ನಾವು ಬದಲಾಗುವುದು ಯಾವಾಗ? ಸುಧಾರಣೆಗಳು ಎಂದು?: ಸಿನಿಮಾ ಉದಾಹರಣೆ ನೀಡಿದ ಎಚ್ ಡಿಕೆ
Team Udayavani, Jul 18, 2022, 10:12 AM IST
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸರಣಿ ಟ್ವೀಟ್ ಗಳನ್ನು ಮಾಡಿ, ದೇಶದ ನ್ಯಾಯ ವ್ಯವಸ್ಥೆ ಮತ್ತು ಸಾಮಾಜಿಕ ವ್ಯವಸ್ಥೆಗಳ ಕುರಿತಾಗಿ ಚಲನಚಿತ್ರಗಳ ಉದಾಹರಣೆಯೊಂದಿಗೆ ಹಲವಾರು ವಿಚಾರ ಹಂಚಿಕೊಂಡಿದ್ದಾರೆ.
ಕೋವಿಡ್ ಸೋಂಕಿನಿಂದ ಒಂದು ವಾರ ಮನೆಯಲ್ಲೇ ಚಿಕಿತ್ಸೆ ಪಡೆದ ನಾನು, ಓದು ಮತ್ತು ಸಿನಿಮಾ ವೀಕ್ಷಣೆಯಲ್ಲಿಯೇ ಸಮಯ ಕಳೆದೆ. ಈ ಬಿಡುವಿನಲ್ಲಿ ಎರಡು ಸಿನಿಮಾಗಳನ್ನು ವೀಕ್ಷಿಸಿದೆ. 1.ʼಜೈ ಭೀಮ್ʼ. 2.ಜನ ಗಣ ಮನ. ಸೂಕ್ಷ್ಮ ಕಥಾಹಂದರದ ಈ ಸಿನಿಮಾಗಳೆರಡೂ ನನ್ನ ಮನ ಕಲಕಿವೆ, ಮತ್ತೂ ತೀವ್ರ ತಳಮಳಕ್ಕೆ ಕಾರಣವೂ ಆಗಿವೆ. ಸುಪ್ರೀಂ ಕೋರ್ಟ್ ಸಿಜೆಐ ರಮಣ ಅವರು; ವಿಚಾರಣಾಧೀನ ಕೈದಿಗಳ ದುಸ್ಥಿತಿಯ ಬಗ್ಗೆ ಜೈಪುರದಲ್ಲಿ ನೀಡಿದ್ದ ಹೇಳಿಕೆ ಮತ್ತು ʼಜೈ ಭೀಮ್ʼ ಚಿತ್ರದಲ್ಲಿ ಅದೇ ಕೈದಿಗಳ ಸುತ್ತ ಬಿಚ್ಚಿಕೊಳ್ಳುವ ಕಠೋರ ಕಹಿಸತ್ಯಗಳ ಬಗ್ಗೆ ಇಡೀ ಭಾರತವೇ ಆಲೋಚಿಸಬೇಕು. ನಾನು ಆಲೋಚಿಸುತ್ತಿದ್ದೇನೆ. ಬದಲಾವಣೆಗೆ ಖಂಡಿತಾ ಪ್ರಯತ್ನಿಸುವೆ ಎಂದಿದ್ದಾರೆ.
ಭಾರತೀಯ ನ್ಯಾಯ ವ್ಯವಸ್ಥೆ ಬಡವರು ದಲಿತರು, ಅಶಕ್ತರಿಗೆ ಗಗನ ಕುಸುಮವಾ? ಓರ್ವ ಸಿರಿವಂತ ಅಪರಾಧಿಗೆ ಕೆಲ ಗಂಟೆಗಳಲ್ಲೇ ಜಾಮೀನು ಸಿಕ್ಕಿದರೆ, ಅದೇ ಬಡ ಅಪರಾಧಿಗಳ (ಅನೇಕ ಪ್ರಕರಣಗಳಲ್ಲಿ ಮುಗ್ಧರು) ಅರ್ಜಿಗಳಿಗೆ ಮೋಕ್ಷವೇ ಕಾಣುವುದಿಲ್ಲ. ಸರಳುಗಳ ಹಿಂದಿನ ನರಕವನ್ನು ʼಜೈ ಭೀಮ್ʼ ನೈಜವಾಗಿ ತೋರಿಸಿದೆ. ಸಿಜೆಐ ಹೇಳಿದ್ದು ಇದನ್ನೇ. ವಿಚಾರಣೆಯೇ ಇಲ್ಲದೆ ಕೈದಿಗಳ ದೀರ್ಘಾವಧಿ ಸೆರೆ ಪ್ರಶ್ನಾರ್ಹ. ನಮ್ಮ ದೇಶದಲ್ಲಿ ಸೆರೆವಾಸದಲ್ಲಿರುವ 6.10 ಲಕ್ಷ ಕೈದಿಗಳಲ್ಲಿ ಶೇ.80ರಷ್ಟು ಜನ ವಿಚಾರಣಾಧೀನ ಕೈದಿಗಳೇ! ಇವರೆಲ್ಲರೂ ವಿಚಾರಣೆ ಪೂರ್ಣಗೊಳ್ಳದೇ ಕಂಬಿಗಳ ಹಿಂದೆ ಜೀವಶ್ಚವಗಳಂತೆ ಬದುಕುತ್ತಿದ್ದಾರೆ ಎಂದಿದ್ದಾರೆ.
2017ರಲ್ಲಿ ಛತ್ತೀಸಗಢದಲ್ಲಿ ಸಿಆರ್ ಪಿಎಫ್ ಜವಾನರ ಮೇಲೆ ನಡೆದ ದಾಳಿ ಪ್ರಕರಣದಲ್ಲಿ 121 ಬುಡಕಟ್ಟು ಜನರನ್ನು ಬಂಧಿಸಲಾಗಿತ್ತು. ಐದು ವರ್ಷ ಅವರು ಜೈಲುಗಳಲ್ಲಿ ನರಕ ಅನುಭವಿಸಿದರು. ಕೊನೆಗೆ ಅವರ ಪಾತ್ರದ ಬಗ್ಗೆ ಸಾಕ್ಷ್ಯ ಇಲ್ಲ ಎಂದು ಎನ್ಐಎ ಕೋರ್ಟ್ ತೀರ್ಪು ನೀಡಿ, ಆ ಮುಗ್ಧರನ್ನು ಖುಲಾಸೆಗೊಳಿಸಿದೆ. ಇದು ಸಮಾಧಾನದ ಸಂಗತಿ. ಹಾಗಾದರೆ, 5 ವರ್ಷಗಳ ಅವರ ಸೆರೆವಾಸಕ್ಕೆ ಉತ್ತರದಾಯಿಗಳು ಯಾರು? ಅವರ ಕುಟುಂಬ ಸದಸ್ಯರು ಅನುಭವಿಸಿದ ಕಷ್ಟಕ್ಕೆ ಪರಿಹಾರವೇನು ಎಂದು ಎಚ್ ಡಿಕೆ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ:ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ
ಆತುರಗೆಟ್ಟ ಆರೋಪ ಪಟ್ಟಿ, ವಿವೇಚನೆ ಇಲ್ಲದ ಬಂಧನ, ಜಾಮೀನು ಪಡೆಯಲು ಹೆಣಗಾಟದ ಕರಾಳತೆಯ ಮೇಲೆ ʼಜೈ ಭೀಮ್ʼ ಬೆಳಕು ಚೆಲ್ಲಿದೆ. ಸಿಜೆಐ ಇದನ್ನೇ ಹೇಳಿ ಕಳವಳ ವ್ಯಕ್ತಪಡಪಡಿಸಿದ್ದಾರೆ. ಅವರ ದನಿ ದೇಶಕ್ಕೇ ಕೇಳಿಸಿದೆ. ಹಾಗಾದರೆ, ನಾವು ಬದಲಾಗುವುದು ಯಾವಾಗ? ಸುಧಾರಣೆಗಳು ಎಂದು? ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುವೆ ಎಂದಿದ್ದಾರೆ.
ಸಂವಿಧಾನ ನಮಗೆ ಶ್ರೇಷ್ಠ ನ್ಯಾಯಾಂಗವನ್ನು ಕೊಟ್ಟಿದೆ. ಕಷ್ಟ ಎದುರಾದಾಗ ಬಿಲಿನಿಯರ್ ನಿಂದ ಕಟ್ಟಕಡೆಯ ಬಡಪ್ರಜೆವರೆಗೂ ಎಲ್ಲರೂ ಕೋರ್ಟ್ ಕಡೆ ನೋಡುತ್ತಾರೆ. ಎಲ್ಲರೂ ಇಲ್ಲಿ ಸಮಾನರು. ಅದು ಹಕ್ಕು ಹೌದು. ತಮಿಳುನಾಡಿನ ಕಡಲೂರಿನಲ್ಲಿ ನಡೆದ ನೈಜ ಘಟನೆ ಆಧರಿಸಿದ ‘ಜೈ ಭೀಮ್’ ಚಿತ್ರ ಮನುಷ್ಯತ್ವಕ್ಕೆ ಸವಾಲೆಸೆಯುವ ಅನೇಕ ಪ್ರಶ್ನೆಗಳನ್ನು ಎತ್ತಿದೆ. ʼಜನ ಗಣ ಮನʼ ಚಿತ್ರ ಇವತ್ತಿನ ರಾಜಕೀಯ ಕಪಟತೆ, ಕುಟಿಲತೆ, ಲಂಪಟತೆಯನ್ನು ಮನೋಜ್ಞವಾಗಿ ತೆರೆದಿಟ್ಟಿದೆ. ರಾಜಕೀಯದ ಕಪಿಮುಷ್ಠಿಗೆ ಸಿಲುಕಿ ನರಳುವ ವ್ಯವಸ್ಥೆಯ ಅಸಹಾಯಕ ಮುಖದ ದರ್ಶನ ಮಾಡಿಸಿದೆ. ವ್ಯವಸ್ಥೆಗೆ ಕನ್ನಡಿಯಂತಿರುವ ಸಿನಿಮಾಗಳು ಆವೇಶಕ್ಕೆ, ಆಲೋಚನೆಗೆ ದೂಡುತ್ತವೆ. ಎರಡೂ ಚಿತ್ರಗಳ ನಿರ್ದೇಶಕರು ಅಭಿನಂದನಾರ್ಹರು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.