ಸರಕಾರದ ಪಶು ಸಾಕಾಣಿಕೆ ಪ್ರೋತ್ಸಾಹದಿಂದ ರೈತರ ಆದಾಯ ದ್ವಿಗುಣ: ಸಚಿವ ಗೋವಿಂದ ಕಾರಜೋಳ


Team Udayavani, Jul 19, 2022, 5:21 PM IST

ಸರಕಾರದ ಪಶು ಸಾಕಾಣಿಕೆ ಪ್ರೋತ್ಸಾಹದಿಂದ ರೈತರ ಆದಾಯ ದ್ವಿಗುಣ: ಸಚಿವ ಗೋವಿಂದ ಕಾರಜೋಳ

ಬೆಳಗಾವಿ : ಶಿಕ್ಷಣ, ನಗರೀಕರಣ, ಉದ್ಯೋಗದ ಭರದಲ್ಲಿ ಇತ್ತೀಚೆಗೆ ರೈತರ ಮಕ್ಕಳು ಕೃಷಿ, ಜಾನುವಾರು ಸಾಕಾಣಿಕೆ ಕುರಿತು ನಿರುತ್ಸಾಹ, ತೋರುತ್ತಿದ್ದಾರೆ‌. ಇದರ ಪರಿಣಾಮ ದೇಶದಲ್ಲಿ ಜನಸಂಖ್ಯೆ ಅನುಪಾತಕ್ಕೆ ಹೋಲಿಸಿದರೆ ಜಾನುವಾರು ಸಾಕಾಣಿಕೆ ಪ್ರಮಾಣ  ಕುಸಿಯುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಕಳವಳ ವ್ಯಕ್ತಪಡಿಸಿದರು.

ಮಂಗಳವಾರ ಸುವರ್ಣ ವಿಧಾನಸೌಧದಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಸಂಚಾರಿ ಪಶು ಚಿಕಿತ್ಸಾ ಘಟಕಗಳ ಲೋಕಾರ್ಪಣೆ ಹಾಗೂ ಇಲಾಖೆಯ ಪಶು ವೈದ್ಯಕೀಯ ಸ್ಪೆಷಾಲಿಟಿ ಆಸ್ಪತ್ರೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ರೈತರ ತರಬೇತಿ ಕೇಂದ್ರ ಹಾಗೂ ಪಶು ತನಿಖಾ ಪ್ರಯೋಗಾಲಯ ಮತ್ತು ಮಾಹಿತಿ ಕೇಂದ್ರ ಕಟ್ಟಡಗಳ ಉದ್ಘಾಟನೆ ನೆರವೇರಿಸಿದ ನಂತರ ಸೆಂಟ್ರಲ್ ಸಭಾಂಗಣದಲ್ಲಿ ನಡೆದ  ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಇತ್ತೀಚೆಗೆ ರೈತರು ರಾಸಾಯನಿಕ ಗೊಬ್ಬರಗಳ ಮೊರೆ ಹೋಗುತ್ತಿರುವುದರಿಂದ ಭೂಮಿಯು ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ. ಇದರಿಂದಾಗಿ ಭೂಮಿಯಲ್ಲಿ ಬೆಳೆದು ನಾವೆಲ್ಲ ಸೇವಿಸುತ್ತಿರುವ ಆಹಾರ ವಿಷಪೂರಿತಗೊಳ್ಳುತ್ತಿದೆ. ಪರಿಣಾಮವಾಗಿ ಕ್ಯಾನ್ಸರ್ ಖಾಯಿಲೆಗೆ ಕಾರಣವಾಗುತ್ತಿದೆ. ಹೀಗಾಗಿ ದನ, ಎಮ್ಮೆ, ಕರು, ಹಸು, ಕುರಿಗಳನ್ನು ಸಾಕುವ ಮೂಲಕ ಸಾವಯವ ಗೊಬ್ಬರವನ್ನು ಬಳಸಿ ಭೂಮಿ ಫಲವತ್ತತೆ ಹೆಚ್ಚಿಸುವ ಜೊತೆಗೆ ಗುಣಮಟ್ಟದ ಬೆಳೆ ಬೆಳೆಯಬಹುದು ಎಂದರು.

ಇದನ್ನೂ ಓದಿ: ಪಾಕ್ ಗಡಿ ನುಸುಳಿ ಭಾರತಕ್ಕೆ ಬಂದ ಉದ್ದೇಶ…ನೂಪುರ್ ಶರ್ಮಾ ಹತ್ಯೆಗೈಯಲು! ತನಿಖೆಯಲ್ಲಿ ಬಯಲು

ಕೇಂದ್ರ ರಾಜ್ಯ ಸರ್ಕಾರಗಳು ಜಂಟಿಯಾಗಿ ರಾಜ್ಯದ ರೈತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸುಮಾರು 44 ಕೋಟಿ ವೆಚ್ಚದಲ್ಲಿ ಸಂಚಾರಿ ಪಶು ಚಿಕಿತ್ಸಾ ಘಟಕಗಳನ್ನು ನೀಡಲಾಗಿದೆ. ಮುಂದಿನ ಹಂತದಲ್ಲಿ ಸಾವಯವ ಕೃಷಿ ಪದ್ಧತಿ, ಜಾನುವಾರು ಸಾಕಾಣಿಕೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರ್ಕಾರಗಳು ಇನ್ನೂ ಅನೇಕ ಕಾರ್ಯಕ್ರಮಗಳನ್ನು ರೂಪಿಸಲಿವೆ. ಕೇಂದ್ರ ಸರ್ಕಾರ ಪಶು ಸಾಕಾಣಿಕೆಗೆ ಪ್ರೋತ್ಸಾಹಿಸುವ ಮೂಲಕ ರೈತರ ಆದಾಯವನ್ನೂ ದ್ವಿಗುಣಗೊಳಿಸುತ್ತಿದೆ ಎಂದು ಹೇಳಿದರು.

ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ ಮಾತನಾಡಿ ಪ್ರತಿ ಜಿಲ್ಲೆಯಲ್ಲೂ ಒಂದೊಂದು ಗೋ ಶಾಲೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು. ಗೋವುಗಳನ್ನು ಕಸಾಯಿಖಾನೆಗೆ ಕಳುಹಿಸುವ ಬದಲು ಗೋಶಾಲೆಗೆ ಕಳುಹಿಸಿ ಎಂದು ರೈತರಲ್ಲಿ ಮನವಿ ಮಾಡಿದರು. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ನಾನು 20 ಸಾವಿರ ಗೋವುಗಳನ್ನು ರಕ್ಷಿಸಿ ಗೋಶಾಲೆಗೆ ಕಳುಹಿಸಿದ್ದೇನೆ. ಗೋ ಹತ್ಯೆ ನಿಷೇಧ ಕಾಯ್ದೆ ಉಲ್ಲಂಘಿಸಿದವರ ವಿರುದ್ಧ 900 ಪ್ರಕರಣಗಳನ್ನು ದಾಖಲಿಸಿ ಕ್ರಮಕ್ಕೂ ಮುಂದಾಗಿದ್ದೇನೆ ಎಂದರು.

ಜನರಿಗೆ ತೊಂದರೆಯಾದರೆ 108ಕ್ಕೆ ಮಾಡಿ ಜಾನುವಾರುಗಳಿಗೆ ತೊಂದರೆಯಾದರೆ 1962ಕ್ಕೆ ಕರೆ ಮಾಡಿ. ಪಶು ಚಿಕಿತ್ಸೆ ಸಲುವಾಗಿ ಈಗಾಗಲೇ ರಾಜ್ಯಕ್ಕೆ 275 ಸಂಚಾರಿ ಚಿಕಿತ್ಸಾ ಘಟಕಗಳು ಮಂಜೂರಾಗಿವೆ. ಜನರ ಜೊತೆಗೆ ಜಾನುವಾರುಗಳ ರಕ್ಷಣೆಗೆ ಕೂಡ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಪ್ರಭು ಚವ್ಹಾಣ ಅವರು ಭರವಸೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಪ್ರತಿ ಸರ್ಕಾರ ಅಸ್ತಿತ್ವಕ್ಕೆ ಬಂದಾಗಲೂ ರೈತರ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದಿವೆ. ಪಶು ಸಂರಕ್ಷಣೆಗಾಗಿ ಈಗಾಗಲೇ ಲೋಕಾರ್ಪಣೆಗೊಂಡಿರುವ ಸಂಚಾರಿ ಚಿಕಿತ್ಸಾ ಘಟಕಗಳನ್ನು ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಪಶು ಸಾಕಾಣಿಕೆಗೆ, ಚಿಕಿತ್ಸೆ, ಆಸ್ಪತ್ರೆ, ಲಾಭ, ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಇಲಾಖೆ ಮಾಡಿರುವ ಸಾಧನೆ ಬಗ್ಗೆ 8 ನಿಮಿಷಗಳ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು.

ಕಾರ್ಯಕ್ರಮದಲ್ಲಿ  ಇಲಾಖೆಯ ವಿವಿಧ ಯೋಜನೆಗಳ ಅಡಿ 18 ಫಲಾನುಭವಿಗಳಿಗೆ ಸಾಂಕೇತಿಕವಾಗಿ ಸೌಲಭ್ಯಗಳ ಚೆಕ್ ವಿತರಣೆ ಮಾಡಲಾಯಿತು.

ಟಾಪ್ ನ್ಯೂಸ್

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.