ರಾಷ್ಟ್ರಪತಿ ಚುನಾವಣೆ: ಮತದಾನಕ್ಕೆ ರಾಜ್ಯದಲ್ಲೂ ಸಿದ್ಧತೆ: ಇಂದು ಮತದಾನ

ರಾಜ್ಯದಲ್ಲಿ 224 ಶಾಸಕರು, ಇಬ್ಬರು ಸಂಸದರಿಂದ ಹಕ್ಕು ಚಲಾವಣೆ; 70ಕ್ಕೂ ಹೆಚ್ಚು ಸಿಬಂದಿ ನಿಯೋಜನೆ

Team Udayavani, Jul 18, 2022, 6:05 AM IST

ರಾಷ್ಟ್ರಪತಿ ಚುನಾವಣೆ: ಮತದಾನಕ್ಕೆ ರಾಜ್ಯದಲ್ಲೂ ಸಿದ್ಧತೆ: ಇಂದು ಮತದಾನ

ಬೆಂಗಳೂರು: ದೇಶದ 16ನೇ ರಾಷ್ಟ್ರಪತಿ ಆಯ್ಕೆಗೆ ಜು.18ರಂದು ಮತದಾನ ನಡೆಯಲಿದ್ದು, ಅದರಂತೆ ರಾಜ್ಯದಲ್ಲೂ ಮತದಾನಕ್ಕೆ ವಿಧಾನಸೌಧದ 106ನೇ ಸಂಖ್ಯೆಯ ಕೊಠಡಿ ಸಜ್ಜುಗೊಂಡಿದೆ.

ರಾಷ್ಟ್ರಪತಿ ಚುನಾವಣೆಗೆ ಮತದಾರರಾಗಿರುವ 224 ಶಾಸಕರ ಜತೆಗೆ ವಿಶೇಷ ಅನುಮತಿ ಪಡೆದಿರುವ ಇಬ್ಬರು ಸಂಸದರು ವಿಧಾನಸೌಧದಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆ ವರೆಗೆ ಮತದಾನ ಮಾಡಲಿದ್ದಾರೆ.

ಕೇಂದ್ರ ಚುನಾವಣ ಆಯೋಗದ ವಿಶೇಷ ವೀಕ್ಷಕ ಅಮಿತ್‌ ಕುಮಾರ್‌ ಘೋಷ್‌ ಮಾರ್ಗದರ್ಶನದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಹಾಗೂ ಸಹಾಯಕ ಚುನಾವಣಾ ಧಿಕಾರಿಯೂ ಆಗಿರುವ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರ ನೇತೃತ್ವದಲ್ಲಿ ಮತದಾನಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಸಾಮಾನ್ಯವಾಗಿ ಲೋಕಸಭಾ ಸದಸ್ಯರು ಸಂಸತ್ತಿನಲ್ಲಿ ಮತ ಚಲಾಯಿಸಬೇಕು. ಆದರೆ ವಿಶೇಷ ಸಂದರ್ಭಗಳಲ್ಲಿ ಕೇಂದ್ರ ಚುನಾವಣ ಆಯೋಗದ ಅನುಮತಿ ಪಡೆದು ಆಯಾ ರಾಜ್ಯಗಳಲ್ಲೂ ಸಂಸದರು ಮತ ಹಾಕಬಹುದು. ಅದರಂತೆ, ಚಾಮರಾಜ ನಗರದ ಸಂಸದ ವಿ. ಶ್ರೀನಿವಾಸ ಪ್ರಸಾದ್‌ ಹಾಗೂ ರಾಜ್ಯ ಸಭಾ ಸದಸ್ಯರಾಗಿರುವ ಎಚ್‌.ಡಿ. ದೇವೇಗೌಡರು ವಿಧಾನಸೌಧದಲ್ಲಿ ಮತ ಚಲಾಯಿಸಲಿದ್ದಾರೆ.

ರಾಜ್ಯದಲ್ಲೇ ದೇವೇಗೌಡ,
ಶ್ರೀನಿವಾಸ ಪ್ರಸಾದ್‌ ಮತದಾನ
ಶ್ರೀನಿವಾಸ ಪ್ರಸಾದ್‌ ಅವರು 10 ದಿನಗಳ ಹಿಂದೆಯೇ ಚುನಾವಣ ಆಯೋಗದಿಂದ ಅನುಮತಿ ಪಡೆದು ಕೊಂಡಿದ್ದರು. ಎಚ್‌.ಡಿ. ದೇವೇಗೌಡರಿಗೆ ಆರೋಗ್ಯದ ಸಮಸ್ಯೆ ಹಿನ್ನೆಲೆ ಯಲ್ಲಿ ಆಯೋಗದಿಂದ ವಿಶೇಷ ಅನುಮತಿ ಪಡೆದುಕೊಳ್ಳಲಾಗಿದೆ ಎಂದು ವಿಧಾನಸಭೆ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರಪತಿ ಚುನಾವಣೆಗೆ ಗೌಪ್ಯ ಮತದಾನ ನಡೆಯಲಿದ್ದು, ವಿಧಾನಸೌಧದ 106ನೇ ಸಂಖ್ಯೆಯ ಕೊಠಡಿಯನ್ನು ಮತದಾನ ಕೇಂದ್ರವನ್ನಾಗಿ ಮಾಡಲಾಗಿದೆ. ಇಲ್ಲಿ ಎರಡು ಭಾಗಗಳನ್ನು ಮಾಡಲಾಗಿದೆ. ವಿಧಾನ ಸಭೆ ಸಚಿವಾಲಯ ಹಾಗೂ ಮುಖ್ಯ ಚುನಾವಣಾ ಧಿಕಾರಿಗಳ ಕಚೇರಿ ಅಧಿಕಾರಿಗಳು ಸೇರಿ ಒಟ್ಟು 70ಕ್ಕೂ ಹೆಚ್ಚು ಸಿಬಂದಿಯನ್ನು ಮತದಾನ ಪ್ರಕ್ರಿಯೆಯ ನಿರ್ವಹಣೆಗೆ ನಿಯೋಜಿಸ ಲಾಗಿದೆ. ವಿದ್ಯುತ್‌ ಹಾಗೂ ಮತ್ತಿತರ ತಾಂತ್ರಿಕ ವಿಷಯಗಳ ನಿರ್ವಹಣೆಗೆ ಲೋಕೋಪಯೋಗಿ ಇಲಾಖೆ ಸಿಬಂದಿಯನ್ನು ನೇಮಿಸಲಾಗಿದೆ. ಭದ್ರತೆಗೆ ಅಗತ್ಯ ಪೊಲೀಸ್‌ ಸಿಬಂದಿಯನ್ನು ನಿಯೋಜಿಸಲಾಗಿದೆ ಮತದಾನ ಕೇಂದ್ರಕ್ಕೆ ಸಿಸಿ ಟಿವಿ ಕೆಮರಾ ಅಳವಡಿಸಲಾಗಿದೆ.

ಪ್ರತ್ಯೇಕ ವ್ಯವಸ್ಥೆ
ಮತದಾನಕ್ಕಾಗಿ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಬಂದಾಗ ಸರತಿ ಸಾಲು ಹಾಗೂ ದಟ್ಟಣೆ ತಪ್ಪಿಸಲು ವಿಧಾನಸೌಧದ ಕೊಠಡಿ ಸಂಖ್ಯೆ 109 ಅನ್ನು “ವೇಟಿಂಗ್‌ ರೂಂ’ ಮಾಡಲಾಗಿದೆ. ಇಲ್ಲಿ ಚುನಾವಣೆಗಳು, ಮತದಾರರ ಜಾಗೃತಿಗೆ ಸಂಬಂಧಿಸಿದ ಸಾಕ್ಷ್ಯಚಿತ್ರಗಳ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ವೇಟಿಂಗ್‌ ರೂಂ ಹಾಗೂ ಮತದಾನ ಕೇಂದ್ರದ ಕೊಠಡಿಯವರೆಗೆ ಚುನಾವಣೆ ಮತ್ತು ಮತದಾರರ ಜಾಗೃತಿಗೆ ಸಂಬಂಧಿಸಿದ ವಿಶೇಷ ಪೋಸ್ಟರ್‌ಗಳನ್ನು ಅಳವಡಿಸಲಾಗಿದೆ.

ಕೇಂದ್ರ ಚುನಾವಣ ಆಯೋಗದ ಮಾರ್ಗದರ್ಶನದಂತೆ ರಾಷ್ಟ್ರಪತಿ ಚುನಾವಣೆಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ವಿಧಾನಸೌಧದ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯಲಿದೆ. ಗೌಪ್ಯ ಮತದಾನ ಆಗಿರುತ್ತದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‌ ಕುಮಾರ್‌ ಮೀನಾ ಹೇಳಿದ್ದಾರೆ.

ಮತದಾನ: ಬಿಜೆಪಿ ಶಾಸಕರಿಗೆ “ಅಭ್ಯಾಸ ವರ್ಗ’
ರಾಷ್ಟ್ರಪತಿ ಚುನಾವಣೆಗೆ ಮತದಾನದ ಬಗ್ಗೆ ರವಿವಾರ ಬಿಜೆಪಿಯು ಸಚಿವರು, ಶಾಸಕರಿಗೆ ತರಬೇತಿ ಶಿಬಿರ ಹಮ್ಮಿಕೊಂಡಿತ್ತು. ರವಿವಾರ ನಗರದ ಹೊಟೇಲ್‌ನಲ್ಲಿ ಜರಗಿದ ಒಂದು ದಿನದ ಈ ತರಬೇತಿ ಶಿಬಿರದಲ್ಲಿ ಅಣಕು ಮತದಾನ ಪ್ರಕ್ರಿಯೆ ನಡೆಯಿತು. ಮತ ಚಲಾಯಿಸುವ ರೀತಿ, ಅನುಸರಿಸುವ ಕ್ರಮಗಳ ಬಗ್ಗೆ ವಿವರಿಸಲಾಯಿತು. ಖುದ್ದು ದಿಲ್ಲಿಯಲ್ಲಿ ತರಬೇತಿ ಪಡೆದು ಬಂದಿದ್ದ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಇಂಧನ ಸಚಿವ ವಿ. ಸುನಿಲ್‌ ಕುಮಾರ್‌ ಹಾಗೂ ಶಾಸಕ ಅಭಯ್‌ ಪಾಟೀಲ್‌ ನೇತೃತ್ವ ವಹಿಸಿದ್ದರು. ಬಿಜೆಪಿಯ ಬಹುತೇಕ ಎಲ್ಲ ಶಾಸಕರು ತರಬೇತಿಯಲ್ಲಿ ಭಾಗವಹಿಸಿದ್ದರು. ತರಬೇತಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರವಿ, ಕಳೆದ ಬಾರಿ ಇದೇ ಚುನಾಯಿತ ಪ್ರತಿನಿಧಿಗಳ 17 ಮತಗಳು ಅಸಿಂಧುವಾ ಗಿದ್ದವು. ಹಾಗೆ ಆಗಬಾರದೆಂಬ ಕಾರಣಕ್ಕೆ ಬಿಜೆಪಿ ಇಡೀ ದೇಶದಲ್ಲಿ ಅಣಕು ಮತದಾನವನ್ನು ಏರ್ಪಡಿಸಿ ತರಬೇತಿ ಕೊಡಲಾಗುತ್ತಿದೆ ಎಂದು ತಿಳಿಸಿದರು.

ರಾಷ್ಟ್ರಪತಿ ಚುನಾವಣೆಯ ಮತದಾನಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಕೇಂದ್ರ ಚುನಾವಣ ಆಯೋಗದ ವೀಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮತದಾನ ಪ್ರಕ್ರಿಯೆಯಲ್ಲಿ ಗರಿಷ್ಠ ಗೌಪ್ಯತೆ ಕಾಪಾಡಿಕೊಳ್ಳುವಂತೆ ಚುನಾವಣ ಆಯೋಗ ಸೂಚನೆ ನೀಡಿದೆ.
– ಎಂ.ಕೆ. ವಿಶಾಲಾಕ್ಷಿ, ಸಹಾಯಕ ಚುನಾವಣಾಧಿಕಾರಿ

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.