ಮೀಸಲಾತಿಗಾಗಿ ತಲೆ ಬೋಳಿಸಿಕೊಂಡು ಆಕ್ರೋಶ
Team Udayavani, Jul 16, 2022, 12:45 PM IST
ಹುಮನಾಬಾದ: ಬೇಡ ಜಂಗಮ ಜಾತಿ ಪ್ರಮಾಣಪತ್ರ ನೀಡುವಂತೆ ಹಾಗೂ ವಿವಿಧ ಬೇಡಿಕೆ ರಾಜ್ಯ ಸರ್ಕಾರ ಕೂಡಲೇ ಈಡೇರಿಸುವಂತೆ ಒತ್ತಾಯಿಸಿ ಪಟ್ಟಣದ ತಹಶೀಲ್ದಾರ್ ಕಚೇರಿ ಎದುರಿಗೆ ನಡೆಯುತ್ತಿರುವ 10ನೇ ದಿನದ ಸತ್ಯಾಗ್ರಹದಲ್ಲಿ ಶುಕ್ರವಾರ ಜಂಗಮರು ತಲೆ ಬೋಳಿಸಿಕೊಂಡು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಜಂಗಮ ಸಮಾಜದ ಮುಖಂಡರಾದ ರವಿ ಸ್ವಾಮಿ, ಸಿದ್ದು ಚಕ್ಕಪಳ್ಳಿ ಮಾತನಾಡಿ, ಬೇಡ ಜಂಗಮ ಜಾತಿ ಪ್ರಮಾಣಪತ್ರ ನೀಡುವಂತೆ ಒತ್ತಾಯಿಸಿ ಜಂಗಮ ಸಮಾಜದಿಂದ ಕಳೆದ 10 ದಿನಗಳಿಂದ ಹಗಲು-ರಾತ್ರಿ ಸತ್ಯಾಗ್ರಹ ನಡೆಸಿದ್ದು, ಸರ್ಕಾರ ಮಾತ್ರ ಜಂಗಮರ ಬೇಡಿಕೆ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಿರಂತರ ಮಳೆ ಸುರಿಯುತ್ತಿದ್ದರೂ ಪ್ರತಿಭಟನಾ ಸ್ಥಳದಿಂದ ಯಾರೊಬ್ಬರೂ ಕದಲಿಲ್ಲ. ನಮ್ಮ ಹಕ್ಕಿಗಾಗಿ ನಾವುಗಳು ಹೋರಾಟ ನಡೆಸುತ್ತಿದ್ದು, ಬರುವ ದಿನಗಳಲ್ಲಿ ಸರ್ಕಾರ ಸೂಕ್ತವಾಗಿ ಸ್ಪಂದಿಸದಿದ್ದರೆ ಉಗ್ರ ಹೋರಾಟ ನಡೆಸಲು ಇಂತನೆ ಮಾಡಬೇಕಾಗುತ್ತದೆ. ಈ ಹಿಂದೆ ರಕ್ತದಲ್ಲಿ ಮುಖ್ಯಮಂತ್ರಿಗೆ ಪತ್ರ ಬರೆದು ಮೀಸಲಾತಿ ಘೋಷಣೆ ಮಾಡುವಂತೆ ಒತ್ತಾಯಿಸಲಾಗಿತ್ತು. ಇದೀಗ ಜಂಗಮರು ತಲೆ ಬೋಳಿಸಿಕೊಂಡು ಸರ್ಕಾರಕ್ಕೆ ಒತ್ತಾಯಿಸುತ್ತಿದ್ದೇವೆ. ನಮ್ಮ ಪ್ರತಿಭಟನೆಗೆ ಹಡಪದ ಸಮಾಜದವರು ಕೂಡ ಬೆಂಬಲ ನೀಡಿ ಕೇಶ ಮುಂಡನೆಗೆ ಸಹಕಾರ ನೀಡಿದ್ದಾರೆ. ಕೂಡಲೇ ಸರ್ಕಾರ ಮೀಸಲಾತಿ ಘೋಷಣೆ ಮಾಡಬೇಕು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ: ಖರ್ಗೆ ಹೆಸರು ಅನಗತ್ಯವಾಗಿ ತರಲಾಗಿದೆ; ಚೆನ್ನಾರೆಡ್ಡಿ
Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.