ಎಚ್‌ಐವಿ: 6 ತಿಂಗಳಲ್ಲಿ 57 ಮಂದಿ ಸಾವು!


Team Udayavani, Jul 18, 2022, 12:55 PM IST

10

ಉಡುಪಿ: ಜಿಲ್ಲೆಯಲ್ಲಿ ಎಚ್‌ಐವಿ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ವರ್ಷದ ಜನವರಿಯಿಂದ ಜೂನ್‌ ತಿಂಗಳವರೆಗೆ ಒಟ್ಟು 142 ಪ್ರಕರಣಗಳು ಕಂಡುಬಂದಿದ್ದು, 57 ಮಂದಿ ಸಾವನ್ನಪ್ಪಿದ್ದಾರೆ. ಗ್ರಾಮಾಂತರ ಹಾಗೂ ನಗರಭಾಗದಲ್ಲಿ ಸಮಾನ ರೀತಿಯಲ್ಲಿ ಈ ಸೋಂಕು ಕಾಣಿಸಿಕೊಳ್ಳುತ್ತಿದೆ.

ಜಿಲ್ಲಾಸ್ಪತ್ರೆಯಲ್ಲಿ ಎಆರ್‌ಟಿ ಕೇಂದ್ರಗಳ ಮೂಲಕ ತಪಾಣೆಯನ್ನು ಮಾಡಲಾಗುತ್ತಿದೆ. ಇವಿಷ್ಟೇ ಅಲ್ಲದೆ ಜಿಲ್ಲೆಯ ಬ್ರಹ್ಮಾವರ, ಬೈಂದೂರು, ಹೆಬ್ರಿ, ಕಾರ್ಕಳ, ನಿಟ್ಟೆಯಲ್ಲಿ ಲಿಂಕ್‌ ಎಆರ್‌ಟಿ ಕೇಂದ್ರಗಳಿವೆ. ಎಚ್‌ಐವಿ ಸೋಂಕಿತರಿಗೆ ಇಲ್ಲಿ ಪ್ರತೀ ತಿಂಗಳು ಕೆಲವು ಪರೀಕ್ಷೆಗಳನ್ನು ಮಾಡಲಾಗುತ್ತಿದೆ.

ಹರಡುವುದು ಹೇಗೆ?

ಮಾನವ ಶರೀರದ ರೋಗ ನಿರೋಧಕ ಶಕ್ತಿಯನ್ನು ಕುಂದಿಸಬಲ್ಲ ಈ ಸೋಂಕನ್ನು ಪೂರ್ಣಮಟ್ಟದಲ್ಲಿ ಗುಣಪಡಿಸುವ ಔಷಧಗಳೂ ಇಲ್ಲ. ಆದರೆ ಇದು ನೂರಕ್ಕೆ ನೂರರಷ್ಟು ಬರದಂತೆ ತಡೆಯಬಹುದಾದ ವಿಶಿಷ್ಠ ಗುಣವಿರುವ ಸೋಂಕು. ಅಸುರಕ್ಷಿತ ಲೈಂಗಿಕತೆ, ಸೋಂಕು ಇರುವ ವ್ಯಕ್ತಿಯ ರಕ್ತ ಪಡೆಯುವುದರಿಂದ, ಸೋಂಕು ಇರುವ ವ್ಯಕ್ತಿಯು ಉಪಯೋಗಿಸಿದ ಸಿರಿಂಜ್‌, ಸೂಜಿ ಮತ್ತು ಉಪಕರಣಗಳನ್ನು ಸಂಸ್ಕರಿ ಸದೆ ಬಳಸುವುದರಿಂದ, ಸೋಂಕಿರುವ ತಾಯಿಯಿಂದ ಜನಿಸುವ ಮಗುವಿಗೆ ಸೋಂಕು ಹರಡುವ ಸಾಧ್ಯತೆಗಳಿರುತ್ತವೆ.

ಸೋಂಕು ಲಕ್ಷಣವೇನು?

ಎಚ್‌.ಐ.ವಿ. ವೈರಸ್‌ಗಳು ದೇಹದ ರೋಗ ನಿರೋಧಕ ಶಕ್ತಿಯ ಜಾಲವನ್ನು ತುಂಡರಿಸಿ, ರೋಗಗಳ ವಿರುದ್ಧ ಹೋರಾಡುವ ಬಿಳಿರಕ್ತ ಕಣಗಳ ಶಕ್ತಿಯನ್ನು ದುರ್ಬಲಗೊಳಿಸಿ ಇಡೀ ದೇಹವನ್ನು ಆವರಿಸುತ್ತವೆ. ನಿರಂತರ ಜ್ವರ, ಬೇಧಿ, ಕೆಮ್ಮುವಿನಿಂದಾಗಿ ರೋಗಿಯ ದೇಹದ ತೂಕ ಕಡಿಮೆಯಾಗುತ್ತದೆ. ವ್ಯಕ್ತಿಗೆ ಎಚ್‌ .ಐ.ವಿ. ಸೋಂಕು ಉಂಟಾದಾಗ ಆ ವ್ಯಕ್ತಿಗೆ ಏಡ್ಸ್‌ ರೋಗ ಬೆಳವಣಿಗೆಯ ಹಂತ ತಲುಪುವವರೆಗೆ ಸೋಂಕಿನ ಯಾವುದೇ ಲಕ್ಷಣಗಳು ಕಂಡು ಬರುವುದಿಲ್ಲ. ರೋಗ ಲಕ್ಷಣಗಳು ಕಂಡು ಬರಲು 6 ತಿಂಗಳಿನಿಂದ 10 ವರ್ಷ ಅಥವಾ ಅದಕ್ಕೂ ಹೆಚ್ಚಿನ ಸಮಯ ತೆಗದುಕೊಳ್ಳಬಹುದು. ಅಲ್ಲಯ ತನಕ ಆ ವ್ಯಕ್ತಿ ಸಾಮಾನ್ಯವಾಗಿ ಮತ್ತು ಆರೋಗ್ಯವಂತನಾಗಿ ಕಾಣುತ್ತಾನೆ.

ಗರ್ಭಿಣಿಯರಿಗೆ ಕಡ್ಡಾಯ ಪರೀಕ್ಷೆ

ಜಿಲ್ಲೆಯಲ್ಲಿ ಎಲ್ಲ ಗರ್ಭಿಣಿಯರನ್ನೂ ಕಡ್ಡಾಯವಾಗಿ ಎಚ್‌ಐವಿ ತಪಾಸಣೆಗೆ ಒಳಪಡಿಸಲಾಗುತ್ತದೆ. ಪಾಸಿಟಿವ್‌ ಕಂಡುಬಂದರೆ ಆ ವ್ಯಾಪ್ತಿಯಲ್ಲಿ ಸೋಂಕಿನ ಪ್ರಮಾಣ ತಿಳಿದುಬರುತ್ತದೆ. ಸೆಂಟಿನಲ್‌ ಸರ್ವೇಯನ್ನೂ ಮಾಡಲಾಗುತ್ತದೆ. ಈ ಮೂಲಕವೂ ಸೋಂಕು ಪ್ರಸರಣದ ಬಗ್ಗೆ ತಿಳಿಯುತ್ತದೆ.

ಹೊರಜಿಲ್ಲೆಯವರೇ ಅಧಿಕ

ಜಿಲ್ಲೆಯ ಪಾಸಿಟಿವ್‌ ಪ್ರಕರಣಗಳಲ್ಲಿ ಅನ್ಯಜಿಲ್ಲೆಯ ಪಾಲೂ ಅಧಿಕವಿದೆ. ಬಾಗಲ ಕೋಟೆ, ಬಿಜಾಪುರ, ಚಾಮರಾಜನಗರ ದಲ್ಲಿ ಈ ಸೋಂಕು ಅಧಿಕವಿದೆ. ಅಂತಹ ವರಿಗೆ ಇಲ್ಲಿ ಚಿಕಿತ್ಸೆ ನೀಡಿ ಆ ಪ್ರಕರಣಗಳನ್ನು ಅವರ ಜಿಲ್ಲೆಗಳಿಗೆ ವರ್ಗಾಯಿಸಲಾಗುತ್ತದೆ. ಎಚ್‌ಐವಿ ಸೋಂಕಿಗೆ ಔಷಧವಿದ್ದರೂ ಸಂಪೂರ್ಣ ಗುಣಮುಖರಾಗುವುದು ಅಸಾಧ್ಯ. ಇದರ ತೀವ್ರತೆ ಹಬ್ಬುವುದನ್ನು ತಡೆಗಟ್ಟಬಹುದು ಎನ್ನುತ್ತಾರೆ ವೈದ್ಯರು.

ಜಾಗೃತಿ ಕಾರ್ಯಕ್ರಮ: ಎಚ್‌ಐವಿ ನಿಯಂತ್ರಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಮೂಲಕ ಹಲವಾರು ರೀತಿಯ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗುತ್ತಿದೆ. ಸೋಂಕಿತರಿಗೆ ಉಚಿತ ಔಷಧಗಳನ್ನೂ ನೀಡಲಾಗುತ್ತದೆ. ಇದರಿಂದ ಸೋಂಕು ಪ್ರಸರಣದ ತೀವ್ರತೆ ಕಡಿಮೆಯಾಗುತ್ತದೆ. –ಡಾ| ಚಿದಂಬರ ಸಂಜು,, ಜಿಲ್ಲಾ ಏಡ್ಸ್‌ ನಿಯಂತ್ರಣಾಧಿಕಾರಿ

ಟಾಪ್ ನ್ಯೂಸ್

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Kane Williamson makes a brilliant comeback

NZvsENG: ಭರ್ಜರಿ ಕಮ್‌ಬ್ಯಾಕ್ ಮಾಡಿದ ಕೇನ್‌ ವಿಲಿಯಮ್ಸನ್‌

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Belagavi: ಸಿಪಿಐ ಕಿರುಕುಳ ಆರೋಪ, ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

Belagavi: ಸಿಪಿಐ ಕಿರುಕುಳ ಆರೋಪ; ಆತ್ಮಹತ್ಯೆಗೆ ಯತ್ನಿಸಿದ್ದ ಪೊಲೀಸ್ ಪೇದೆ ರಕ್ಷಣೆ

11

BBK11: ಮಂಜುವನ್ನು ರೋಗಿಷ್ಠ ರಾಜ ಎಂದ ರಜತ್; ಜೋರಾಗಿ ನಕ್ಕ ಶಿಶಿರ್, ಐಶ್ವರ್ಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ನ. 29 ರಿಂದ ಡಿ. 1 ಎಂಜಿಎಂ ಕಾಲೇಜಿಗೆ ಅಮೃತ ಮಹೋತ್ಸವ ಸಂಭ್ರಮ

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

Udupi: ಗೀತಾರ್ಥ ಚಿಂತನೆ-107: ಮರಣವೂ- ನಾಟಕದ ಅಲಂಕಾರವೂ…

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

kuladalli keelyavudo kannada movie

Kannada Cinema: ಕ್ಲೈಮ್ಯಾಕ್ಸ್‌ ನತ್ತ ʼಕುಲದಲ್ಲಿ ಕೀಳ್ಯಾವುದೋʼ

7-vitla

Vitla: ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.