ಶಾಸಕರ ಸರಕಾರಿ ಮಾದರಿ ಶಾಲೆಗೆ ಶೀಘ್ರ ಮೂಲ ಸೌಲಭ್ಯ

ಶಾಲೆಗೆ ಒಬ್ಬ ದಕ್ಷ ಪದವೀಧರ ಮುಖ್ಯ ಶಿಕ್ಷಕರನ್ನು ನೇಮಿಸಬೇಕು.

Team Udayavani, Jul 16, 2022, 6:19 PM IST

ಶಾಸಕರ ಸರಕಾರಿ ಮಾದರಿ ಶಾಲೆಗೆ ಶೀಘ್ರ ಮೂಲ ಸೌಲಭ್ಯ

ಹಾನಗಲ್ಲ: ಪಟ್ಟಣದ ಶಾಸಕರ ಸರಕಾರಿ ಮಾದರಿ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸದ ಹೊರತು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂಬ ಪಾಲಕರ ತೀರ್ಮಾನದ ಹಿನ್ನೆಲೆಯಲ್ಲಿ, ಶುಕ್ರವಾರ ಪಾಲಕರೊಂದಿಗೆ ಸಭೆ ನಡೆಸಿದ ಶಾಸಕರು, ತಹಶೀಲ್ದಾರ್‌, ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಮೂಲಭೂತ ಸೌಕರ್ಯ ಒದಗಿಸುವ ಭರವಸೆ ನೀಡಿದರು.

ಶುಕ್ರವಾರ ಪಟ್ಟಣದ ಶಾಸಕರ ಮಾದರಿ ಶಾಲೆಯಲ್ಲಿ ಶಾಸಕ ಶ್ರೀನಿವಾಸ ಮಾನೆ ಹಾಗೂ ತಹಶೀಲ್ದಾರ್‌ ಪಿ.ಎಸ್‌.ಎರ್ರಿಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌.ಎನ್‌.ಹುರಳಿ ಅವರು ವಿದ್ಯಾರ್ಥಿಗಳ ಪಾಲಕರೊಂದಿಗೆ ಶಾಲೆಯ ಸಮಸ್ಯೆಗಳ ಕುರಿತು ಸಭೆ ನಡೆಸಿ ಚರ್ಚಿಸಿದರು. ಆದರೆ, ಚರ್ಚೆಯ ಫಲವಾಗಿ ಪಾಲಕರು ಅಪೇಕ್ಷಿಸಿದ ಮೂಲಭೂತ ಸೌಕರ್ಯಗಳನ್ನು ಹಂತ ಹಂತವಾಗಿ ಈಡೇರಿಸುವ ಭರವಸೆ ನೀಡಿದರು. ಆದರೆ, ಎಲ್ಲ ಸೌಲಭ್ಯಗಳನ್ನು ಕಲ್ಪಿಸುವವರೆಗೆ ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪಾಲಕರು ಪಟ್ಟು ಹಿಡಿದರು.

ಮೈದಾನದ ಅಭಿವೃದ್ಧಿ ಕಾರ್ಯ ತಕ್ಷಣದಿಂದ ಸಾಧ್ಯವಾಗುವ ಮಾತಲ್ಲ. ಸದ್ಯಕ್ಕೆ ಮೈದಾನದಲ್ಲಿ ಓಡಾಟದ ಟ್ರಾಕ್‌ ನಿರ್ಮಿಸಿ ಮಕ್ಕಳಿಗೆ ಅನುಕೂಲ ಕಲ್ಪಿಸಲಾಗುವುದು. ಶೀಘ್ರ 5 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುವುದು. ತಹಶೀಲ್ದಾರ್‌ರ ವಿವೇಚನಾ ನಿಧಿ ಹಾಗೂ ಜಿಲ್ಲಾ ಧಿಕಾರಿಗಳ ವಿವೇಚನಾ ನಿಧಿಯಲ್ಲಿ ಶೀಘ್ರ ಅಭಿವೃದ್ಧಿಗೆ ಅನುದಾನ ಒದಗಿಸುವ ಭರವಸೆ ನೀಡಿದರು.

ಶೌಚಾಲಯಗಳನ್ನು ಸಮರ್ಪಕವಾಗಿ ಸ್ವತ್ಛವಾಗಿಡಲು ಕ್ರಮ ಜರುಗಿಸುವುದು ಹಾಗೂ ಕಿತ್ತು ಹೋದ ಮೇಲ್ಛಾವಣಿ ದುರಸ್ತಿ ಸೇರಿದಂತೆ ಕೂಡಲೇ ಅಗತ್ಯವಿರುವ ಸೌಲಭ್ಯಗಳನ್ನು ಪೂರೈಸಲು ಅಧಿ ಕಾರಿಗಳು ಮುಂದಾದರು. ಆದರೆ, ಪಾಲಕರು ಮಾತ್ರ ಪೂರ್ಣ ಪ್ರಮಾಣದ ಮೂಲಭೂತ ಸೌಕರ್ಯ ಒದಗಿಸದ ಹೊರತು ನಾವು ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ ಎಂದು ಪಟ್ಟು ಹಿಡಿದರು. ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಶೀಘ್ರ ಶಾಲೆಯ ಅಭಿವೃದ್ಧಿ ಕಾರ್ಯಗಳಿಗೆ 18 ಲಕ್ಷ ರೂ. ಬಿಡುಗಡೆಯಾಗಲಿದೆ.

ಇದರಲ್ಲಿ ತೀರಾ ಅಗತ್ಯವಾದ ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡೋಣ. ಹಂತ ಹಂತವಾಗಿ ಶಾಲೆಯ ಅಭಿವೃದ್ಧಿಗೆ ಅನುದಾನ ಒದಗಿಸಲು ಕಾಳಜಿ ವಹಿಸುತ್ತೇನೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗದಂತೆ ಒಟ್ಟಾಗಿ ಶ್ರಮಿಸೋಣ ಎಂದು ಸಲಹೆ ನೀಡಿದರು. ಆದರೆ, ಶಾಲೆ ಆರಂಭಿಸುವ ಅಥವಾ ರಜೆ ಘೋಷಿಸುವ ಅ ಧಿಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಇಲ್ಲಿನ ಪರಿಸ್ಥಿತಿ ಗಮನಿಸಿ ನಿರ್ಣಯ ತೆಗೆದುಕೊಳ್ಳಬೇಕಾಗುತ್ತದೆ. ಹೀಗಾಗಿ,
ಈ ವಿಚಾರದಲ್ಲಿ ಒಮ್ಮತ ಮೂಡಲೇ ಇಲ್ಲ.

ಶಾಲೆಗೆ ಒಬ್ಬ ದಕ್ಷ ಪದವೀಧರ ಮುಖ್ಯ ಶಿಕ್ಷಕರನ್ನು ನೇಮಿಸಬೇಕು. ಇಲ್ಲಿನ ಮಕ್ಕಳ ತರಗತಿಗಳಿಗೆ ಅನುಗುಣವಾಗಿ ಶಿಕ್ಷಕರನ್ನು ಒದಗಿಸಬೇಕು. ಆಂಗ್ಲ ಮಾಧ್ಯಮ ಶಾಲೆ ಇದೆ. ಆದರೆ, ಅದಕ್ಕನುಗುಣವಾಗಿ ಒಟ್ಟು ಶಿಕ್ಷಕರ ಕೊರತೆಯಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಅಡಚಣೆಯಾಗದಂತೆ ಕ್ರಮ ಜರುಗಿಸುವ ಜವಾಬ್ದಾರಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಲಾಯಿತು. ಆದರೆ, ಪಾಲಕರು ಈ ಬಗ್ಗೆ ನಾಳೆಯಿಂದ ಯಾವ ನಿರ್ಣಯ ತೆಗೆದುಕೊಳ್ಳುವರು ಎಂಬುದರ ಮೇಲೆ ಶಾಲೆ ಆರಂಭದ ನಿರ್ಣಯವಾಗಲಿದೆ.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಖುದ್ದಾಗಿ ಶಾಲೆಗೆ ಭೇಟಿ ನೀಡಿ, ಅಲ್ಲಿನ ಸಮಸ್ಯೆಗಳಿಗೆ ಪರಿಹಾರ ನೀಡಿ, ಸೌಲಭ್ಯ ಒದಗಿಸಲು ಆಸಕ್ತಿ ತೋರಲೇಬೇಕು. ಇಲ್ಲಿಯೇ ಬಿಆರ್‌ಸಿ ಕೇಂದ್ರವಿದ್ದು, ಈ ಕೇಂದ್ರದ ಆವರಣದಲ್ಲೇ ಇರುವ ಸರಕಾರಿ ಶಾಲೆಗೆ ಬೇಕಾಗುವ ಸೌಲಭ್ಯ ಒದಗಿಸದ ಸ್ಥಿತಿ ನಿಜಕ್ಕೂ ಬೇಸರ ತರಿಸುವಂತದ್ದು ಎಂದು ಪಾಲಕರು ದೂರಿದರು.

ಈ ಸಂದರ್ಭದಲ್ಲಿ ಪಾಲಕ ಪ್ರತಿನಿಧಿಗಳಾದ ಪ್ರಶಾಂತ ಮುಚ್ಚಂಡಿ, ರವಿಚಂದ್ರ ಪುರೋಹಿತ, ಪ್ರವೀಣ ಸುಲಾಖೆ, ಪ್ರವೀಣ ಲಿಂಗೇರಿ, ತುಳಜೇಶ ಮೂಲಿಮನಿ, ಮನೋಜ ಕಲಾಲ, ನೇತಾಜಿ ಕಲಾಲ, ಗುರು ಏಸಕ್ಕನವರ, ಗುರುಮೂರ್ತಿ ಹೆಗಡೆ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಉಮೇಶ ಮಾಳಗಿ ಮಾತನಾಡಿದರು.

ಟಾಪ್ ನ್ಯೂಸ್

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

Haveri: ಮಾಜಿ ಸಚಿವ ಮನೋಹರ ತಹಶೀಲ್ದಾರ ವಿಧಿವಶ

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

17-bng

Bengaluru: ವಿಶ್ವನಾಥ್‌ಗೆ ಕೊಲೆ ಬೆದರಿಕೆ: ಆರೋಪಿ ಅರ್ಜಿ ವಜಾ

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

BGT 2024: ಬುಮ್ರಾ ಬೆಂಕಿ ದಾಳಿಗೆ ನಲುಗಿದ ಆಸೀಸ್:‌ ಭಾರತದ ಹಿಡಿತದಲ್ಲಿ ಪರ್ತ್‌ ಟೆಸ್ಟ್‌

16-bng

Bengaluru: ಮರಕ್ಕೆ ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು

15-bng

Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’

India’s first FIP ​​Padel tournament begins

FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.