ಬೀದಿ ನಾಯಿಗಳ ಅನ್ನದಾತನಿಗೆ ಆರ್ಥಿಕ ಸಂಕಷ್ಟ
Team Udayavani, Jul 15, 2022, 2:28 PM IST
ಪುತ್ತೂರು: ಕಳೆದ 15 ವರ್ಷಗಳಿಂದ ಬೀದಿ ನಾಯಿಗಳ ಅನ್ನದಾತರಾಗಿರುವ ದಾನಿಯೊಬ್ಬರು ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.
ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು ಇದೀಗ ನಾಯಿಗಳ ಆರೈಕೆಗಾಗಿ ದಾನಿಗಳ ಸಹಾಯ ಯಾಚಿಸುತ್ತಿದ್ದಾರೆ. ಪ್ರತಿದಿನವೂ 150 ಕ್ಕೂ ಮಿಕ್ಕಿದ ನಾಯಿಗಳಿಗೆ ಆಹಾರ ಸೇರಿದಂತೆ ಆರೋಗ್ಯವನ್ನೂ ನೋಡಿಕೊಳ್ಳುತ್ತಿರುವ ಇವರು ದಿನವೊಂದಕ್ಕೆ ನಾಯಿಗಳಿಗಾಗಿ 1500 ರೂಪಾಯಿಗಳನ್ನು ವ್ಯಯಿಸಬೇಕಾದ ಅನಿವಾರ್ಯತೆಯಲ್ಲಿದ್ದಾರೆ. ನಾಯಿಗಳ ಸಂಕಷ್ಟ ತಾಳಲಾರದೆ ಅನ್ನ ನೀಡುವ ಕಾರ್ಯವನ್ನು ಆರಂಭಿಸಿರುವ ರಾಜೇಶ್ ಬನ್ನೂರು ಆಹಾರ ನೀಡುವ ಕೆಲಸವನ್ನು ನಿಲ್ಲಿಸಲು ತೀರ್ಮಾನಿಸಿದ್ದಾರೆ.
ಸಾಕು ಪ್ರಾಣಿಗಳನ್ನು ಸಾಕುವ ಜನರ ನಿರ್ಲಕ್ಷ್ಯದಿಂದಾಗಿ ಬೀದಿಗೆ ಬೀಳುವ ನಾಯಿಗಳನ್ನು ಕಂಡು ಕಾಣದಂತೆಯೇ ಇರುವವರು ಹೆಚ್ಚು. ಆದರೆ ರಕ್ಷಿತ್ ಶೆಟ್ಟಿಯವರ ಚಾರ್ಲಿ 777 ಚಲನಚಿತ್ರ ತೆರೆಗೆ ಬಂದ ಬಳಿಕ ನಾಯಿಗಳ ಮೇಲಿನ ಕಾಳಜಿ ಕೊಂಚ ಹೆಚ್ಚಾಗಿದೆ ಎಂದರೆ ತಪ್ಪಾಗಲಾರದು. ಆದರೆ ಚಾರ್ಲಿ ಸಿನಿಮಾ ಬರುವ ಮೊದಲೇ ಅಂದರೆ ಸುಮಾರು 15 ವರ್ಷಗಳ ಹಿಂದೆಯೇ ಈ ಬೀದಿ ನಾಯಿಗಳನ್ನು ತಮ್ಮ ಮನೆಯ ಸದಸ್ಯರಂತೆ ಕಾಣುವ ಅಪರೂಪದ ಅನ್ನದಾತ ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ರಾಜೇಶ್ ಬನ್ನೂರು.
ಪುತ್ತೂರು ಪುರಸಭೆ ಇರುವ ಸಮಯದಲ್ಲಿ ಹಲವು ಬಾರಿ ಪುರಸಭೆ ಸದಸ್ಯರಾಗಿ ಮತ್ತು ಒಂದು ಬಾರಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದದ್ದಾರೆ. ಇವರು ತಿರುಗಾಡಿದ ಕಡೆಗಳಲ್ಲೆಲ್ಲಾ ನಾಯಿಗಳ ದಂಡು ಇವರನ್ನು ಸುತ್ತುವರಿಯುತ್ತೆ. ಈ ರೀತಿಯಾದ ಪರಿಚಯ ನಾಯಿಗಳಿಗೆ ಆಹಾರ, ಆರೈಕೆ ನೀಡುವ ತನಕ ಬೆಳೆದಿದೆ. ಸುಮಾರು 15 ವರ್ಷಗಳಿಂದ ಬೆಳೆದು ಬಂದ ಈ ಸ್ನೇಹಾಚಾರವನ್ನು ಬಿಟ್ಟು ಬರಲಾರದಂತಹ ಸಂಕಷ್ಟದಲ್ಲಿ ರಾಜೇಶ್ ಇದೀಗ ಸಿಲುಕಿದ್ದಾರೆ.
ಇದನ್ನೂ ಓದಿ:ಸರ್ಕಾರಿ ಕಚೇರಿಗಳಲ್ಲಿ ಇನ್ನು ಫೋಟೋ & ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ
ಪುತ್ತೂರು ಪೇಟೆಯಾದ್ಯಂತ ಸುಮಾರು 200 ಕ್ಕೂ ಮಿಕ್ಕಿದ ನಾಯಿಗಳ ಅನ್ನದಾತರಾಗಿರುವ ರಾಜೇಶ್ ಬನ್ನೂರು ಈ ನಾಯಿಗಳ ಆರೈಕೆ, ಆಹಾರಕ್ಕಾಗಿ ದಿನವೊಂದಕ್ಕೆ 1000 ದಿಂದ 1500 ರೂಪಾಯಿಗಳನ್ನು ವ್ಯಯಿಸುತ್ತಿದ್ದಾರೆ. ಕೆಲವು ಪರಿಚಯಸ್ಥರು ರಾಜೇಶ್ ಬನ್ನೂರರ ಈ ಸೇವೆಗೆ ತಮ್ಮ ಕೈಯಲ್ಲಾದ ಮಟ್ಟಿಗೆ ಸಹಕಾರ, ಸಹಾಯವನ್ನೂ ನೀಡುತ್ತಿದ್ದಾರೆ. ಆದರೆ ಹೆಚ್ಚಿನ ಪಾಲನ್ನು ರಾಜೇಶ್ ಬನ್ನೂರು ಸ್ವತಃ ಹೊತ್ತುಕೊಳ್ಳುವುದರಿಂದ ಇದೀಗ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ನಾಯಿಗಳಿಗೆ ಅನ್ನ ನೀಡುವುದನ್ನು ನಿಲ್ಲಿಸಬೇಕೆಂದು ಹಲವು ಬಾರಿ ನಿರ್ಧರಿಸಿದ್ದರೂ, ನಿರ್ಧಾರ ಮಾತ್ರ ಮುಂದೂಡಿಕೊಂಡೇ ಹೋಗಿದೆ. ಆದರೆ ಈ ಬಾರಿ ಮಾತ್ರ ನಿರ್ವಹಿಸಲಾರದ ಹಂತಕ್ಕೆ ತಲುಪಿರುವ ಕಾರಣ ಅನಿವಾರ್ಯವಾಗಿ ಸಮಾಜದ ಸಹಾಯಕ್ಕೆ ಕೈಯೊಡ್ಡಿದ್ದಾರೆ. ಅದರಲ್ಲೂ ಸಮಾಜ ಸೇವಾ ಸಂಘಗಳು ಮುಂದೆ ಬಂದಲ್ಲಿ ಬೀದಿ ನಾಯಿಗಳನ್ನು ಯಾವುದೇ ತೊಂದರೆಯಿಲ್ಲದೆ ನೋಡಿಕೊಳ್ಳಬಹುದು ಎನ್ನುವುದು ಬನ್ನೂರರ ಅಭಿಲಾಷೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Drink & Drive Case: ಕುಡಿದು ವಾಹನ ಚಾಲನೆ; ʼಮಂಜುಮ್ಮೆಲ್ ಬಾಯ್ಸ್ʼ ನಟ ಬಂಧನ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.