![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 15, 2022, 6:12 PM IST
ಸೈದಾಪುರ: ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಬಾಡಿಯಾಲ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಣ್ಣಿನ ರಸ್ತೆ ಹದಗೆಟ್ಟು, ಜನ ಸಂಚಾರಕ್ಕೆ ತೊಂದರೆಯಾಗಿದೆ.
ಸಮೀಪದ ಬಾಡಿಯಾಲ ಗ್ರಾಮಕ್ಕೆ ಸೈದಾಪುರದಿಂದ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯ ದುರಸ್ತಿ ಕಾರ್ಯ ಸುಮಾರು ಒಂದು ವರ್ಷದಿಂದ ಆಮೆಗತಿಯಲ್ಲಿ ಸಾಗುತ್ತಿರುವುದರಿಂದ ಸಾರ್ವಜನಿಕರು ಮತ್ತು ವಾಹನ ಸವಾರರು ಪರದಾಡುವಂತಾಗಿದೆ.
ಬಾಡಿಯಾಲ ಗ್ರಾಮದ ಹೊರವಲಯದಲ್ಲಿರುವ ಹಳ್ಳದಿಂದ ಆಂಧ್ರದ ಚೇಗುಂಟಾ ಗ್ರಾಮದ ಹತ್ತಿರದವರೆಗೆ ಸುಮಾರು ನಾಲ್ಕು ಕಿ.ಮೀ. ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಈ ಮೊದಲು ಸ್ವಲ್ಪಮಟ್ಟಿಗೆ ಹಾಳಾಗಿದ್ದ ಡಾಂಬರ್ ರಸ್ತೆಯನ್ನು ದುರಸ್ತಿ ಮಾಡುವ ಉದ್ದೇಶದಿಂದ ಇರುವ ಡಾಂಬರನ್ನು ತೆಗೆದು ಹಾಕಿದ್ದಾರೆ. ಆದರೆ ಕಳೆದೊಂದು ವರ್ಷದಿಂದ ಗುತ್ತಿಗೆದಾರರು ರಸ್ತೆ ದುರಸ್ತಿ ಮಾಡದೇ ಕೇವಲ ಮಣ್ಣನ್ನು ರಸ್ತೆಯ ಮೇಲೆ ಸುರಿದಿದ್ದಾರೆ. ಮಳೆಯಿಂದಾಗಿ ರಸ್ತೆಯು ಕೆಸರು ಗದ್ದೆಯಂತಾಗಿ ಸಂಚಾರ ಸಾಧ್ಯವಾಗದಂತಹ ಸ್ಥಿತಿ ನಿರ್ಮಾಣವಾಗಿದೆ.
ಅಲ್ಲದೇ ರಸ್ತೆಯಲ್ಲಿ ದೊಡ್ಡದಾದ ತಗ್ಗು ಗುಂಡಿಗಳು ನಿರ್ಮಾಣವಾಗಿ, ಮಳೆ ನೀರು ಸಂಗ್ರಹವಾಗಿ ಸುಗಮ ಸಂಚಾರಕ್ಕೆ ತೊಂದರೆಯಾಗಿದೆ ಎಂದು ಗ್ರಾಮಸ್ಥರು ಗುತ್ತಿಗೆದಾರರ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.