ದವಸ ಧಾನ್ಯಗಳಿಗೂ ಜಿಎಸ್‌ಟಿ ಬರೆ; ಶೇ.5 ಜಿಎಸ್‌ಟಿ ಕೈಬಿಡಲು ಮನವಿ

ಸ್ಪೇರ್‌ ಪಾಟ್ಸ್‌ ಗೆ ಶೇ.5 ಜಿಎಸ್‌ಟಿ ತೆರಿಗೆ ಇತ್ತು. ಇದೀಗ ಅದನ್ನು ಶೇ.18 ಮಾಡಿದ್ದಾರೆ.

Team Udayavani, Jul 15, 2022, 5:51 PM IST

ದವಸ ಧಾನ್ಯಗಳಿಗೂ ಜಿಎಸ್‌ಟಿ ಬರೆ; ಶೇ.5 ಜಿಎಸ್‌ಟಿ ಕೈಬಿಡಲು ಮನವಿ

ಚಿಕ್ಕಬಳ್ಳಾಪುರ: ಅಕ್ಕಿ, ಬೇಳೆ, ಗೋಧಿ  ಸಹಿತ ದವಸಧಾನ್ಯ, ಆಹಾರ ಪದಾರ್ಥಗಳ ಮೇಲೆ ಶೇ.5 ಜಿಎಸ್‌ಟಿ ವಿಧಿ ಸಲು ಕೌನ್ಸಿಲ್‌ ತೀರ್ಮಾನಿಸಿದ್ದು, ಕೂಡಲೇ ವಾಪಸ್‌ ಪಡೆಯಬೇಕೆಂದು ಜಿಲ್ಲಾ ಅಕ್ಕಿ ಗಿರಣಿದಾರರ ಸಂಘದ ಅಧ್ಯಕ್ಷ ಬಿ.ಆರ್‌.ಶ್ರೀನಿವಾಸಮೂರ್ತಿ ಆಗ್ರಹಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಅಕ್ಕಿ-ಗೋಧಿ ಸಹಿತ ಶೇ.60 ಅವಶ್ಯಕ ವಸ್ತುಗಳನ್ನು ಜನ ನಿತ್ಯ ಬಳಕೆ ಮಾಡುತ್ತಿದ್ದಾರೆ. ಇದಕ್ಕೆ ಕೇಂದ್ರದ ಜಿಎಸ್‌ಟಿ ಕೌನ್ಸಿಲ್‌ನಲ್ಲಿ ಶೇ.5 ಜಿಎಸ್‌ಟಿ ವಿಧಿಸಲು ತೀರ್ಮಾನಿಸುವ ಮೂಲಕ ರೈತರು, ಗ್ರಾಹಕರಿಗೆ ಬರೆ ಎಳೆಯುವ ಕೆಲಸವನ್ನು ಮಾಡಲಾಗಿದೆ. ಕೂಡಲೇ ನಿರ್ಧಾರ ವಾಪಸ್‌ ಪಡೆಯಬೇಕೆಂದು ಒತ್ತಾಯಿಸಿದರು.

ದವಸಧಾನ್ಯಗಳ ಮೇಲೆ ತೆರಿಗೆ: ದವಸ ಧಾನ್ಯಗಳಿಗೆ ಜಿಎಸ್‌ಟಿ ವಿಧಿ ಸಿದರೆ ನೇರವಾಗಿ ಜನಸಾಮಾನ್ಯರಿಗೆ ಬರೆ ಎಳೆದಂತೆ ಆಗುತ್ತದೆ. ಒಂದು ವೇಳೆ ಜಿಎಸ್‌ಟಿ ವಿಧಿಸಿದರೆ ಅಕ್ಕಿ ಬೆಲೆ ಕೇಜಿಗೆ 5 ರೂ. ಹೆಚ್ಚಳ ಆಗುತ್ತದೆ. ಬೇಳೆ ಕಾಳಿನ ಬೆಲೆ 10 ರೂ. ಹೆಚ್ಚಾಗುತ್ತದೆ. ಈಗಾಗಲೇ ಕೊರೊನಾ ಸೋಂಕಿನಿಂದ ಜನ ಸಾಮಾನ್ಯರು, ರೈತರು ಕಂಗಾಲು ಆಗಿದ್ದಾರೆ. ಈ ಮಧ್ಯೆ ಕೇಂದ್ರದ ಜಿಎಸ್‌ಟಿ ಕೌನ್ಸಿಲ್‌ ದವಸ ಧಾನ್ಯಗಳ ಮೇಲೆ ತೆರಿಗೆ ವಿಧಿಸುವ ಕ್ರಮ ಅವೈಜ್ಞಾನಿಕವಾಗಿದೆ ಎಂದು ದೂರಿದರು.

ಗ್ರಾಹಕರಿಗೆ ಹೊರೆ: ಈಗಾಗಲೇ ಜಿಲ್ಲೆಯಲ್ಲಿ ರೈತರು ಕಷ್ಟದಲ್ಲಿದ್ದಾರೆ. ಹೂಡಿರುವ ಬಂಡವಾಳ ಕೈಗೆಟುಕುತ್ತಿಲ್ಲ. ಸಾರಿಗೆ, ಲೇಬರ್‌ ವೆಚ್ಚ ಜಾಸ್ತಿಯಾಗಿದೆ. ಈ ಮಧ್ಯೆ ಸ್ಪೇರ್‌ ಪಾಟ್ಸ್‌ ಗೆ ಶೇ.5 ಜಿಎಸ್‌ಟಿ ತೆರಿಗೆ ಇತ್ತು. ಇದೀಗ ಅದನ್ನು ಶೇ.18 ಮಾಡಿದ್ದಾರೆ. ಇದು ನೇರವಾಗಿ ಗ್ರಾಹಕರಿಗೆ ಹೊರೆಯಾಗುತ್ತದೆ ಎಂದು ವಿವರಿಸಿದರು.

ಅನಿರ್ದಿಷ್ಟಾವಧಿ ಹೋರಾಟ: ರೈತರು, ಗ್ರಾಹಕರಿಗೆ ತೊಂದರೆಯುಂಟು ಮಾಡಿರುವ ನಿರ್ಧಾರವನ್ನು ಕೂಡಲೇ ವಾಪಸ್‌ ಪಡೆಯಬೇಕೆಂದು ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಮನವಿ ಪತ್ರ ಸಲ್ಲಿಸಲಾಗಿದೆ. ಜಿಎಸ್‌ಟಿ ವಿಧಿ ಸುವ ನಿರ್ಧಾರವನ್ನು ವಾಪಸ್‌ ಪಡೆಯದಿದ್ದಲ್ಲಿ ಅನಿರ್ದಿಷ್ಟಾವಧಿ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಅಕ್ಕಿ ಗಿರಣಿದಾರರ ಸಂಘದ ಉಪಾಧ್ಯಕ್ಷ ತಲ್ಲಂ ರಾಧಾಕೃಷ್ಣ, ಕಾರ್ಯದರ್ಶಿ ನಾಗೇಶ್‌, ಖಜಾಂಚಿ ಎಂ.ಎಲ್‌.ಸಂತೋಷ, ವರ್ತಕರ ಸಂಘದ ಪ್ರತಿನಿ ಧಿಗಳಾದ ಚಿಕ್ಕಬಳ್ಳಾಪುರದ ಎಂಟಿಎಂ ಡಿ.ಎಸ್‌.ನಟರಾಜ್‌, ನಂಜುಂಡರಾಮಯ್ಯ ಶೆಟ್ಟಿ, ಗೌರಿಬಿದನೂರು ಎಸ್‌.ವಿ.ರತ್ನಯ್ಯಶೆಟ್ಟಿ, ಎನ್‌.ಆರ್‌.ರಾಧಾಕೃಷ್ಣ ಗುಪ್ತ, ಶಿಡ್ಲಘಟ್ಟದಿಂದ ಮಹೇಶ್‌, ಪ್ರಸಾದ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

10-kodagu

Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್‌ ಮೇಜರ್‌

9–Niveus-Mangalore-Marathon

Niveus Mangalore Marathon 2024: ನ.10: ನೀವಿಯಸ್‌ ಮಂಗಳೂರು ಮ್ಯಾರಥಾನ್‌

Anushka shetty’s upcoming movie Ghaati first look

Ghaati: ಸ್ವೀಟಿ ಅಲ್ಲ ಘಾಟಿ; ಫ‌ಸ್ಟ್‌ಲುಕ್‌ನಲ್ಲಿ ಅನುಷ್ಕಾ ಸಿನಿಮಾ

8-brahmavar

Brahmavara ಬಂಟರ ಯಾನೆ ನಾಡವರ ಸಂಘ: ನಾಳೆ ನೂತನ ಪದಾಧಿಕಾರಿಗಳ ಪದಪ್ರದಾನ

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.