ಉಜ್ವಲ ಭಾರತ ಕಾರ್ಯಕ್ರಮ ಅಚ್ಚುಕಟ್ಟಾಗಿರಲಿ
Team Udayavani, Jul 18, 2022, 2:44 PM IST
ಕಲಬುರಗಿ: ಆಜಾದಿ ಕಾ ಅಮೃತ ಮಹೋತ್ಸವ ಆಚರಣೆ ಅಡಿಯಲ್ಲಿ “ಉಜ್ವಲ ಭಾರತ-ಉಜ್ವಲ ಭವಿಷ್ಯ’ ದಿವಸವನ್ನು ಪವರ್-2047 ಅಂಗವಾಗಿ ಜಿಲ್ಲೆಯ ಕಮಲಾಪುರ ಮತ್ತು ಆಳಂದ ಪಟ್ಟಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದ್ದು, ಸಂಬಂಧಪಟ್ಟಂತ ಅಧಿಕಾರಿಗಳು ಅಚ್ಚುಕಟ್ಟಾಗಿ ಕಾರ್ಯಕ್ರಮ ಆಯೋಜಿಸಬೇಕೆಂದು ಅಪರ ಜಿಲ್ಲಾಧಿಕಾರಿ ಹಾಗೂ ಸಂಘದ ಕಾರ್ಯದರ್ಶಿ ಭೀಮಾಶಂಕರ ತೆಗ್ಗಳಿ ಸೂಚಿಸಿದರು.
ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಭವನದಲ್ಲಿ ಉಜ್ವಲ ಭಾರತ-ಉಜ್ವಲ ಭವಿಷ್ಯ ದಿವಸವನ್ನು ಆಚರಿಸುವ ಕುರಿತು ಕರೆದಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜುಲೈ 27ರಂದು ಕಮಲಾಪುರ ಹಾಗೂ ಜು. 29ರಂದು ಆಳಂದದಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು. ಈ ನಿಟ್ಟಿನಲ್ಲಿ ಪ್ರಾದೇಶಿಕ ಭಾಷೆಯಲ್ಲಿ ಏಳು ವಿಷಯಗಳ ಮೇಲೆ ಕಿರುಚಿತ್ರಗಳು-ದೃಶ್ಯಾವಳಿ ಪ್ರದರ್ಶಿಸಬೇಕು ಮತ್ತು ಪೋಸ್ಟರ್‌ಗಳನ್ನು ಹಾಕಬೇಕು. ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಬೀದಿ ನಾಟಕ, ಜಾನಪದ ನೃತ್ಯಗಳನ್ನು ಆಯೋಜಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸೂಚಿಸಿದರು.
ಭಾರತ ಸರ್ಕಾರ ಮತ್ತು ಕರ್ನಾಟಕದ ಸರ್ಕಾರದ ವಿವಿಧ ಯೋಜನೆಗಳಲ್ಲಿ ವಿದ್ಯುತ್ ಸೌಲಭ್ಯ ಪಡೆದಂತಹ ಫಲಾನುಭವಿಗಳ ಅನಿಸಿಕೆಗಳ ಹಂಚಿಕೊಳ್ಳುವುದರ ಮೂಲಕ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕೇಂದ್ರ ಪುರಸ್ಕೃತ ಸೌಭಾಗ್ಯ, ದೀನ ದಯಾಳ್ ಉಪಾಧ್ಯಾಯ ಗ್ರಾಮ ಜ್ಯೋತಿ ಯೋಜನೆ ಹಾಗೂ ಬೆಳಕು ಯೋಜನೆಗಳಲ್ಲಿ ರೈತರ ಮನೆಗಳಲ್ಲಿ ವಿದ್ಯುತ್ ಯೋಜನೆ ಕಲ್ಪಿಸಲಾಗಿದೆ. ಮುಂದಿನ 2047ರಲ್ಲಿ ವಿದ್ಯುತ್‌ನ್ನು ಎಲ್ಲ ಗ್ರಾಮಗಳಿಗೆ ಒದಗಿಸುವ ಉದ್ದೇಶವನ್ನು ಭಾರತ ಸರ್ಕಾರ ಹೊಂದಿದೆ ಎಂದು ತಿಳಿಸಿದರು.
ಕಲಬುರಗಿ ಜೆಸ್ಕಾಂ ಅಧೀಕ್ಷಕ ಅಭಿಯಂತರರಾದ ಸಿದ್ದಪ್ಪ ಬೆನ್‌ಜೀಗೇರಿ, ಕಾರ್ಯನಿರ್ವಾಹಕ ಅಭಿಯಂತರರಾದ ಎಂ.ಎ.ಮಠಪತಿ, ಸಂತೋಷ ಚೌವ್ಹಾಣ, ಎನ್‌ಟಿಪಿಸಿ ಡೆಪ್ಯುಟಿ ಜನರಲ್ ಮ್ಯಾನೇಜರ್ ಆರ್. ವಿನೋದ, ಕನ್ನಡ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ದತ್ತಪ್ಪ ಸಾಗನೂರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ
Kalaburagi; ಸಿದ್ದರಾಮಯ್ಯ ಔಟ್ ಗೋಯಿಂಗ್ ಸಿಎಂ: ಆರ್ ಅಶೋಕ್
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ
Kalaburagi: ಭೀಮಾ ನದಿಗೆ ಬಿದ್ದ ಕಬ್ಬಿನ ಲಾರಿ: ಲಾರಿ ಚಾಲಕ ನಾಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.