ಭಾರೀ ಮಳೆ: ಮನೆ ಗೋಡೆ ಕುಸಿದು ಬಾಲಕ ಸಾವು; ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ
Team Udayavani, Jul 15, 2022, 10:07 AM IST
ಬೆಳಗಾವಿ: ಜಿಲ್ಲೆಯಲ್ಲಿ ನಿರಂತವಾಗಿ ಮಳೆ ಸುರಿಯುತ್ತಿದ್ದು, ಖಾನಾಪುರ ತಾಲೂಕಿನ ಲಿಂಗನಮಠ ಎಂಬ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಬಾಲಕನೋರ್ವ ಮೃತಪಟ್ಟ ಘಟನೆ ಗುರುವಾರ ತಡರಾತ್ರಿ ನಡೆದಿದೆ.
ಖಾನಾಪುರ ತಾಲೂಕಿನ ಲಿಂಗನಮಠ ಎಂಬ ಗ್ರಾಮದ ನಿವಾಸಿ ಅನಂತು ಪಾಶೆಟ್ಟಿ(15) ಮೃತ ಬಾಲಕ.
ಗುರುವಾರ ರಾತ್ರಿ ಅನಂತು, ಮನೆಯ ಪಕ್ಕದಲ್ಲಿ ಹಸುವಿಗೆ ಮೇವು ಹಾಕಲು ತೆರಳಿದ್ದ ವೇಳೆ ಗೋಡೆ ಕುಸಿದು ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಮಹಾರಾಷ್ಟ್ರದಲ್ಲಿ ಭಾರೀ ಮಳೆ: ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ
ಈ ಮಧ್ಯೆ ಮಹಾರಾಷ್ಟ್ರದಲ್ಲಿ ವ್ಯಾಪಕ ಮಳೆ ಮುಂದುವರಿದಿದ್ದು ಕೃಷ್ಣಾ ದೂದಗಂಗಾ, ವೇದಗಂಗಾ ಹಾಗೂ ಘಟಪ್ರಭಾ ನದಿಗಳ ಒಳಹರಿವಿನಲ್ಲಿ ಮತ್ತಷ್ಟು ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿಯ ಮಳೆಯಿಂದ ಈಗ ಕೃಷ್ಣಾ ನದಿಗೆ ಒಟ್ಟು 1.26 ಲಕ್ಷ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಇದೇ ವೇಳೆ ಹಿಪ್ಪರಗಿ ಜಲಾಶಯದಿಂದ 1. 20 ಲಕ್ಷ ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗುತ್ತಿದೆ.
ಘಟಪ್ರಭಾ ನದಿ ವ್ಯಾಪ್ತಿಯ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿದ್ದು, ಹಿಡಕಲ್ ಜಲಾಶಯಕ್ಕೆ ಈಗ 25 ಸಾವಿರ ಕ್ಯೂಸೆಕ್ಸ್ ನೀರು ಬರುತ್ತಿದೆ. ಇದರಿಂದ ಜಲಾಶಯದಲ್ಲಿ ಒಂದೇ ದಿನ ಐದು ಅಡಿ ಏರಿಕೆಯಾಗಿದೆ. ಒಟ್ಟು 2175 ಅಡಿ ಸಾಮಥ್ಯದ 9 ಜಲಾಶಯದಲ್ಲಿ ಈಗ 2132 ಅಡಿ ನೀರು ಸಂಗ್ರಹವಾಗಿದೆ. ಇನ್ನು ಖಾನಾಪುರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದ್ದು ಮಲಪ್ರಭಾ ಜಲಾಶಯಕ್ಕೆ 15 ಸಾವಿರ ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. ಒಟ್ಟು 2079 ಅಡಿ ಸಾಮಥ್ಯ ೯ದ ಜಲಾಶಯದಲ್ಲಿ ಈಗ 2062 ಅಡಿ ನೀರು ಸಂಗ್ರಹವಾಗಿದೆ.
ಇದನ್ನೂ ಓದಿ: ಮಣಿಪಾಲ: ಬೆಂಕಿಗಾಹುತಿಯಾದ ಫ್ಯಾಮಿಲಿ ರೆಸ್ಟೋರೆಂಟ್
ಶುಕ್ರವಾರ, ಶನಿವಾರ ಶಾಲೆಗಳಿಗೆ ರಜೆ ಘೋಷಣೆ
ಕಳೆದ ಒಂದು ವಾರದಿಂದ ಬೆಳಗಾವಿ ಹಾಗೂ ಖಾನಾಪುರ ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶುಕ್ರವಾರ ಹಾಗೂ ಶನಿವಾರ ಪ್ರಾಥಮಿಕ ಶಾಲೆ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.