‘ಬಿಲ್ಲ ರಂಗ ಬಾಷಾ’ ಚಿತ್ರದ ಬಗ್ಗೆ ಕುತೂಹಲಕಾರಿ ಮಾಹಿತಿ ಬಿಚ್ಚಿಟ್ಟ ಕಿಚ್ಚ ಸುದೀಪ್
Team Udayavani, Jul 19, 2022, 1:11 PM IST
ಕಿಚ್ಚ ಸುದೀಪ್ ಮತ್ತು ಅನೂಪ್ ಭಂಡಾರಿ ಕಾಂಬಿನೇಶನ್ ನಲ್ಲಿ ಬರುತ್ತಿರುವ ‘ವಿಕ್ರಾಂತ್ ರೋಣ’ ಚಿತ್ರ ಬಿಡುಗಡೆಗೆ ಸಿದ್ದವಾಗಿದೆ. ಹಾಡು ಮತ್ತು ಟ್ರೇಲರ್ ನಿಂದ ಸಖತ್ ಸದ್ದು ಮಾಡುತ್ತಿರುವ ‘ವಿಕ್ರಾಂತ್ ರೋಣ’ ಸಿನಿಮಾ ಜುಲೈ 28ರಂದು ರಿಲೀಸ್ ಆಗುತ್ತಿದೆ.
ವಿಕ್ರಾಂತ್ ರೋಣ ಚಿತ್ರವು ಪ್ಯಾನ್ ಇಂಡಿಯಾ ರಿಲೀಸ್ ಆಗುತ್ತಿದ್ದು, ವಿವಿಧ ನಗರಗಳಲ್ಲಿ ಪ್ರಚಾರ ಕಾರ್ಯಗಳಲ್ಲಿ ತೊಡಗಿದೆ. ಇದರೊಂದಿಗೆ ನಟ ಕಿಚ್ಚ ಸುದೀಪ್ ಅವರು ಬೇರೆ ಬೇರೆ ಭಾಷೆಯ ಯೂಟ್ಯೂಬರ್ ಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಈ ವೇಳೆ ಕಿಚ್ಚ ಸುದೀಪ್ ತಮ್ಮ ಮುಂದಿನ ಚಿತ್ರದ ಬಗ್ಗೆಯೂ ಮಾತನಾಡಿದ್ದಾರೆ.
ಅನೂಪ್ ಭಂಡಾರಿ ಮತ್ತು ಕಿಚ್ಚ ಸುದೀಪ್ ಕಾಂಬಿನೇಶನ್ ನ ‘ಬಿಲ್ಲ ರಂಗ ಬಾಷಾ’ ಚಿತ್ರ ಇದೇ ಡಿಸೆಂಬರ್ ನಲ್ಲಿ ಸೆಟ್ಟೇರಲಿದೆ. ಈ ಬಗ್ಗೆ ಕಿಚ್ಚ ಸುದೀಪ್ ಸ್ವತಃ ಹೇಳಿಕೊಂಡಿದ್ದಾರೆ.
‘ವಿಕ್ರಾಂತ್ ರೋಣ’ ಚಿತ್ರಕ್ಕೂ ಮೊದಲೇ ಸುದೀಪ್ ಮತ್ತು ಅನೂಪ್ ‘ಬಿಲ್ಲ ರಂಗ ಬಾಷಾ’ ಚಿತ್ರವನ್ನು ಘೋಷಿಸಿದ್ದರು. ಆದರೆ ಚಿತ್ರಕಥೆ ಹಂತದಲ್ಲಿ ಉಂಟಾದ ತೊಡಕಿನಿಂದ ಅದನ್ನು ಅಲ್ಲೇ ನಿಲ್ಲಿಸಿ, ‘ವಿಕ್ರಾಂತ್ ರೋಣ’ ಪ್ರಾಜೆಕ್ಟ್ ಕೈಗೆತ್ತಿಕೊಂಡಿದ್ದರು. ಇದೀಗ ಸಮಸ್ಯೆ ಬಗೆಹರಿದಿದ್ದು ಮುಂದೆ ‘ಬಿಲ್ಲ ರಂಗ ಬಾಷಾ’ ಚಿತ್ರದಲ್ಲಿ ತೊಡಗಿಸಿಕೊಳ್ಳುವುದಾಗಿ ಸುದೀಪ್ ಹೇಳಿಕೊಂಡಿದ್ದಾರೆ.
ಇದನ್ನೂ ಓದಿ:‘ಲವ್ 360’ ಥೀಮ್ ಸಾಂಗ್ ರಿಲೀಸ್: ತೆರೆಗೆ ಸಿದ್ದವಾಯ್ತು ಶಶಾಂಕ್ ನಿರ್ದೇಶನದ ಚಿತ್ರ
ಈ ಬಗ್ಗೆ ಮಾತನಾಡಿದ ಕಿಚ್ಚ ಸುದೀಪ್, “‘ಬಿಲ್ಲ ರಂಗ ಬಾಷಾ’ ಚಿತ್ರದ ಮೊದಲ ಶೆಡ್ಯೂಲ್ ಡಿಸೆಂಬರ್ ನಲ್ಲಿ ಇರಲಿದೆ. ಚಿತ್ರ ಎರಡು ಭಾಗದಲ್ಲಿ ಬರಲಿದೆ. ಅಲ್ಲದೆ ಪತ್ನಿ ಪ್ರಿಯಾ ಆ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ. ಅನೂಪ್ ನಿರ್ದೇಶನ, ಅಜನೀಶ್ ಸಂಗೀತ ಮತ್ತು ಶಿವುಕುಮಾರ್ ಕಲಾ ನಿರ್ದೇಶನ ಇರಲಿದೆ. ಇದು ದೊಡ್ಡ ಚಿತ್ರ. ಕೆಲವು ಸೆಟ್ ಗಳಲ್ಲಿ ಚಿತ್ರೀಕರಣ ನಡೆಯಲಿದೆ” ಎಂದಿದ್ದಾರೆ.
‘ವಿಕ್ರಾಂತ್ ರೋಣ’ ಬಳಿಕ ಕಿಚ್ಚ ಸುದೀಪ್ ಕಾಣಿಸಿಕೊಂಡಿರುವ ‘ರವಿ ಬೋಪಣ್ಣ’ ಮತ್ತು ‘ಕಬ್ಜಾ’ ಚಿತ್ರಗಳು ತೆರೆಗೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.