ಶಿರಾಡಿ ಘಾಟಿಯ ದೋಣಿಗಲ್ ನಲ್ಲಿ ರಸ್ತೆ ಕುಸಿತ; ಬದಲಿ ಮಾರ್ಗ ವ್ಯವಸ್ಥೆ
ಶಿರಾಡಿಘಾಟ್‌ನಲ್ಲಿ ವಾಹನ ಸಂಚಾರ ನಿಷೇಧ: ಹಾಸನ ಜಿಲ್ಲಾಧಿಕಾರಿ ಆದೇಶ
Team Udayavani, Jul 15, 2022, 3:55 PM IST
ಹಾಸನ: ಭಾರೀ ಮಳೆಯಿಂದಾಗಿ ಸಕಲೇಶಪುರ ತಾಲೂಕು ದೋಣಿಗಾಲ್ ಬಳಿ ರಾಷ್ಟ್ರೀಯ ಹೆದ್ದಾರಿಯು ಕುಸಿತದ ಹಿನ್ನೆಲೆಯಲ್ಲಿ ಬೆಂಗಳೂರು- ಮಂಗಳೂರು ರಾಷ್ಟ್ರೀಯ ಹೆದ್ದಾರಿ – 75 ರ ಶಿರಾಡಿಘಾಟ್‌ನಲ್ಲಿ ಎಲ್ಲ ವಾಹನಗಳ ಸಂಚಾರವನ್ನು ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಶುಕ್ರವಾರ ಆದೇಶ ಹೊರಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ – 75 ರ ಸಕಲೇಶಪುರ ತಾಲೂಕು ವ್ಯಾಪ್ತಿಯ ದೋಣಿಗಾಲ್‌ನಿಂದ ಮಾರನಹಳ್ಳಿವರೆಗೆ ಭಾರೀ ಸರಕು ಸಾಗಣೆಯ ವಾಹನಗಳ ಹೊರತುಪಡಿಸಿ ಸರ್ಕಾರಿ, ಶಾಸಗಿ ಬಸ್ಸುಗಳು, ಕಾರು, ಜೀಪು, ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿ ಗುರುವಾರ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದರು. ಆದರೆ ಶುಕ್ರವಾರ ಮತ್ತೆ ಮುಂಗಾರು ಮಳೆ ಅಬ್ಬರ ತೀವ್ರಗೊಂಡು ರಸ್ತೆ ಕುಸಿಯುವ ಅಪಾಯ ಎದುರಾಗಿದೆ.
ಹಾಗಾಗಿ ಹೆಚ್ಚಿನ ಆನಾಹುತವನ್ನು ತಡೆಯುವ ಹಾಗೂ ಸಾರ್ವಜನಿಕರ ಹಿತದೃಷ್ಠಿಯಿಂದ ಗುರುವಾರ ಹೊರಡಿಸಿದ ಆದೇಶವನ್ನು ಪರಿಷ್ಕರಿಸಿ ಈ ಮಾರ್ಗದಲ್ಲಿ ಎಲ್ಲ ವಾಹನಗಳ ಸಂಚಾರವನ್ನು ಮುಂದಿನ ಆದೇಶದವರೆಗೆ ನಿಷೇಧಿಸಿ ಶುಕ್ರವಾರ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು – ಮಂಗಳೂರು ನಡುವೆ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗವನ್ನೂ ಜಿಲ್ಲಾಧಿಕಾರಿಯವರು ಉಲ್ಲೇಖಿಸಿದ್ದು ಬೆಂಗಳೂರಿನಿಂದ ಮಂಗಳೂರಿಗೆ ಹೋಗುವ 16,200 ಕೆಜಿಗಿಂತ ಕಡಿಮೆ ಭಾರದ ವಾಹನಗಳು ಹಾಸನ – ಅರಕಲಗೂಡು – ಕುಶಾಲನಗರ – ಸಂಪಾಜೆ ಮಾರ್ಗದಲ್ಲಿ ಮಂಗಳೂರಿಗೆ ಸಂಚಿರಿಸಲು ಸೂಚನೆ ನೀಡಿದ್ದಾರೆ. ಮತ್ತೊಂದು ಮಾರ್ಗವನ್ನೂ ಅವರು ಸೂಚಿಸಿದ್ದು, ಹಾಸನ – ಬೇಲೂರು – ಮೂಡಿಗೆರೆ – ಚಾರ್ಮಾಡಿ ಘಾಟ್ ಮೂಲಕವೂ ಮಂಗಳೂರು ತಲಪಬಹುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
16,200 ಕೆಜಿಗಿಂತ ಹೆಚ್ಚು ಭಾರದ ಸರಕು ಸಾಗಾಣೆಯ ವಾಹನಗಳು ಈ ಎರಡೂ ಮಾರ್ಗಗಳ ಹೊರತುಪಡಿಸಿ ಬೇರೆ ಮಾರ್ಗಗಳಲ್ಲಿ ಬೆಂಗಳೂರು – ಮಂಗಳೂರು ನಡುವೆ ಸಂಚರಿಸಬಹುದು ಎಂದು ಜಿಲ್ಲಾಧಿಕಾರಿಯವರು ಉಲ್ಲೇಖೀಸಿದ್ದಾರೆ.
ಆಲೂರು , ಸಕಲೇಶಪುರ ತಾಲೂಕು ಶಾಲೆಗಳಿಗೆ ಶನಿವಾರ ( ಜು.16) ರಜೆ ಘೋಷಣೆ
ಹಾಸನ: ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಮಳೆ ಮುಂದುವರಿದಿರುವುದರಿಂದ ಶನಿವಾರ ( ಜು.16) ಎರಡು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಆಲೂರು ತಾಲೂಕಿನ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಸಕಲೇಶಪುರ ತಾಲೂಕಿನ ಶಾಲೆಗಳು, ಅಂಗನವಾಡಿ ಕೇಂದ್ರಗಳು ಹಾಗೂ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕವಿತಾ ರಾಜರಾಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಯಾತನಹಳ್ಳಿಯಲ್ಲಿ ತಹಸೀಲ್ದಾರ್ ಗ್ರಾಮ ವಾಸ್ತವ್ಯ
ಹಾಸನ: ಪ್ರತಿ ತಿಂಗಳ ಮೂರನೇ ಶನಿವಾರ ತಾಲೂಕು ವ್ಯಾಪ್ತಿಯಲ್ಲಿ ಬರುವ ಒಂದು ಗ್ರಾಮಕ್ಕೆ ತಹಸೀಲ್ದಾರರು ಭೇಟಿ ನೀಡಿ ಗ್ರಾಮದಲ್ಲಿ ವಾಸ್ತವ್ಯ ಹೂಡಿ ಗ್ರಾಮಸ್ಥರ ಕುಂದು ಕೊರತೆಗಳನ್ನು ಪರಿಹರಿಸಬೇಕಾಗಿದೆ.
ಆ ನಿಟ್ಟಿನಲ್ಲಿ ಜು.16 ರಂದು ಹಾಸನ ತಾಲೂಕು , ಸಾಲಗಾಮೆ ಹೋಬಳಿ, ಕ್ಯಾತನಹಳ್ಳಿ ಗ್ರಾಮದಲ್ಲಿ ತಹಸೀಲ್ದಾರ್ ನಟೇಶ್ ಅವರು ಗ್ರಾಮವಾಸ್ತವ್ಯ ಮಾಡಲಿದ್ದಾರೆ. ಸಾರ್ವಜನಿಕ ತಮ್ಮ ಕುಂದು ಕೊರತೆಗಳನ್ನು ಆ ಸಂದರ್ಭದಲ್ಲಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ತಹಸೀಲ್ದಾರರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.