ಸೌಲಭ್ಯ ವಿತರಣೆಗೆ ಪಾರದರ್ಶಕತೆ ಅಳವಡಿಸಿ: ಧಂಗಾಪೂರ

Team Udayavani, Jul 18, 2022, 3:40 PM IST

18facility

ಆಳಂದ: ಜಿಲ್ಲೆ ಒಳಗೊಂಡು ತಾಲೂಕಿನ ಐದು ರೈತ ಸಂಪರ್ಕ ಕೇಂದ್ರಗಳಲ್ಲಿ ಕೃಷಿ ಇಲಾಖೆ ಯಿಂದ ದೊರೆಯುವ ಸರ್ಕಾರಿ ಸೌಲಭ್ಯಗಳ ವಿತರಣೆಯಲ್ಲಿ ಅಧಿಕಾರಿಗಳು ಪಾರದರ್ಶಕತೆ ಅಳವಡಿಸಿಕೊಳ್ಳಬೇಕು ಎಂದು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಡಾ| ಸಿದ್ರಾಮಪ್ಪ ಪಾಟೀಲ ಧಂಗಾಪೂರ ಹೇಳಿದರು.

ಪಟ್ಟಣದ ಸಹಾಯಕ ನಿರ್ದೇಶಕರ ಕಚೇರಿ ಯಲ್ಲಿ ಕರೆದ ತಾಲೂಕು ಕೃಷಿಕ ಸಮಾಜದ ಆಡಳಿತ ಮಂಡಳಿಯ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರೈತ ಸಂಪರ್ಕಕ್ಕೆ ಬರುವ ಸೌಲಭ್ಯಗಳನ್ನು ಆಯಾ ಭಾಗದ ಕೃಷಿಕ ಸಮಾಜದ ಸದಸ್ಯರ ಗಮನಕ್ಕೆ ತರುವ ಮೂಲಕ ರೈತರಿಗೆ ಸಕಾಲಕ್ಕೆ ಸೌಲಭ್ಯಗಳನ್ನು ಒದಗಿಸಬೇಕು. ಕೃಷಿ ಪರಿಕರ ಪ್ರತಿ ವಿತರಕ ಅಂಗಡಿಗಳಲ್ಲಿ ಬೆಲೆ, ಗೊಬ್ಬರ, ಬೀಜದ ದಾಸ್ತಾನು ಖಾಲಿ ಇರುವ ಬಗ್ಗೆ ಫಲಕ ಅಳವಡಿಸಲು ಅಧಿಕಾರಿಗಳು ಸೂಚಿಸಬೇಕು. ಅಧಿಕಾರಿಗಳ ಶಿಫಾರಸಿನಂತೆ ರೈತರು ಬಿತ್ತನೆ ಬೀಜ, ಗೊಬ್ಬರ ಬಳಸಬೇಕು. ಕಡ್ಡಾಯವಾಗಿ ಫಸಲು ಬಿಮಾ ವಿಮೆಯನ್ನು ಕೈಗೊಳ್ಳುವಂತೆ ಜಾಗೃತಿ ಕೈಗೊಳ್ಳಬೇಕು ಎಂದರು.

ಸಹಾಯಕ ಕೃಷಿ ನಿರ್ದೇಶಕ ಪಿ.ಎಂ. ಮಲ್ಲಿಕಾರ್ಜುನ ಮಾತನಾಡಿ, ಜೂನ್‌ ತಿಂಗಳಲ್ಲಿ ಮಳೆ ಅಭಾವಿತ್ತು. ಜುಲೈ ತಿಂಗಳಲ್ಲಿ ಮಳೆಯಾಗಿದೆ ಬಿತ್ತನೆ ನಡೆಯತೊಡಗಿದೆ. ಪ್ರಧಾನಮಂತ್ರಿ ಫಸಲ್‌ ಬಿಮಾ ಕಡ್ಡಾಯವಾಗಿ ಕೈಗೊಂಡು ಕಾಲಕಾಲಕ್ಕೆ ವಿಮಾ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರೆ ಬೆಳೆ ಕೈಕೊಟ್ಟರೆ ವಿಮಾ ಮೊತ್ತ ದೊರೆಯುತ್ತದೆ ಎಂದರು.

ಪಶು ಸಂಗೋಪನಾ ಸಹಾಯಕ ನಿರ್ದೇಶಕ ಡಾ| ಸಂಜಯ ರೆಡ್ಡಿ ಅವರು ಮಾತನಾಡಿ, ಜಾನುವಾರುಗಳ ಸಾಕಾಣಿಕೆ ಸಂಕೆ ಕಡಿಮೆಯಾಗತೊಡಗಿದೆ. ರೈತರು ತಮ್ಮ ಜಾನುವಾರುಗಳಿಗೆ ಕುರಿ, ಮೇಕೆಗಳಿಗೆ ವಿಮೆ ಮಾಡಿಸಲು ಅವಕಾಶವಿದೆ. ಈ ಕುರಿತು ಪ್ರಚಾರ ನಡೆಯುತ್ತಿದೆ ಎಂದರು.

ತಹಶೀಲ್ದಾರ್‌ ಯಲ್ಲಪ್ಪ ಸುಬೇದಾರ ಅವರು, ಕೃಷಿಕ ಸಮಾಜದಿಂದ ನಡೆಯುವ ರೈತಪರ ಕಾರ್ಯಚಟುವಟಿಕೆಗಳಿಗೆ ಸಂಬಂತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿ ಕೆಲಸ ಕಾರ್ಯಗಳನ್ನು ಮಾಡಿಕೊಡಲಾಗುವುದು ಎಂದು ಭರವಸೆ ನೀಡಿದರು.

ಎಪಿಎಂಸಿ ಕಾರ್ಯದರ್ಶಿ ಮಹಾದೇವಿ ಪಾಟೀಲ, ತೋಟಗಾರಿಕೆ ಸಹಾಯಕ ಅಧಿಕಾರಿ ಸಕಲೇಶ ಪಾಟೀಲ, ರೇಷ್ಮೆ ನಿರೀಕ್ಷ ಬಿ.ಎಸ್‌. ಶಿರೂರ ರೈತರಿಗೆ ದೊರೆಯುವ ಸೌಲಭ್ಯಗಳ ಮಾಹಿತಿ ನೀಡಿದರು.

ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಗುರುಶರಣ ಪಾಟೀಲ ಕೊರಳ್ಳಿ ಅಧ್ಯಕ್ಷತೆ ವಹಿಸಿದ್ದರು. ಸದಸ್ಯ ಕುಪೇಂದ್ರ ಪಾಟೀಲ ಕೊರಳ್ಳಿ, ವೀರಣ್ಣ ಹೊನ್ನಶೆಟ್ಟಿ, ಮಡಿವಾಳಪ್ಪ ಕೊರಳ್ಳಿ, ಭೀಮಾಶಂಕರ ಮಡಿವಾಳ ಬಂಗರಗಾ, ಚಂದ್ರಶೇಖರ ಪಾಟೀಲ ಮತ್ತಿತರರು ಇದ್ದರು. ನಿರ್ದೇಶಕ ಸ್ಥಾನಕ್ಕೆ ಶರಣಬಸಪ್ಪ ಜಿ. ಕುಲಕರ್ಣಿ ಕೊಡಲಹಂಗರಗಾ, ಶರಣಗೌಡ ಬಿ. ಮಾಲಿಪಾಟೀಲ ಭೂಸನೂರ ಅವರನ್ನು ಆಡಳಿತ ಮಂಡಳಿ ನಿರ್ದೇಶಕರನ್ನಾಗಿ ಆಯ್ಕೆ ಮಾಡಲಾಯಿತು. ತಾಂತ್ರಿಕ ಅಧಿಕಾರಿ ಬನಸಿದ್ಧಪ್ಪ ಬಿರಾದಾರ ವಂದಿಸಿದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.