ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ
Team Udayavani, Jul 18, 2022, 8:51 AM IST
ಕೊಲಂಬೋ: ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರು ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದ್ದಾರೆ. ಆಡಳಿತವು ಸಾಮಾಜಿಕ ಅಶಾಂತಿಯನ್ನು ತಗ್ಗಿಸಲು ಮತ್ತು ದ್ವೀಪ ರಾಷ್ಟ್ರದಲ್ಲಿ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸಲು ಪ್ರಯತ್ನಿಸುತ್ತಿದೆ ಎಂದು ಭಾನುವಾರ ತಡರಾತ್ರಿ ಬಿಡುಗಡೆಯಾದ ಸರ್ಕಾರದ ಸೂಚನೆ ತಿಳಿಸಿದೆ.
“ಸಾರ್ವಜನಿಕ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆಯ ರಕ್ಷಣೆ ಮತ್ತು ಸಮುದಾಯದ ಜೀವನಕ್ಕೆ ಅಗತ್ಯವಾದ ಸರಬರಾಜು ಮತ್ತು ಸೇವೆಗಳ ನಿರ್ವಹಣೆಯ ಹಿತದೃಷ್ಟಿಯಿಂದ ತುರ್ತು ಪರಿಸ್ಥಿತಿ ಘೋಷಣೆ ಸೂಕ್ತವಾಗಿದೆ” ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಶ್ರೀಲಂಕಾದ ಉಚ್ಛಾಟಿತ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ತಮ್ಮ ಸರ್ಕಾರದ ವಿರುದ್ಧದ ಜನರ ದಂಗೆಯಿಂದ ತಪ್ಪಿಸಿಕೊಳ್ಳಲು ವಿದೇಶಕ್ಕೆ ಪಲಾಯನ ಮಾಡಿದ್ದಾರೆ.
ಇದನ್ನೂ ಓದಿ:ಏರ್ ಪೋರ್ಟ್ ನಲ್ಲಿ ಎರಡು ವಿಮಾನಗಳ ಢಿಕ್ಕಿ: ನಾಲ್ವರು ಸಾವು
ವಾರದ ಹಿಂದೆ ನಡೆದ ಗಲಭೆಯಲ್ಲಿ ಲಕ್ಷಾಂತರ ಪ್ರತಿಭಟನಾಕಾರರು ಕೊಲಂಬೊದಲ್ಲಿ ಅವರ ಅಧಿಕೃತ ನಿವಾಸ ಮತ್ತು ಕಚೇರಿಗಳಿಗೆ ಮುತ್ತಿಗೆ ಹಾಕಿದ್ದರು. ಈ ವೇಳೆ ದೇಶದಿಂದ ಪಲಾಯನ ಮಾಡಿದ್ದ ಗೋಟಬಯ ಮಾಲ್ಡೀವ್ಸ್ ತೆರಳಿ, ನಂತರ ಅಲ್ಲಿಂದ ಸಿಂಗಾಪುರಕ್ಕೆ ಹಾರಿದರು. ಗೋಟಬಯ ರಾಜಪಕ್ಸೆ ಅವರ ರಾಜೀನಾಮೆಯನ್ನು ಸಂಸತ್ತು ಶುಕ್ರವಾರ ಅಂಗೀಕರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Bengaluru: ‘ಪೊಲೀಸರ ಹೆಸರಿನ ನಕಲಿ ಕರೆ ಬಗ್ಗೆ ಎಚ್ಚರ ವಹಿಸಿ’
FIP Padel: ಭಾರತದ ಮೊದಲ ಎಫ್‌ಐಪಿ ಪ್ಯಾಡಲ್ ಟೂರ್ನಮೆಂಟ್ ಆರಂಭ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.