ಜಿಲ್ಲೆಯಲ್ಲಿ 1,840 ಮೀ. ಕಡಲು ಕೊರೆತ: ತಾತ್ಕಾಲಿಕ, ಶಾಶ್ವತ ಪರಿಹಾರಕ್ಕೆ ಪ್ರಸ್ತಾವನೆ
Team Udayavani, Jul 18, 2022, 12:36 PM IST
ಉಡುಪಿ: ಜಿಲ್ಲೆಯಲ್ಲಿ ಮಳೆ -ಗಾಳಿಯಿಂದ ವ್ಯಾಪಕ ಹಾನಿ ಸಂಭವಿಸಿದ್ದು, ಕಡಲ್ಕೊರೆತವು ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಸಮುದ್ರ ಪ್ರಕ್ಯುಬ್ಧಗೊಂಡು ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಪ್ರಸಕ್ತ ಸಾಲಿನಲ್ಲಿ ಜೂನ್, ಜುಲೈ ತಿಂಗಳ ಮಳೆಗೆ ಜಿಲ್ಲೆಯಲ್ಲಿ 1,840 ಮೀಟರ್ ಉದ್ದದಷ್ಟು ಕಡಲ್ಕೊರೆತ ಸಂಭವಿಸಿದೆ.
ಎಲ್ಲೆಲ್ಲಿ ಹಾನಿ?
ಬೈಂದೂರು ತಾಲೂಕಿನ ಮರವಂತೆ ಗ್ರಾಮದ ನಾಗಬನ ಬಳಿ 350 ಮೀ., ಕಿರಿಮಂಜೇಶ್ವರ ಗ್ರಾಮದ ಆದ್ರಗೋಳಿ ಸಮೀಪ 200 ಮೀ., ಕುಂದಾಪುರದ ಗುಜ್ಜಾಡಿ ಹೊಸಾಡು ಗ್ರಾಮದ ಕಂಚುಗೋಡಿನಲ್ಲಿ 250 ಮೀ., ಕಾಪು ತಾಲೂಕಿನ ಮುಳೂರಿನಲ್ಲಿ 200 ಮೀ., ಪಡುಬಿದ್ರಿಯ ನಡಿಪಟ್ನದಲ್ಲಿ 270 ಮೀ., ಕೈಪುಂಜಾಲುವಿನಲ್ಲಿ 240 ಮೀ., ಬ್ರಹಾವರ ಕೋಟ ಪಡುಕರೆಯಲ್ಲಿ 130 ಮೀ. ಹಾಗೂ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕುತ್ಪಾಡಿ ಕಡಲ ತೀರದಲ್ಲಿ 200 ಮೀ.ನಷ್ಟು ಕಡಲು ಕೊರೆತ ಸಂಭವಿಸಿದೆ. ಪರಿಣಾಮ ಸಮುದ್ರ ತೀರದಲ್ಲಿದ್ದ ಬಹುತೇಕ ತೆಂಗಿನ ಮರಗಳು ಧರೆಗೆ ಉರುಳಿವೆ. ರಸ್ತೆ ಹಾಗೂ ಮೀನುಗಾರಿಕೆ ದೋಣಿಗಳಿಗೆ ಹಾನಿಯಾಗಿವೆ.
ತುರ್ತು ಕಾಮಗಾರಿಗೆ ಪ್ರಸ್ತಾವನೆ
ಜಿಲ್ಲೆಯಲ್ಲಿ ಕಡಲ್ಕೊರೆತದಿಂದ ಆಗಿರುವ ಹಾನಿಗೆ ತುರ್ತು ಕಾಮಗಾರಿ ಮೂಲಕ ಸರಿಪಡಿಸಲು ಸರಕಾರಕ್ಕೆ 13.82 ಕೋ. ರೂ., ಅಂದಾಜು ಪ್ರಸ್ತಾವನೆ ಸಲ್ಲಿಸಲಾ ಗಿದೆ. ಮರವಂತೆ ನಾಗಬನದ ಬಳಿ ಕಡಲ ತೀರದಲ್ಲಿ 2.63 ಕೋ. ರೂ., ಗುಜ್ಜಾಡಿ ಹೊಸಾಡು ಕಂಚುಗೋಡು ಬಳಿ 1.88 ಕೋ. ರೂ., ಮುಳೂರು 1.50 ಕೋ. ರೂ., ನಡಿಪ್ಟಟ್ನ 2.03 ಕೋ, ರೂ., ಕೈಪುಂಜಾಲು 1.80 ಕೋ. ರೂ., ಕೋಟ ಪಡುಕರೆ 98 ಲಕ್ಷ ರೂ., ಕುತ್ಪಾಡಿ ಪಡುಕರೆಯಲ್ಲಿ 1.50 ಕೋ.ರೂ. ಅಗತ್ಯವಿದೆ ಎಂದು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.
ಹಾಗೆಯೇ ಇದೇ ಸ್ಥಳದಲ್ಲಿ ದೀರ್ಘಕಾಲದ ಕಾಮಗಾರಿಗೆ ಸುಮಾರು 20 ಕೋ.ರೂ. ಅವಶ್ಯವಿದೆ ಎಂದು ಉಲ್ಲೇಖೀಸಿದೆ. ಮರವಂತೆಯ ನಾಗಬನ ಬಳಿ ಪ್ರತಿಬಂಧಕ ಗೋಡೆ ನಿರ್ಮಿಸಲು 3.85 ಕೋ.ರೂ., ಕಂಚುಗೋಡಿಗೆ 2.75 ಕೋ.ರೂ., ಆದ್ರಗೋಳಿಗೆ 2.20 ಕೋ.ರೂ., ಮೂಳೂರಿಗೆ 2.20 ಕೋ.ರೂ., ನಡಿಪಟ್ನಕ್ಕೆ 2.97 ಕೋ.ರೂ., ಕೈಪುಂಜಾಲುಗೆ 2.64 ಕೋ.ರೂ., ಕೋಟ ಪಡುಕರೆಗೆ 1.43 ಕೋ.ರೂ. ಹಾಗೂ ಕುತ್ಪಾಡಿ ಪಡುಕರೆಗೆ 2.20 ಕೋ.ರೂ. ಶಾಶ್ವತ ಪರಿಹಾರಕ್ಕೆ ಅಗತ್ಯವಿದೆ ಎಂದು ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ.
ವೈಜ್ಞಾನಿಕವಾಗಿ ಕಾಮಗಾರಿ ನಡೆಸಬೇಕು
ಪ್ರತೀ ವರ್ಷ ಮಳೆಗಾಲದಲ್ಲಿ ಕಡಲ್ಕೊರೆತಕ್ಕೆ ತಡೆ ಒಡ್ಡಲು ಕಲ್ಲು ಹಾಕಲಾಗುತ್ತದೆ. ಇದರ ಬದಲಾಗಿ ಮಳೆಗಾಲಕ್ಕೂ ಮೊದಲೇ ಕಡಲ್ಕೊರೆತ ಆಗಬಲ್ಲ ಪ್ರದೇಶಗಳನ್ನು ಗುರುತಿಸಿ, ಅಲ್ಲಿಗೆ ವೈಜ್ಞಾನಿಕ ವಿಧಾನದ ಮೂಲಕ ಕಲ್ಲು ಹಾಕುವ ಪ್ರಕ್ರಿಯೆ ಶುರುವಾಗಬೇಕು. ಜನಪ್ರತಿನಿಧಿಗಳ ಒತ್ತಡಕ್ಕೆ ತಾತ್ಕಾಲಿಕವಾಗಿ ಕಲ್ಲು ಹಾಕುವುದು ಬಿಟ್ಟರೆ ಬೇರೆ ಯಾವುದೇ ಪ್ರಯೋಜನ ಇರುವುದಿಲ್ಲ. ಹೀಗಾಗಿ ಕಡಲ ತೀರದಲ್ಲಿ ವಾಸವಾಗಿ ರುವ ಕುಟುಂಬಗಳು ನೆಮ್ಮದಿಯಿಂದ ಜೀವನ ನಡೆಸ ಬೇಕಾದರೆ ವೈಜ್ಞಾನಿಕ ಕ್ರಮಗಳ ಮೂಲಕ ಕಾಮಗಾರಿ ನಡೆಸಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ
Bramavara: ವಿದ್ಯಾರ್ಥಿ ಕಾಲಿನ ಮೇಲೆ ಸಾಗಿದ ಪಿಕ್‌ಅಪ್
Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.