ನೆರೆ ಬರುವ ಮುನ್ನ ಎಚ್ಚರವಾಗಿ: ಪಾಟೀಲ
Team Udayavani, Jul 15, 2022, 3:46 PM IST
ಅಫಜಲಪುರ: ನೆರೆಯ ಮಹಾರಾಷ್ಟ್ರ ರಾಜ್ಯದಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ಅಲ್ಲಿನ ನದಿಗಳು ತುಂಬಿವೆ. ಜಲಾಶಯಗಳು ಭರ್ತಿಯಾಗುತ್ತಿದ್ದು ಹೆಚ್ಚಾದ ನೀರನ್ನು ಭೀಮಾ ನದಿಗೆ ಹರಿ ಬಿಡುವುದರಿಂದ ನಮ್ಮಲ್ಲೂ ನೆರೆ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಹೀಗಾಗಿ ತಾಲೂಕು ಅಧಿಕಾರಿಗಳು ಎಚ್ಚರವಾಗಿ, ಈಗಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎಂ.ವೈ. ಪಾಟೀಲ ಹೇಳಿದರು.
ಪಟ್ಟಣದ ತಾ.ಪಂ ಸಭಾಂಗಣದಲ್ಲಿ ನಡೆದ ತ್ರೆ„ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತಾಲೂಕಿನಾದ್ಯಂತ ಮುಂಗಾರು ಹಂಗಾಮಿನ ಆರಂಭದ ಒಂದು ತಿಂಗಳು ಮಳೆ ಬಾರದೇ ಬಿತ್ತನೆ ಕುಂಠಿತವಾಗಿದೆ. ರೈತರು ಕಷ್ಟದಲ್ಲಿದ್ದಾರೆ. ಹೀಗಾಗಿ ಕೃಷಿ ಇಲಾಖೆ, ಕಂದಾಯ ಇಲಾಖೆ, ತೋಟಗಾರಿಕೆ ಇಲಾಖೆಯವರು ರೈತರ ಕುರಿತು ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವ ಕೆಲಸ ಮಾಡಬೇಕು ಎಂದರು.
ಪ್ರವಾಹ ಬರುವ ಸಂಭವ ಹೆಚ್ಚಿದ್ದರಿಂದ ಸಂಬಂಧಪಟ್ಟವರು ಜಾಗೃತವಾಗಿದ್ದು ನದಿ ಪಾತ್ರದ ಹಳ್ಳಿಗಳ ಜನ ಸುರಕ್ಷಿತವಾಗಿರುವಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಅನೇಕ ಗ್ರಾಮಗಳಲ್ಲಿ ಶಾಲೆಗಳು, ಅಂಗನವಾಡಿಗಳ ಮೇಲ್ಛಾವಣಿಗಳು ಶಿಥಿಲಾವಸ್ಥೆಯಲ್ಲಿವೆ. ಅವುಗಳ ಮಾಹಿತಿ ನೀಡಿ. ಯಾವುದೇ ಕಾರಣಕ್ಕೂ ಅಂಗನವಾಡಿ, ಶಾಲೆ ಮಕ್ಕಳಿಗೆ ಸಮಸ್ಯೆಗಳಾಗದಂತೆ ನೋಡಿಕೊಳ್ಳಿ. ಸಾಕಷ್ಟು ಅನುದಾನ ಬರುತ್ತಿದೆ. ಅದರ ಸದ್ಬಳಕೆ ಮಾಡಿಕೊಳ್ಳಿ. ಅನುದಾನ ದುರ್ಬಳಕೆಯಾಗಿದ್ದು ಕಂಡು ಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ. ಅದೇ ರೀತಿ ಗ್ರಾಮೀಣ ಭಾಗದ ರಸ್ತೆಗಳು ಮಳೆಯಿಂದಾಗಿ ಹಾಳಾಗಿದ್ದರೆ ಅದನ್ನು ನನ್ನ ಗಮನಕ್ಕೆ ತನ್ನಿ. ಕೂಡಲೇ ರಸ್ತೆಗಳನ್ನು ಸರಿಪಡಿಸುವ ಕೆಲಸ ಮಾಡಿಸಲಾಗುತ್ತದೆ ಎಂದರು.
ಕೃಷಿ ಇಲಾಖೆ ಅಧಿಕಾರಿ ಎಸ್. ಎಚ್ ಗಡಗಿಮನಿ ಮಾತನಾಡಿ ಜೂನ್ ತಿಂಗಳಲ್ಲಿ ವಾಡಿಕೆಗಿಂತ ಬಹಳ ಕಡಿಮೆ ಮಳೆಯಾಗಿದ್ದರಿಂದ ಬಿತ್ತನೆ ಕಾರ್ಯ ವಿಳಂಬವಾಗಿದೆ. ಜುಲೈ ತಿಂಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ರೈತರು ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹೆಸರು, ಸೋಯಾ ಹೊರತು ಪಡಿಸಿ ಹತ್ತಿ, ತೊಗರಿ, ಉದ್ದು ಸೇರಿದಂತೆ ಇನ್ನಿತರ ಮುಂಗಾರು ಹಂಗಾಮಿನ ಬೆಳೆಗಳನ್ನು ಈ ತಿಂಗಳ ಅಂತ್ಯದ ವರೆಗೂ ಬಿತ್ತನೆ ಮಾಡಬಹುದು ಎಂದು ಹೇಳಿದರು.
ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜದ ದಾಸ್ತಾನು ಇದ್ದು ರೈತರು ರಿಯಾಯ್ತಿ ದರದಲ್ಲಿ ಪಡೆದುಕೊಳ್ಳುತ್ತಿದ್ದಾರೆ. ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಇದುವರೆಗೆ ಒಟ್ಟು ಶೇ. 18.8 ಪ್ರತಿಶತದಷ್ಟು ಮಾತ್ರ ಬಿತ್ತನೆಯಾಗಿದೆ. ರೈತರು ತಮ್ಮ ಬೆಳೆಗೆ ವೀಮೆ ಮಾಡಿಸಲು ಇನ್ನೂ ಕಾಲಾವಕಾಶವಿದ್ದು ಈ ತಿಂಗಳ ಅಂತ್ಯದ ವರೆಗೆ ವಿಮೆ ಮಾಡಿಸಿಕೊಳ್ಳಬಹುದಾಗಿದೆ. ಈ ಕುರಿತು ನಾವು ರೈತರಲ್ಲಿ ಜಾಗೃತಿ ಮೂಡಿಸುತ್ತಿದ್ದೇವೆ ಎಂದರು.
ಆರೋಗ್ಯ ಇಲಾಖೆ ಅಧಿಕಾರಿ ಡಾ| ರವಿಕಿರಣ ಮಾತನಾಡಿ, ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರಸಕ್ತ ತಿಂಗಳಲ್ಲಿ ಐದು ಕೇಸ್‌ಗಳು ದಾಖಲಾಗಿದ್ದು, ಈ ಪೈಕಿ ಇಬ್ಬರು ಗುಣಮುಖರಾಗಿ ಮನೆಗೆ ಹೋಗಿದ್ದಾರೆ. ಉಳಿದ ಮೂರು ಜನರಿಗೆ ಅವರವರ ಮನೆಗಳಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ತಿಳಿಸಿದರು.
ಬಿಇಒ ಮಾರುತಿ ಹುಜರತಿ ಮಾತನಾಡಿ, ಪ್ರಸಕ್ತ ಶೈಕ್ಷಣಿಕ ಸಾಲಿನ ಪಠ್ಯಪುಸ್ತಕಗಳು ಬಂದಿದ್ದು ಶಾಲೆಗಳಿಗೆ ವಿತರಿಸಲಾಗುತ್ತಿದೆ. ಇನ್ನೂ ಸಮವಸ್ತ್ರ ಬಂದಿಲ್ಲ, ವಾರದ ಒಳಗಾಗಿ ಸಮವಸ್ತ್ರ ಬರಲಿದ್ದು, ಎಲ್ಲವನ್ನು ಹಂಚಿಕೆ ಮಾಡಲಾಗುತ್ತದೆ ಎಂದರು.
ಇನ್ನುಳಿದಂತೆ ಪಿಆರ್‌ಇ, ಶಿಶು ಅಭಿವೃದ್ಧಿ, ಜೆಸ್ಕಾಂ, ಅರಣ್ಯ, ತೋಟಗಾರಿಕೆ, ಆಯುಷ್ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು. ತಹಶೀಲ್ದಾರ್ ಸಂಜೀವಕುಮಾರ ದಾಸರ್, ಜಿ.ಪಂ ಯೋಜನಾಧಿಕಾರಿ ಕಿಶೋರಕುಮಾರ ದುಬೆ, ತಾ.ಪಂ ಪ್ರಭಾರಿ ಇಒ ರಮೇಶ ಪಾಟೀಲ, ಕೆ.ಎಂ. ಕೋಟೆ, ಸರ್ವಜ್ಞ, ಹೊನ್ನೇಶ, ನಾಗರಾಜ ಕೆ, ರಾಜೇಂದ್ರ ಮರಬ್, ಮೀನಾಕ್ಷಿ ಪಾಟೀಲ, ಡಾ| ಎಂ.ಬಿ. ಪಾಟೀಲ, ದೇವೀಂದ್ರ ಸಜ್ಜನ್, ಕೆ. ಬಾಲಕೃಷ್ಣ, ಅಶೋಕ ನಾಯ್ಕ, ಅರ್ಜುನಕುಮಾರ ಪಾಟೀಲ, ಜಾಫರ್ ಅನ್ಸಾರಿ, ಶಿವರಾಜ್ ಪಾಟೀಲ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.