ದಕ್ಷಿಣದಲ್ಲಿ ಹೆಚ್ಚಿದ ವರ್ಷ ಪ್ರಕೋಪ
Team Udayavani, Jul 15, 2022, 7:15 AM IST
ಹೊಸದಿಲ್ಲಿ: ಕೇರಳ, ತೆಲಂಗಾಣ, ಆಂಧ್ರಪ್ರದೇಶ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಹೆಚ್ಚಿದೆ. ಭಾರೀ ಮಳೆಯಿಂದಾಗಿ ಕೇರಳದ ನದಿಗಳು ಉಕ್ಕಿ ಹರಿಯಲಾರಂಭಿಸಿದ್ದು, ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕಾಸರಗೋಡು, ಕಲ್ಲಿಕೋಟೆ ಮತ್ತು ವಯನಾಡ್ ಜಿಲ್ಲೆಯ ವಿವಿಧ ಭಾಗಗಳಲ್ಲಿ ನದಿಗಳು ಉಕ್ಕೇರಿ ಹರಿದಿದೆ ಮತ್ತು ವಿವಿಧೆಡೆ ನೀರಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದ 427 ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ತೆಲಂಗಾಣದಲ್ಲಿಯೂ ಮಳೆಯ ಆರ್ಭಟ ಹೆಚ್ಚಿದ್ದು, 19,000ಕ್ಕೂ ಅಧಿಕ ಮಂದಿ ತಾತ್ಕಾಲಿಕ ಶಿಬಿರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಅಲ್ಲಿ 18ರ ವರೆಗೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಸಿದೆ.
ಆಂಧ್ರಪ್ರದೇಶದಲ್ಲೂ ಮಳೆ ಹೆಚ್ಚಾಗಿದ್ದು, ಹಲವು ಅಣೆಕಟ್ಟುಗಳು ತುಂಬುವ ಹಂತದಲ್ಲಿವೆ. ದೌಲೇಶ್ವರ ಅಣೆಕಟ್ಟು ಮತ್ತು ಭದ್ರಾಚಲಂ ಅಣೆಕಟ್ಟಿನಿಂದ ದೊಡ್ಡ ಪ್ರಮಾಣದಲ್ಲಿ ನೀರನ್ನು ಹೊರಬಿಡಲಾಗುತ್ತಿದೆ. ಮಹಾರಾಷ್ಟ್ರದ ಗಡ್ಚಿರೋಲಿ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾದ ಹಿನ್ನೆಲೆ 29 ಗ್ರಾಮಗಳ 3,000 ಜನರನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.
ಗುಜರಾತ್ನ ನವ್ಸಾರಿ ಜಿಲ್ಲೆಯಲ್ಲೂ ಗುರುವಾರ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದವು. 100ಕ್ಕೂ ಅಧಿಕ ಮಂದಿಯನ್ನು ಅಧಿಕಾರಿಗಳು ಸ್ಥಳಾಂತರಗೊಳಿಸಿದ್ದಾರೆ. ವನ್ಸದ ತಾಲೂಕಿನಲ್ಲಿ ಬರೋಬ್ಬರಿ 394 ಮಿ.ಮೀ. ಮಳೆಯಾಗಿದೆ. ತಪಿ ಮತ್ತು ವಡೋದರ ಜಿಲ್ಲೆಯಲ್ಲಿ ನೆರೆಯಲ್ಲಿ ಸಿಲುಕಿದ್ದ 45 ಮಂದಿಯನ್ನು ಎನ್ಡಿಆರ್ಎಫ್ ತಂಡ ರಕ್ಷಿಸಿದೆ.
ರಾಜಸ್ಥಾನದ ಹಲವೆಡೆ ಭಾರೀ ಮಳೆ ಸುರಿದಿದೆ. ಜಲಾವರದ ದಗ್ ಪ್ರದೇಶದಲ್ಲಿ 140ಸೆಂ.ಮೀ. ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.