ಬೆಳ್ತಂಗಡಿ: ಡೀಕಯ್ಯರ ಸಾವಿನಲ್ಲಿ ಅನುಮಾನದ ಛಾಯೆ!; ದಫನವಾಗಿದ್ದ ದೇಹ ಮರಣೋತ್ತರ ಪರೀಕ್ಷೆಗೆ
ಮನೆಯಲ್ಲಿ ಬಿದ್ದು, ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ ಬಹುಜನ ಚಳವಳಿಯ ಹಿರಿಯ ನಾಯಕ
Team Udayavani, Jul 18, 2022, 2:59 PM IST
ಬೆಳ್ತಂಗಡಿ: ಬಹುಜನ ಚಳುವಳಿಯ ಹಿರಿಯ ನಾಯಕ, ಅಂಬೇಡ್ಕರ್ ವಾದಿ ಮೂಲತಃ ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಪದ್ಮುಂಜ ನಿವಾಸಿ ಪ್ರಸ್ತುತ ಗರ್ಡಾಡಿಯಲ್ಲಿ ನೆಲಿಸಿದ್ದ ಪಿ.ಡೀಕಯ್ಯ (63) ಅವರು ಮೃತಪಟ್ಟು ಮೃತದೇಹ ದಫನಗೊಂಡು ವಾರಗಳ ಬಳಿಕ ಕುಟುಂಬಸ್ಥರಿಂದ ಅಸಹಜ ಸಾವಿನ ಕುರಿತು ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಪಿ.ಡೀಕಯ್ಯ ಅವರು ಸಾಹಿತಿ ಅತ್ರಾಡಿ ಅಮೃತಾ ಶೆಟ್ಟಿ ಅವರ ಪತಿಯಾಗಿದ್ದು, ಜು.6 ರಂದು ಮನೆಯಲ್ಲೆ ಬಿದ್ದು ಮೆದುಳಿನ ರಕ್ತಸ್ರಾವದಿಂದ ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಜು.8 ರಂದು ಮೃತಪಟ್ಟಿದ್ದರು. ಅವರ ಮೃತದೇಹವನ್ನು ಅಂಬೇಡ್ಕರ್ ಭವನದಲ್ಲಿ ಸಾರ್ವಜನಿಕ ದರ್ಶನಕ್ಕೆ ಮರುದಿನ ವ್ಯವಸ್ಥೆ ಕಲ್ಪಿಸಿ ಅವರ ಊರಾದ ಪದ್ಮುಂಜದಲ್ಲಿ ದಫನ ಮಾಡಲಾಗಿತ್ತು. ಇದಾದ ವಾರಗಳ ಬಳಿಕ, ಬೀಳುವ ವೇಳೆ ಅವರ ತಲೆಗೆ ಬಲವಾದ ಏಟಾಗಿತ್ತು ಎಂಬ ವಿಚಾರ ಇದೀಗ ಬಹಿರಂಗವಾಗಿದ್ದು, ಈ ಹಿನ್ನಲೆ ಪಿ.ಡೀಕಯ್ಯ ಅವರ ಅಕ್ಕನ ಗಂಡ ಪದ್ಮನಾಭ ಅವರು ಅನುಮಾನ ವ್ಯಕ್ತಪಡಿಸಿ ಡೀಕಯ್ಯರ ಸಾವು ಅಸಹಜ ಎಂಬುದಾಗಿ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಜು.18 ರಂದು ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ತಹಶೀಲ್ದಾರ್ ಸಮ್ಮುಖದಲ್ಲಿ ಹೊರತೆಗೆಯಲಾಯಿತು.
ದೂರು ಬಂದಿರುವ ಬಗ್ಗೆ ಪೊಲೀಸ್ ಇಲಾಖೆ ತನಿಖೆಗೆ ಮುಂದಾಗಿದೆ. ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್, ಬೆಳ್ತಂಗಡಿ ಉಪನಿರೀಕ್ಷಕ ನಂದಕುಮಾರ್ ಎಂ.ಎಂ., ಬೆಳ್ತಂಗಡಿ ತಾಲೂಕು ವಿಧಿವಿಜ್ಞಾನ ಪ್ರಯೋಗಾಲಯದ ಸಿಬಂದಿ ಮೃತ ದೇಹದ ಅಂತ್ಯಸಂಸ್ಕಾರ ನಡೆದ ಸ್ಥಳಕ್ಕೆ ಭೇಟಿ ನೀಡಿದ್ದು ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಹೊರತೆಗೆದಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ತಮಿಳುನಾಡು ವಿದ್ಯಾರ್ಥಿನಿ ಸಾವು ಪ್ರಕರಣ; ಮತ್ತೊಮ್ಮೆ ಮರಣೋತ್ತರ ಪರೀಕ್ಷೆಗೆ ಕೋರ್ಟ್ ಆದೇಶ
ಪಿ.ಡೀಕಯ್ಯ ಅವರು ಬಿಎಸ್ಎನ್ಎಲ್ ಸಂಸ್ಥೆಯ ನಿವೃತ್ತ ಉದ್ಯೋಗಿಯಾಗಿ, ತುಳುನಾಡ ಮನ್ಸ ಸಮಾಜ ಸೇವಾ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸಂಘಟನೆಯನ್ನು ಕಟ್ಟಿದ್ದರು. ಮಾತ್ರವಲ್ಲದೆ ಅನೇಕ ಚಳುವಳಿಯ ಮುಂಚೂಣಿಯಲ್ಲಿದ್ದರು. ಜು.17 ರಂದು ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾಭವನದಲ್ಲಿ ದಲಿತ ಸಮನ್ವಯ ಸಂಘಟನೆಗಳ ಸಮನ್ವಯ ಸಮಿತಿ ಮತ್ತು ಬಹುಜನ ಪ್ರಗತಿಪರ ಸಂಘಟನೆಗಳ ಒಕ್ಕೂಟ ವತಿಯಿಂದ ಅವರ ನುಡಿನಮನ ಕಾರ್ಯಕ್ರಮ ನಡೆದಿತ್ತು.
ಮೃತಪಟ್ಟು ಎರಡು ವಾರಗಳು ಕಳೆದ ಬಳಿಕ ಇದೀಗ ಅಸಹಜ ಸಾವು ಎಂದು ದೂರು ನೀಡಿರುವ ಉದ್ದೇಶವೇನು? ಅಥವಾ ಡೀಕಯ್ಯ ಅವರ ಸಾವಿನ ಮಧ್ಯೆ ಕೌಟುಂಬಿಕ ಕಲಹಗಳು ಕಾರಣವೇ ಎಂಬಿತ್ಯಾದಿ ಅನುಮಾನಗಳು ಚರ್ಚೆಗೆ ಕಾರಣವಾಗಿದೆ. ಆದರೆ ದಲಿತ ಚಳುವಳಿಯ ಹಿರಿಯ ಚಿಂತಕನ ಸಾವಿನ ಹಿಂದೆ ವಿವಾದ ಎದ್ದಿರುವುದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.