೆ ಇಳಿಯಲು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್, ಆಯುಕ್ತ ರಾಕೇಶ್ ಕುಮಾರ್, ಇಲಾಖೆಯ ಸಲಹೆಗಾರ ವೆಂಕಟಯ್ಯ, ಮಕ್ಕಳ ರಕ್ಷಣಾ ನಿರ್ದೇಶನಾಲಯದ ನಿರ್ದೇಶಕಿ ಲತಾ ಕುಮಾರಿ, ನಗರಾಭಿವೃದ್ಧಿ ಇಲಾಖೆಯ ಲತಾ, ಐಸೇಕ್ ಪ್ರತಿನಿಧಿ ದಾಸನೂರು ಕೂಸಣ್ಣ, ಕೇಂದ್ರ ಪರಿಹಾರ ಸಮಿತಿಯ ಕಾಯದರ್ಶಿ ಅರ್ಚನಾ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.