ರಾಜ್ಯದಲ್ಲಿ ಒಂದು ಕೋಟಿ ರಾಷ್ಟ್ರ ಧ್ವಜಗಳನ್ನು ಹಾರಿಸಲು ಕ್ರಮ: ಸಿಎಂ ಬೊಮ್ಮಾಯಿ


Team Udayavani, Jul 17, 2022, 7:56 PM IST

1-asdad-asds

ಬೆಂಗಳೂರು: 75ನೇ ಸ್ವಾತಂತ್ರ್ಯೋತ್ಸವ ಆಜಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ “ಹರ್ ಘರ್ ತಿರಂಗಾ ಕಾರ್ಯಕ್ರಮ”ವನ್ನು ಹಮ್ಮಿಕೊಂಡಿದ್ದು, ಕರ್ನಾಟಕ ರಾಜ್ಯದಲ್ಲಿ ಒಂದು ಕೋಟಿ ರಾಷ್ಟ್ರ ಧ್ವಜಗಳನ್ನು ಹಾರಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಹಾಗೂ ಕೇಂದ್ರ ಸಂಸ್ಕೃತಿ ಸಚಿವರಿಂದ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ “ಹರ್ ಘರ್ ತಿರಂಗಾ” ಕುರಿತ ಇಂದು ಬೆಂಗಳೂರು ನಗರದ ಶಾಂಘ್ರೀಲಾ ಹೊಟೇಲ್‌ನಲ್ಲಿ ನಡೆದ ವಿಡಿಯೋ ಸಂವಾದದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸರ್ಕಾರಿ, ಸರ್ಕಾರೇತರ, ಶಾಲಾ-ಕಾಲೇಜುಗಳಲ್ಲಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಉದ್ದೇಶದಿಂದ ಮುಖ್ಯ ಕಾರ್ಯದರ್ಶಿ ಅವರ ಅಡಿಯಲ್ಲಿ ಉನ್ನತ ಮಟ್ಟದ ಸಮಿತಿ ರೂಪಿಸಲಾಗಿದ್ದು, ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತಿ, ಪೊಲೀಸ್ ಸೇರಿದಂತೆ ಈಗಾಗಲೇ ಹರ್ ಘರ್ ತಿರಂಗಾ ಕಾರ್ಯಕ್ರಮ ಅನುಷ್ಠಾನಕ್ಕೆ ಸಭೆಗಳು ನಡೆಯುತ್ತಿವೆ ಎಂದರು.

ನಾಲ್ಕು ಭಾಗಗಳನ್ನಾಗಿ ವಿಭಾಗಿಸಲಾಗಿದ್ದು, ಶೇ. 60 ರಷ್ಟು ಗ್ರಾಮೀಣ ಪ್ರದೇಶ ಹಾಗೂ ಶೇ. 40 ರಷ್ಟು ಬಿಬಿಎಂಪಿ ವ್ಯಾಪ್ತಿ ಸೇರಿದಂತೆ ನಗರ ಪ್ರದೇಶಗಳ ಮನೆಗಳು, ಸರ್ಕಾರಿ ಕಚೇರಿ, ಶಾಲಾ-ಕಾಲೇಜಿಗಳಲ್ಲಿ ಧ್ವಜ ಹಾರಿಸುವ ಮೂಲಕ ಒಟ್ಟು ಒಂದು ಕೋಟಿ ರಾಷ್ಟ್ರೀಯ ತ್ರಿವರ್ಣ ಧ್ವಜವನ್ನು ಹಾರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ರಾಷ್ಟ್ರೀಯ ಧ್ವಜ ತಯಾರಿಸಿ, ದೇಶಾದ್ಯಂತ ಪೂರೈಸುತ್ತಿರುವ ಧಾರವಾಡದ ಬಳಿಯಿರುವ ರಾಷ್ಟ್ರ ಧ್ವಜ ಉತ್ಪಾದಕ ಸಂಸ್ಥೆ, ಸ್ವಸಹಾಯ ಸಂಘಗಳ ಮೂಲಕ 50 ಲಕ್ಷದಷ್ಟು ಧ್ವಜಗಳನ್ನು ಉತ್ಪಾದಿಸಲಿದ್ದೇವೆ. 5 ಲಕ್ಷ ತ್ರಿವರ್ಣ ಧ್ವಜಗಳನ್ನು ಪೂರೈಸಲು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಇಂಡೆಂಟ್ ನೀಡಲಾಗಿದ್ದು, ಉಳಿದ 45 ಲಕ್ಷ ತ್ರಿವರ್ಣ ಧ್ವಜಗಳನ್ನು ಪೂರೈಸಲು ಕೇಂದ್ರ ಸರ್ಕಾರಕ್ಕೆ ಇಂಡೆಂಟ್ ನೀಡಲಾಗುವುದು ಎಂದರು.
ಕಾರ್ಯಕ್ರಮದ ಎರಡು ದಿನಗಳ ಮೊದಲೇ ರಾಷ್ಟ್ರಧ್ವಜ ತಲುಪಲಿದೆ ಮಾತ್ರವಲ್ಲದೆ, ರಾಷ್ಟ್ರೀಯತೆ ಹಾಗೂ ದೇಶಭಕ್ತಿಯನ್ನು ಉತ್ತೇಜಿಸುವ ಕಾರ್ಯವನ್ನು ಯೋಗಸಂಘ ಹಾಗೂ ಎಸ್.ಹೆಚ್.ಜಿ ಗುಂಪುಗಳು ಮಾಡುತ್ತಿದ್ದು, ರಾಷ್ಟ್ರೀಯತೆ ಮತ್ತು ದೇಶಭಕ್ತಿ ಮೂಡಿಸುವ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಪಾತ್ರ ಮೆಚ್ಚುವಂತದ್ದು ಎಂದು ಹೇಳಿದರು.

ರಾಷ್ಟ್ರಧ್ವಜ ಎಂಬುದು ನಮ್ಮ ಭಾವನಾತ್ಮಕ ಸೆಲೆಯಾಗಿರುವುದರಿಂದ “ಹರ್ ಘರ್ ತಿರಂಗಾ” ಕಾರ್ಯಕ್ರಮ ರೂಪಿಸುವ ಮೂಲಕ ದೇಶದಲ್ಲಿ ಏಕತೆಯನ್ನು ಸಾರುತ್ತಿರುವುದಕ್ಕೆ ಸಂತಸವಾಗುತ್ತಿದೆ ಎಂದರು.

ಎಲ್ಲಾ ಸರ್ಕಾರಿ ಅಧಿಕಾರಿಗಳಿಗೆ ಈಗಾಗಲೇ ಸುತ್ತೋಲೆಗಳನ್ನು ನೀಡಲಾಗಿದ್ದು, ಎಲ್ಲಾ ಶಾಲಾ, ಕಾಲೇಜು, ಅಂಗನವಾಡಿಗಳಲ್ಲೂ ರಾಷ್ಟ್ರಧ್ವಜ ಹಾರಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ ಮಾತ್ರವಲ್ಲದೆ, ಕರ್ನಾಟಕದಲ್ಲಿರುವ ಎನ್.ಸಿ.ಸಿ., ಎನ್.ಎಸ್.ಎಸ್. ಸ್ವಯಂ ಸೇವಕರು, ಮಾಜಿ ಸೈನಿಕರನ್ನು ಒಳಗೊಂಡಂತೆ ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಲಾಗುತ್ತಿದೆ ಎಂದು ಹೇಳಿದರು.

ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಮಾತನಾಡಿ, “ಹರ್ ಘರ್ ತಿರಂಗಾ” ಕಾರ್ಯಕ್ರಮದ ಕುರಿತು ಎಲ್ಲಾ ಹಂತದಲ್ಲೂ ಅಗತ್ಯ ಮತ್ತು ವ್ಯಾಪಕ‌ ಪ್ರಚಾರ ನೀಡುವಂತೆ ತಿಳಿಸಿದರಲ್ಲದೆ, ಆಗಸ್ಟ್ 13 ರಿಂದ 15 ರವರೆಗೆ ಮೂರು ದಿನಗಳ ಕಾಲ ದೇಶಾದ್ಯಂತ 20 ಕೋಟಿ ರಾಷ್ಟ್ರ ಧ್ವಜಗಳನ್ನು ಹಾರಿಸಲು ಕ್ರಮವಹಿಸಬೇಕು ಎಂದರು.

ಕಾರ್ಯಕ್ರಮ ಯಶಸ್ವಿ

ಕೇವಲ ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಮಾತ್ರವಲ್ಲದೆ, ಜನತೆಯ ಸಹಭಾಗಿತ್ವವು ಪ್ರಮುಖವಾಗಿರುವುದರಿಂದ 100 ಕೋಟಿ ಜನತೆಯನ್ನು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಲು ಉತ್ತೇಜಿಸಬೇಕು ಎಂದರು.

ಭಾರತ ದೇಶವು ಇದೀಗ ಹಲವಾರು ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದು, ವಿಶ್ವದಲ್ಲೇ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ದೇಶದಲ್ಲಿ ‘ಹರ್ ಘರ್ ತಿರಂಗಾ” ಕಾರ್ಯಕ್ರಮ ನಡೆಸುತ್ತಿರುವುದೇ ಗೌರವದ ವಿಷಯ ಎಂದರು.

ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಸರ್ಕಾರಿಯ ಎಲ್ಲಾ ಜಾಹೀರಾತುಗಳಲ್ಲಿ ಈ ಕಾರ್ಯಕ್ರಮದ ಕುರಿತು ಪ್ರಕಟಿಸಬೇಕು ಎಂದರಲ್ಲದೆ, ಅಂಚೆ ಕಚೇರಿಗಳಲ್ಲಿ ರಾಷ್ಟ್ರಧ್ವಜಗಳು ಲಭ್ಯವಿರಲಿದ್ದು, ಇಂಡೆಂಟ್ ನೀಡುವ ಮೂಲಕ ಜನರು ವೈಯಕ್ತಿಕವಾಗಿ ಹಾಗೂ ಸರ್ಕಾರದವರು ಖರೀದಿಸಬಹುದಾಗಿದೆ ಎಂದು ಹೇಳಿದರು‌.

ಆಗಸ್ಟ್ 13 ರಿಂದ 15 ರವರೆಗೆ ಮೂರು ದಿನಗಳ ಅವಧಿಯಲ್ಲಿ ಜನತೆಯು ಹಾರಿಸಲಾಗುವ ರಾಷ್ಟ್ರಧ್ವಜದೊಂದಿಗೆ ಸ್ವಂತಿಯೊಂದನ್ನು ಪಡೆದು, ಕೇಂದ್ರ ಸರ್ಕಾರದ ಜಾಲತಾಣದಲ್ಲಿ ಅಪ್‌ಲೋಡ್ ಮಾಡಬಹುದಾಗಿದೆ ಎಂದು ತಿಳಿಸಿದರು.

ವಿಡಿಯೋ ಸಂವಾದದದಲ್ಲಿ ಕೇಂದ್ರ ಸಂಸ್ಕೃತಿ ಸಚಿವರಾದ ಕಿಶನ್ ರೆಡ್ಡಿ, ಎಲ್ಲಾ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಸುನಿಲ್ ಕುಮಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಂಜುಳಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಡಾ. ಪಿ.ಎಸ್.ಹರ್ಷ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.