133ರ ಹೊಸ್ತಿಲಲ್ಲಿ ಕವಿಸಂ; 20ರಿಂದ ಸಪ್ತಾಹ

ಡಾ| ಕಾಪಸೆಗೆ ರಾ.ಹ. ದೇಶಪಾಂಡೆ ಪ್ರಶಸ್ತಿ ಪ್ರದಾನ ; ವಾರ ಕಾಲ ವಿವಿಧ ಕಾರ್ಯಕ್ರಮ ಆಯೋಜನೆ

Team Udayavani, Jul 18, 2022, 3:06 PM IST

15

ಧಾರವಾಡ: ಶತಮಾನ ಕಂಡ ಕರ್ನಾಟಕ ವಿದ್ಯಾವರ್ಧಕ ಸಂಘವು 133ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಜು.20ರಿಂದ ಒಂದು ವಾರ ಕಾಲ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರ ಜತೆಗೆ ಸಿರಿಗನ್ನಡಂ ಗೆಲ್ಗೆ ರಾ.ಹ.ದೇಶಪಾಂಡೆ ಹಾಗೂ ಕನ್ನಡ ಪ್ರಪಂಚ ಡಾ| ಪಾಟೀಲ ಪುಟ್ಟಪ್ಪ ಹೆಸರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದು ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 20ರಂದು ಸಂಜೆ 5 ಗಂಟೆಗೆ ಸಂಸ್ಥಾಪನಾ ದಿನಾಚರಣೆಗೆ ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಚಾಲನೆ ನೀಡಲಿದ್ದು, ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ನಂತರ ಹಿರಿಯ ಸಾಹಿತಿ ಡಾ| ಗುರುಲಿಂಗ ಕಾಪಸೆ ಅವರಿಗೆ ಸಿರಿಗನ್ನಡಂ ಗೆಲ್ಗೆ ರಾ.ಹ. ದೇಶಪಾಂಡೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ. ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಡಾ| ಸಂಜೀವ ಕುಲಕರ್ಣಿ ಅವರು ರಾ.ಹ. ದೇಶಪಾಂಡೆ ಅವರ ಕುರಿತು ಮಾತನಾಡಲಿದ್ದು, ಹಂಪಿ ಕನ್ನಡ ವಿವಿ ವಿಶ್ರಾಂತ ಕುಲಪತಿ ಡಾ| ಮಲ್ಲಿಕಾ ಘಂಟಿ ಪ್ರಶಸ್ತಿ ಪುರಸ್ಕೃತರ ಕುರಿತು ಮಾತನಾಡಲಿದ್ದಾರೆ. ಕವಿಸಂ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ನೆನೆ ನೆನೆ ಆ ದಿನ: 21ರಂದು ನೆನೆ ನೆನೆ ಆ ದಿನ ಶೀರ್ಷಿಕೆಯಡಿ ಕಡಪಾ ರಾಘವೇಂದ್ರರಾಯರ ಸ್ಮರಣೆ ಮಾಡಲಿದ್ದು, ಡಾ| ಶಶಿಧರ ನರೇಂದ್ರ, ಡಾ| ಉಜ್ವಲಾ ಹಿರೇಮಠ ಮಾತನಾಡಲಿದ್ದಾರೆ. ಸಂಘದ ಗೌರವ ಉಪಾಧ್ಯಕ್ಷ ಡಾ| ಆನಂದ ಪಾಂಡುರಂಗಿ ಅಧ್ಯಕ್ಷತೆ ವಹಿಸಲಿದ್ದಾರೆ. 22ರಂದು ಸ್ವಾತಂತ್ರÂ ಸಂಗ್ರಾಮದ ಹುತಾತ್ಮರ ಸ್ಮರಣೆ ನಡೆಯಲಿದ್ದು, ಉದಯ ಯಂಡಿಗೇರಿ, ವಸಂತ ಮುಡೇìಶ್ವರ ಮಾತನಾಡಲಿದ್ದಾರೆ. ಧಾರವಾಡ ಆಕಾಶವಾಣಿ ನಿವೃತ್ತ ನಿರ್ದೇಶಕ ಸಿ.ಯು. ಬೆಳ್ಳಕ್ಕಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.

23ರಂದು ಡೆಪ್ಯುಟಿ ಚೆನ್ನಬಸಪ್ಪನವರ ಸ್ಮರಣೆ ನಡೆಯಲಿದ್ದು, ಡಾ| ಗುರುಮೂರ್ತಿ ಯರಗಂಬಳಿಮಠ, ಎಸ್‌.ವಿ. ಸಂಕನೂರ ಮಾತನಾಡಲಿದ್ದು, ಡಾ|ಸಿದ್ಧಲಿಂಗ ಪಟ್ಟಣಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. 24ರಂದು ವನಿತಾ ಸೇವಾ ಸಮಾಜ ಸಂಸ್ಥಾಪಕಿ ಭಾಗೀರಥಿಬಾಯಿ ಪುರಾಣಿಕ ಅವರ ಸ್ಮರಣೆಯಲ್ಲಿ ನೀಲಗಂಗಾ ಕರಿ, ಶಾಸಕ ಅರವಿಂದ ಬೆಲ್ಲದ, ಬಸವರಾಜ ಹೂಗಾರ ಮಾತನಾಡಲಿದ್ದು, ಸಾಹಿತಿ ಡಾ| ಲೋಹಿತ ನಾಯ್ಕರ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.

25ರಂದು ರೆ| ಫರ್ಡಿನೆಂಡ್‌ ಕಿಟೆಲ್‌ ಅವರ ಸ್ಮರಣೆಯಲ್ಲಿ ಡಾ|ಕೆ. ಅನºನ್‌, ಜಿ.ಬಿ. ಹೊಂಬಳ ಮಾತನಾಡಲಿದ್ದು, ಸಂಘದ ಗೌರವ ಉಪಾಧ್ಯಕ್ಷ ಪದ್ಮಶ್ರೀ ಪಂ| ಎಂ. ವೆಂಕಟೇಶಕುಮಾರ ಅಧ್ಯಕ್ಷತೆ ವಹಿಸಲಿದ್ದಾರೆ. ನಿತ್ಯ ಸಂಘದ ಹಿರಿಯ ಸದಸ್ಯರಿಗೆ ಗೌರವ ಸಮರ್ಪಣೆ ನಡೆಯಲಿದೆ. ನಿತ್ಯ ಜಾನಪದ ಹಾಡು, ಸುಗಮ ಸಂಗೀತ, ಭರತನಾಟ್ಯ, ಚಿತ್ರಕಲಾ ಪ್ರದರ್ಶನ ಜರುಗಲಿವೆ ಎಂದರು.

ಡಾ| ಪಾಟೀಲ ಪುಟ್ಟಪ್ಪ ಪ್ರಶಸ್ತಿ ಪ್ರದಾನ: ಸಂಯುಕ್ತ ಕರ್ನಾಟಕ ಪತ್ರಿಕೆಗೆ ʼಕನ್ನಡ ಪ್ರಪಂಚ ಡಾ| ಪಾಟೀಲ ಪುಟ್ಟಪ್ಪ’ ಪ್ರಶಸ್ತಿಯನ್ನು ಜು. 26ರಂದು ಸಂಜೆ 5 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಗುತ್ತಿದೆ. ಸಾಣೇಹಳ್ಳಿ ತರಳಬಾಳು ಶಾಖಾಮಠದ ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಮಾಜಿ ಸಂಸದ ಪ್ರೊ| ಐ.ಜಿ. ಸನದಿ ಅವರು ಡಾ| ಪಾಪು ಅವರ ಕುರಿತು ಮಾತನಾಡಲಿದ್ದಾರೆ. ಲೋಕಶಿಕ್ಷಣ ಟ್ರಸ್ಟ್‌ ಅಧ್ಯಕ್ಷ ಯು.ಬಿ. ವೆಂಕಟೇಶ, ಧರ್ಮದರ್ಶಿಗಳಾದ ಅಶೋಕ ಹಾರನಹಳ್ಳಿ, ಸಮೂಹ ಸಂಪಾದಕರಾದ ಹುಣಸವಾಡಿ ರಾಜನ್‌ ಆಗಮಿಸಲಿದ್ದಾರೆ. ಹಿರಿಯ ಪತ್ರಕರ್ತೆ ಕೆ.ಎಚ್‌. ಸಾವಿತ್ರಿ ಸಂಯುಕ್ತ ಕರ್ನಾಟಕದ ಕುರಿತು ಮಾತನಾಡಲಿದ್ದಾರೆ.

ಸಂಜೆ 7 ಗಂಟೆಗೆ ಸಮಾರೋಪ ನಡೆಯಲಿದ್ದು, ಡಾ| ಶಾಂತಿನಾಥ ದಿಬ್ಬದ ಸಮಾರೋಪ ನುಡಿಗಳನ್ನಾಡಲಿದ್ದಾರೆ. ಉಚ್ಚ ನ್ಯಾಯಾಲಯದ ನಿಕಟಪೂರ್ವ ಸಹಾಯಕ ಸಾಲಿಸಿಟರ್‌ ಜನರಲ್‌ ಕೆ.ಬಿ. ನಾವಲಗಿಮಠ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ ಪಾಲ್ಗೊಳ್ಳಲಿದ್ದು, ಕವಿಸಂ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಟಾಪ್ ನ್ಯೂಸ್

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್‌

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ

ಅಪರಿಚಿತ ವಾಹನ ಡಿಕ್ಕಿ : ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫ‌ಲಿಸದೆ ವ್ಯಕ್ತಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prahlad jo shi

Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು‌ ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

ಹೊಸ ವರ್ಷದ ಕೊಡುಗೆ: ಬೈಸಿಕಲ್‌ ಉತ್ತೇಜನಕ್ಕೆ ಉಚಿತ ರೈಡ್‌

Laxmi Hebbalkar  ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Laxmi Hebbalkar ಮತ್ತೊಂದು ದೂರು ನೀಡಿದ ಅನಂತರವಷ್ಟೇ ಮುಂದಿನ ಕ್ರಮ: ಹೊರಟ್ಟಿ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

Hubli: ತುಂಬು ಗರ್ಭಿಣಿ ಸಾವು; ಪತಿಯೂ ಆತ್ಮಹತ್ಯೆ ಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police

Kasaragod; ಬಂದೂಕು ತೋರಿಸಿ ಹಲ್ಲೆ : ನಾಲ್ವರ ಮೇಲೆ ಕೇಸು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

accident

Udupi: ಸ್ಕೂಟರಿಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ

10

Mangaluru: ಗುತ್ತಿಗೆದಾರ ಸಚಿನ್‌ ಪ್ರಕರಣ; ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.