ರಸ್ತೆ ದುರಸ್ತಿಗೆ ಒತ್ತಾಯ: ಬಸ್‌ ಸಂಚಾರ ತಡೆದು ಪ್ರತಿಭಟನೆ

ಗುಲಾಬ್‌ ಟಾಕೀಜ್‌ದಿಂದ ಹರದೊಳ್ಳಿವರೆಗೆ ರಸ್ತೆ ಕಾಣದಷ್ಟು ತಗ್ಗು ಗುಂಡಿಗಳು ಬಿದ್ದಿವೆ.

Team Udayavani, Jul 16, 2022, 5:45 PM IST

ರಸ್ತೆ ದುರಸ್ತಿಗೆ ಒತ್ತಾಯ: ಬಸ್‌ ಸಂಚಾರ ತಡೆದು ಪ್ರತಿಭಟನೆ

ಗುಳೇದಗುಡ್ಡ: ಪಟ್ಟಣದ ಹರದೊಳ್ಳಿಯಿಂದ ಗುಲಾಬ್‌ ಟಾಕೀಜ್‌ವರೆಗೆ ಹದಗೆಟ್ಟ ರಸ್ತೆ ದುರಸ್ತಿಗೆ ಒತ್ತಾಯಿಸಿ ಕರ್ನಾಟಕ ರೈತ ವಿಕಾಸ ಸಂಘ ಸಾರ್ವಜನಿಕರೊಂದಿಗೆ ಬೃಹತ್‌ ಪ್ರತಿಭಟಿಸಿ ರಸ್ತೆ ತಡೆ ನಡೆಸಿದರು.

ಪಟ್ಟಣದ ಹರದೊಳ್ಳಿಯಿಂದ ಪ್ರತಿಭಟನಾ ಮೆರವಣಿಗೆ ಆರಂಭಗೊಂಡು ಪಟ್ಟಣದ ಭಂಡಾರಿ ಕಾಲೇಜ್‌ ಸರ್ಕಲ್‌ ಬಳಿ ಬಂದು ರಸ್ತಾ ರೋಕೋ ನಡೆಸಿದರು. ಪ್ರತಿಭಟನಾಕಾರರು ರಸ್ತೆಯಲ್ಲಿ ಕುಳಿತು ಬಸ್‌, ಟಂಟಂ, ಬೈಕ್‌ ಗಳ ಸಂಚಾರ ತಡೆದು ಪ್ರತಿಭಟನಾ ಕಾವು ಹೆಚ್ಚಿಸಿದರು. ಮಹಿಳೆ, ಪುರುಷರು ಒಳಗೊಂಡು ಅನೇಕ ರೈತರು ಹಾಗೂ ಸಾರ್ವಜನಿಕರು ಹಸಿರು ಶಾಲು ಧರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪಟ್ಟಣದ ಸಾರ್ವಜನಿಕರು  ಪ್ರತಿಭಟನೆಗೆ ಸಾಥ್‌ ನೀಡಿ ಬೆಂಬಲಿಸಿದರು.

ಹದಗೆಟ್ಟ ರಸ್ತೆ ದುರಸ್ತಿಗೆ ನಿರ್ಲಕ್ಷ ತೋರುತ್ತಿರುವ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ವಿರುದ್ಧ ಪ್ರತಿಭಟನಾ ನಿರತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿ ಸರ್ಕಾರದ ವೈಫಲ್ಯ ಖಂಡಿಸಿದರು. ಈ ಭಾಗದ ಶಾಸಕರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾಕಾರರು ತಮ್ಮ ಆಕ್ರೋಶ ಹೊರಹಾಕಿದರು.

ಗುಲಾಬ್‌ ಟಾಕೀಜ್‌ದಿಂದ ಹರದೊಳ್ಳಿವರೆಗೆ ರಸ್ತೆ ಕಾಣದಷ್ಟು ತಗ್ಗು ಗುಂಡಿಗಳು ಬಿದ್ದಿವೆ. ಈಗಾಗಲೇ ಈ ತಗ್ಗು ಗುಂಡಿಗಳಲ್ಲಿ ಸಾಕಷ್ಟು ಬೈಕ್‌ ಸವಾರರು, ಪಾದಾಚಾರಿಗಳು ಬಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂಬಂಧಿಸಿದ ಅಧಿಕಾರಿಗಳಿಗೆ ಇಲ್ಲಿನ ರಸ್ತೆ ದುರಸ್ತಿಗೆ ಆಗ್ರಹಿಸಿದರೂ ಕ್ರಮ ಕೈಗೊಂಡಿಲ್ಲ ಎಂದು ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸಂಬಂಧಿಸಿದ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಬರುವ ತನಕ ಪ್ರತಿಭಟನೆ ನಿಲ್ಲಿಸುವುದಿಲ್ಲವೆಂದು ಪ್ರತಿಭನಟಾಕಾರರು ಪಟ್ಟು ಹಿಡಿದರು. ಆದರೆ ಕೆಲವು ಹಿರಿಯರ ಮನವಿ ಮೇರೆಗೆ ರಸ್ತೆ ದುರಸ್ತಿಗೊಳಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆದರು.

ಪ್ರತಿಭಟನೆಯಲ್ಲಿ ರೈತ ವಿಕಾಸ ಸಂಘದ ರಾಜ್ಯ ಉಪಾಧ್ಯಕ್ಷ ಶೇಖಪ್ಪ ಚವ್ಹಾಣ, ಜಿಲ್ಲಾಧ್ಯಕ್ಷ ಪರಶುರಾಮ ಮದಕಟ್ಟಿ, ತಾಲೂಕು ಅಧ್ಯಕ್ಷ ಕಿರಣ ಸಲಕಿ, ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಜಹೀರಾಬಿ ನದಾಫ್‌, ರತ್ನವ್ವ ಗುಗ್ಗರಿ, ಸಚಿನ ಬಡಿಗೇರ, ಹುಚ್ಚೇಶ ಪೂಜಾರ, ಬಸವರಾಜ ಗೊಬ್ಬಿ, ಪ್ರವೀಣ ದೊತರದ, ಸಂಗು ಕುಂಬಾರ, ಸಾಗರ ತೋಳಮಟ್ಟಿ, ಕೃಷ್ಣಾ ಮ್ಯಾಗಿನಹಳ್ಳಿ, ಮಹಿಳಾ ಮುಖಂಡರು, ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Heavy rain in Amboli; Five feet water rise in Hidkal reservoir in one day

Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ

Rain ವಿಪತ್ತು ನಿರ್ವಹಣೆಗೆ ಸೂಕ್ತ ಮುಂಜಾಗ್ರತಾ ಕ್ರಮ ಅಗತ್ಯ: ಈರಣ್ಣ

Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್‌

Plastic ತ್ಯಾಜ್ಯ ಮನುಕುಲಕ್ಕೆ ಮಾರಕ: ಫ್ರಾನ್ಸ್ ದೇಶದ ವಿದ್ಯಾರ್ಥಿ ಸೋರೇನ್‌

Rabakavi

Irrigation: ರೈತರ ವಿಚಾರದಲ್ಲಿ ರಾಜಕಾರಣ ಮಾಡದಿರಿ: ಸಚಿವ ತಿಮ್ಮಾಪುರ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

ಬಹುಮುಖ ಪ್ರತಿಭೆ: ಕಾಲಪೆಟ್ಟಿಗೆಯ ಹಾರ್ಮೋನಿಯಂ ಕಲಾವಿದ ಸದಾಶಿವ ತೇಲಿ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

7-bng

Bengaluru: ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ 2 ಮೊಬೈಲ್‌

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

6-bng

ನಿಯಮಗಳ ಉಲ್ಲಂಘನೆ, ಹೈಬೀಮ್‌ ಲೈಟ್‌ಗಳ ಬಳಕೆ: 5.79 ಲಕ್ಷ ದಂಡ

Heavy rain in Amboli; Five feet water rise in Hidkal reservoir in one day

Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.