ರೈಲು ರದ್ದಾಗಿದ್ದಕ್ಕೆ ಕ್ಯಾಬ್ ಬುಕ್ ಮಾಡಿಕೊಟ್ಟ ಅಧಿಕಾರಿಗಳು!
Team Udayavani, Jul 15, 2022, 9:05 PM IST
ನವದೆಹಲಿ: ಕೊನೆ ಕ್ಷಣದಲ್ಲಿ ರೈಲು ರದ್ದಾಯಿತು ಎನ್ನುವ ಕಾರಣಕ್ಕೆ ರೈಲ್ವೆ ಇಲಾಖೆಯ ಅಧಿಕಾರಿಗಳು ಪ್ರಯಾಣಿಕರೊಬ್ಬರಿಗೆ ಕ್ಯಾಬ್ ಬುಕ್ ಮಾಡಿಕೊಟ್ಟಿರುವ ವಿಶೇಷ ಘಟನೆ ಗುಜರಾತ್‌ನಲ್ಲಿ ನಡೆದಿದೆ.
ಐಐಟಿ ಮದ್ರಾಸ್‌ನ ವಿದ್ಯಾರ್ಥಿ ಸತ್ಯಂ ಅವರು ಏಕ್ತಾ ನಗರದಿಂದ ವಡೋದರಕ್ಕೆ ರೈಲ್ವೆ ಟಿಕೆಟ್ ಬುಕ್ ಮಾಡಿದ್ದರು. ಅಲ್ಲಿಂದ ಅವರು ಚೆನ್ನೈಗೆ ರೈಲಿನಲ್ಲಿ ತೆರಳಬೇಕಿತ್ತು. ಆದರೆ ಏಕ್ತಾ ನಗರದಿಂದ ವಡೋದರಾದ ರೈಲು ಕೊನೆ ಕ್ಷಣದಲ್ಲಿ ರದ್ದಾಗಿದೆ.
ಈ ವಿಚಾರದಲ್ಲಿ ಸತ್ಯಂ ಏಕ್ತಾ ನಗರದ ರೈಲ್ವೆ ಅಧಿಕಾರಿಗಳೊಂದಿಗೆ ಮಾತನಾಡಿದ ನಂತರ ಅವರು ಆತನಿಗೆ ಕಾರೊಂದನ್ನು ಬುಕ್ ಮಾಡಿಕೊಟ್ಟಿದ್ದಾರೆ. ಸರಿಯಾದ ಸಮಯಕ್ಕೆ ವಡೋದರಾ ರೈಲ್ವೆ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ಚೆನ್ನೈ ರೈಲು ಹತ್ತುವುದಕ್ಕೆ ಸಹಾಯ ಮಾಡಿದ್ದಾರೆ. ಈ ವಿಚಾರವನ್ನು ಸತ್ಯಂ ಟ್ವಿಟರ್‌ನಲ್ಲಿ ವಿಡಿಯೋ ಮೂಲಕ ಹಂಚಿಕೊಂಡಿದ್ದಾರೆ.
पश्चिम रेलवे के चाँदोद – एकता नगर रेल खंड के क्षतिग्रस्त होने के कारण रेल यातायात बंद होने से 20920 एकतानगर- एमजीआर चेन्नई सेंट्रल के एकता नगर – वडोदरा के बीच निरस्त होने के कारण इस ट्रेन के एकतानगर से एकमात्र यात्री को कार से वडोदरा पहुँचाया गया @WesternRly @RailMinIndia pic.twitter.com/6kzLaxCYwu
— DRM Vadodara (@DRMBRCWR) July 13, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
MUST WATCH
ಹೊಸ ಸೇರ್ಪಡೆ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.