ಸೆಪ್ಟೆಂಬರ್ ಕೊನೆಯಲ್ಲಿ ರಾಜ್ಯಮಟ್ಟದ ಅರ್ಚಕರ ಸಮಾವೇಶ: ಸಚಿವೆ ಶಶಿಕಲಾ ಜೊಲ್ಲೆ
ರಾಜ್ಯದ ಹಲವಾರು ಧಾರ್ಮಿಕ ವಿಷಯಗಳ ಬಗ್ಗೆ ಚರ್ಚೆ
Team Udayavani, Jul 18, 2022, 5:37 PM IST
ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನಗಳ ಅರ್ಚಕರ ರಾಜ್ಯಮಟ್ಟದ ಸಮಾವೇಶವನ್ನು ಸೆಪ್ಟೆಂಬರ್ ಕೊನೆಯ ವಾರದಲ್ಲಿ ಆಯೋಜಿಸಲಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.
ಸೋಮವಾರ ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ 3ನೇ ರಾಜ್ಯ ಧಾರ್ಮಿಕ ಪರಿಷತ್ತಿನ 16 ನೇ ಸಭೆಯಲ್ಲಿ ರಾಜ್ಯದ ಹಲವಾರು ಧಾರ್ಮಿಕ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಧಾರಗಳನ್ನು ತಗೆದುಕೊಳ್ಳಲಾಯಿತು. ರಾಜ್ಯ ಸರಕಾರ ಮುಜರಾಯಿ ಅರ್ಚಕರ ಅಭಿವೃದ್ದಿಗಾಗಿ ಹಲವಾರು ಯೋಜನೆಗಳನ್ನು ಹೊರತಂದಿದೆ. ತಸ್ಥಿಕ್ ಹಣ ಹೆಚ್ಚಳ, ಅರ್ಚಕರುಗಳಿಗೆ ವಿಮಾ ಸೌಲಭ್ಯ ಸೇರಿದಂತೆ ಹಲವಾರು ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಇದಕ್ಕಾಗಿ ಮುಜರಾಯಿ ಇಲಾಖೆಯ ವತಿಯಿಂದ ಅರ್ಚಕರ ಸಮಾವೇಶ ಏರ್ಪಡಿಸುವಂತೆಯೂ ಸದಸ್ಯರು ಕೋರಿಕೆ ಸಲ್ಲಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಸೆಪ್ಟೆಂಬರ್ ಕೊನೆಯ ವಾರದಲ್ಲಿ ರಾಜ್ಯಮಟ್ಟದ ಸಮಾವೇಶವನ್ನು ಏರ್ಪಡಿಸುವುದಾಗಿ ತಿಳಿಸಿದರು.
ತೆರವಾಗಿರುವ ರಾಜ್ಯ ಧಾರ್ಮಿಕ ಪರಿಷತ್ತಿನ ನ್ಯಾಯಿಕ ಸದಸ್ಯರ ಸ್ಥಾನವನ್ನು ಶೀಘ್ರವಾಗಿ ತುಂಬುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಜರಾಯಿ ಇಲಾಖೆಯ ಶೇಕಡಾ 60 ರಷ್ಟು ಹುದ್ದೆಗಳು ಖಾಲಿಯಿವೆ. ಇದನ್ನು ತುಂಬಲು ನೇಮಕಾತಿಗೆ ಅವಕಾಶ ನೀಡುವಂತೆ ಆರ್ಥಿಕ ಇಲಾಖೆಗೆ ಪತ್ರಬರೆಯಲಾಗಿದೆ. ಇದರ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶೀಘ್ರ ಕ್ರಮ ತಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
ರಾಜ್ಯದ ಪ್ರಮುಖ ಶ್ರದ್ದಾಕೇಂದ್ರ ಕುಕ್ಕೆಯಲ್ಲಿ ಭಕ್ತಾದಿಗಳಿಗೆ ಇನ್ನೂ ಹೆಚ್ಚಿನ ಉತ್ತಮ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪರೀಶೀಲನೆ ನಡೆಸುವಂತೆ ಆಯುಕ್ತರಿಗೆ ಸೂಚನೆ ನೀಡಲಾಯಿತು. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸಭೆಗಳನ್ನು ಕಡ್ಡಾಯವಾಗಿ ನಡೆಸಲು ಕ್ರಮ ಕೈಗೊಳ್ಳುವಂತೆಯೂ ಹಾಗೂ ನೂತನ ಜಿಲ್ಲೆ ವಿಜಯನಗರದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ರಚನೆಗೆ ಕ್ರಮವಹಿಸುವಂತೆ ಆಯುಕ್ತರಿಗೆ ಸೂಚನೆ ನೀಡಿದರು.
ಕಾಶಿಯ ಕರ್ನಾಟಕ ಛತ್ರ ಸಂಪೂರ್ಣ ನವೀಕರಣ ಹಾಗೂ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ
ಕಾಶಿಯಲ್ಲಿರುವ ಕರ್ನಾಟಕ ಛತ್ರವನ್ನು ಸಂಪೂರ್ಣ ನವೀಕರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಆಯುಕ್ತರಿಗೆ ಸೂಚನೆ ನೀಡಿದರು. ಅಲ್ಲದೇ, ಕೂಡಲೇ ಅಗತ್ಯವಿರುವ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲು ಸಚಿವರು ಆದೇಶಿಸಿದರು.
ಸಭೆಯಲ್ಲಿ ರಾಜ್ಯಧಾರ್ಮಿಕ ಪರಿಷತ್ತಿನ ಸದಸ್ಯ ಕಾರ್ಯದರ್ಶಿಗಳು ಹಾಗೂ ಮುಜರಾಯಿ ಇಲಾಖೆ ಆಯುಕ್ತರಾದ ಶ್ರೀಮತಿ ರೋಹಿಣಿ ಸಿಂಧೂರಿ, ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯರುಗಳಾದ ಡಾ| ಮಹರ್ಷಿ ಆನಂದ ಗುರೂಜಿ, ಎಸ್ ಗೋವಿಂದ ಭಟ್, ಕೆ. ಸೂರ್ಯ ಕಷೇಕೋಡಿ, ಸುಭಾಷ ಕಾಂಬ್ಳೆ, ರಾಮಚಂದ್ರ ಮಟ್ಟಿ, ವಿಜಯಲಕ್ಷ್ಮಿ ಹಿರೇಮಠ, ವೈ.ಎಸ್. ಸಿದ್ದಲಿಂಗಪ್ರಭು ಹಾಗೂ ಇಲಾಖೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್ಕೌಂಟರ್; ತನಿಖೆ ಚುರುಕು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.