ಹೆಚ್ಚು ಉದ್ಯೋಗ ನೀಡಿದರೆ ಸಬ್ಸಿಡಿ ಇನಾಮು: ಸಿಎಂ ಬೊಮ್ಮಾಯಿ
Team Udayavani, Jul 16, 2022, 11:29 PM IST
ಹುಬ್ಬಳ್ಳಿ: ಉದ್ಯಮಗಳಲ್ಲಿ ಹೆಚ್ಚು ಉದ್ಯೋಗಗಳನ್ನು ನೀಡಿದವ ರಿಗೆ ಹೆಚ್ಚಿನ ಸಬ್ಸಿಡಿ ನೀಡಲು ಯೋಜಿಸಿದ್ದೇವೆ. ದ್ವಿ ತೆರಿಗೆಯನ್ನು ಏಕ ತೆರಿಗೆಯಾಗಿಸಲಾಗಿದೆ. ಆಹಾರಧಾನ್ಯ ಗಳ ಮೇಲಿನ ಜಿಎಸ್‌ಟಿ ಹಾಗೂ ಇನ್ನಿತರ ಸಮಸ್ಯೆಗಳ ಕುರಿತು ಅಗತ್ಯ ಕ್ರಮಕ್ಕೆ ಶಿಫಾರಸು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಎಫ್‌ಕೆಸಿಸಿಐ ಹಾಗೂಕೆಸಿಸಿಐ ಸಂಯುಕ್ತವಾಗಿ ಆಯೋಜಿಸಿದ್ದಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ
ಗಳ ರಾಜ್ಯಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೈಗಾರಿಕೆಗೆ ಒಂದೇ ಇಲಾಖೆ ಚಿಂತನೆ
ಇನ್ನು ಮುಂದೆ ರಾಜ್ಯದಲ್ಲಿ ಸಣ್ಣ, ಮಧ್ಯಮ ಹಾಗೂ ಬೃಹತ್ ಉದ್ಯಮ ಇಲಾಖೆ ಎಂಬ ಗೋಡೆಗಳನ್ನೇ ತೆಗೆದು ಉದ್ಯಮ ಇಲಾಖೆ ಒಂದೇ ಇರಿಸುವ ಚಿಂತನೆಯಿದೆ. ರಾಜ್ಯದಲ್ಲಿ ಒಂದು ಕ್ಷೇತ್ರ, ಒಂದು ಪ್ರದೇಶ ಅಭಿವೃದ್ಧಿ ಹೊಂದಿದರೆ ಸಾಲದು. ರಾಜ್ಯದ ಸಮತೋಲಿತ ಬೆಳವಣಿಗೆ ನನ್ನ ಬಯಕೆಯಾಗಿದೆ. ಉದ್ಯಮ ಸಹಿತ ಎಲ್ಲ ಕ್ಷೇತ್ರಗಳು ಬೆಳೆಯಬೇಕು. ಜನರ ಚಟುವಟಿಕೆಗಳ ಹೆಚ್ಚಳವೇ ನಿಜವಾದ ಆರ್ಥಿಕತೆಯಾಗಿದ್ದು, ಇದಕ್ಕೆ ಪೂರಕವಾಗಿ ದೀರ್ಘಾವಧಿ ಚಿಂತನೆಯೊಂದಿಗೆ ಸರಕಾರ ಮಹತ್ವದ ಹೆಜ್ಜೆ ಇರಿಸಿದೆ ಎಂದರು.
ರಾಜ್ಯದಲ್ಲಿ ಉದ್ಯಮ, ಐಟಿ-ಬಿಟಿ ಬೆಳವಣಿಗೆ ದೃಷ್ಟಿಯಿಂದ ಅನೇಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ದೇಶಕ್ಕೆ ಮೊದಲಿ ಗರಾಗಿದ್ದೇವೆ. ಒಟ್ಟು ಉತ್ಪಾದನೆಯಲ್ಲಿ ನಮ್ಮ ಪಾಲು ಶೇ. 43 ಆಗಿದೆ. ಮುಂಬಯಿ-ಬೆಂಗಳೂರು ಕೈಗಾರಿಕಾ ಕಾರಿಡಾರ್ ಅಡಿ ಉದ್ಯಮಗಳ ಸ್ಥಾಪನೆಗೆ 3-4 ತಿಂಗಳಲ್ಲಿ ಮೂಲಸೌಕರ್ಯ ನೀಡಿಕೆ ಕಾರ್ಯ ಆರಂಭವಾಗಲಿದೆ.
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗಕ್ಕೆ 2-3 ತಿಂಗಳಲ್ಲಿ ಅನುಮೋದನೆ ದೊರೆಯುವ ವಿಶ್ವಾಸವಿದೆ. ರಾಜ್ಯದಲ್ಲಿ ನಾಲ್ಕು ಕಡೆ ಏರೋಸ್ಟ್ರಿಪ್ ಗಳು, ಆರು ಕಡೆ ಟೌನ್‌ಶಿಪ್ ಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಸಿಎಸ್‌ಆರ್‌ಗೆ ಮುಂದಾಗಿ ಆರ್ಥಿಕತೆ ಬೆಳವಣಿಗೆಯಲ್ಲಿ ಉದ್ಯಮಿಗಳ ಪಾತ್ರ ಮಹತ್ವದ್ದು. ಉದ್ಯಮಿಗಳು ಗೇಮ್ ಚೇಂಜರ್ ಆಗಿದ್ದಾರೆ. ಜಾಗತಿಕ ಹಾಗೂ ತಂತ್ರಜ್ಞಾನ ಬದಲಾವಣೆಗೆ ಹೊಂದಿಕೊಳ್ಳ ಬೇಕಾಗಿದ್ದು, ಅವಕಾಶಗಳ ಸಮರ್ಪಕ- ಸಮರ್ಥ ಬಳಕೆಗೆ ಮುಂದಾಗಬೇಕಿದೆ. ಉದ್ಯಮಗಳ ಚಿಂತನಾ ಲಹರಿ ಬದ ಲಾಗಬೇಕಾಗಿದೆ. ರಾಜ್ಯ ಸಮೃದ್ಧವಾಗಬೇಕಾದರೆ ಜನತೆ ಶ್ರೀಮಂತರಾಗಬೇಕು, ಜನರ ಜೀವನಮಟ್ಟ ಸುಧಾರಿಸಲು ವಾಣಿಜ್ಯೋ ದ್ಯಮಿಗಳು ಸಿಎಸ್‌ಆರ್ ಕಾರ್ಯಕ್ಕೆ ಮುಂದಾಗಬೇಕು ಎಂದರು.
ಸಚಿವರಾದ ಡಾ| ಮುರುಗೇಶ ನಿರಾಣಿ, ಬಿ.ಸಿ.ಪಾಟೀಲ್, ಶಂಕರ ಪಾಟೀಲ್ ಮುನೇನಕೊಪ್ಪ, ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಶಾಸಕ ಅರವಿಂದ ಬೆಲ್ಲದ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ|ಇ.ವಿ.ರಮಣ ರೆಡ್ಡಿ ಇನ್ನಿತರರಿದ್ದರು. ಎಫ್‌ಕೆಸಿಸಿಐ ಅಧ್ಯಕ್ಷ ಡಾ| ಐ.ಎಸ್.ಪ್ರಸಾದ, ಕೆಸಿಸಿಐ ಅಧ್ಯಕ್ಷ ವಿನಯ ಜವಳಿ ಪ್ರಾಸ್ತಾವಿಕ ಮಾತನಾಡಿದರು. ರಾಜ್ಯದ ವಿವಿಧ ಜಿಲ್ಲೆಗಳ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಪದಾಧಿಕಾರಿಗಳು ಸಹಿತ ಸುಮಾರು 600ಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಂಡಿದ್ದರು.
ಪ್ರತಿ ತಾಲೂಕಿನಲ್ಲೂ ಜವಳಿ ಪಾರ್ಕ್
ಹಾವೇರಿ: ಚೀನದಲ್ಲಿ ಟೆಕ್ಸ್‌ಟೈಲ್ ಉದ್ಯಮ ಸ್ಥಗಿತಗೊಂಡಿದ್ದರಿಂದ ವಿದೇಶಿ ಕಂಪೆನಿಗಳು ಭಾರತದತ್ತ ಮುಖ ಮಾಡಿವೆ. ಆದ್ದರಿಂದ ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿ ತಾಲೂಕಿನಲ್ಲೂ ಜವಳಿ ಪಾರ್ಕ್ ನಿರ್ಮಾಣದ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶಿಗ್ಗಾವಿ ತಾಲೂಕಿನ ಖುರ್ಸಾಪುರ ಗ್ರಾಮದಲ್ಲಿ ಜವಳಿ ಪಾರ್ಕ್ ನಿರ್ಮಾಣ, ಟೆಕ್ಸ್‌ಪೋರ್ಟ್ ಇಂಡಸ್ಟ್ರೀಸ್‌ನ ಸಿದ್ಧ ಉಡುಪು ಘಟಕಕ್ಕೆ ಶನಿವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.