ಅರ್ಥವಾಗದ ಗಣಿತ ಬೋಧನೆ-ಪ್ರತಿಭಟನೆ
Team Udayavani, Jul 20, 2022, 1:31 PM IST
ಗುರುಮಠಕಲ್: ಗಣಿತ ಪಾಠ ತಮಗೆ ಅರ್ಥವಾಗುತ್ತಿಲ್ಲ ಎಂದು ಶಾಲೆ ವಿದ್ಯಾರ್ಥಿಗಳು ಶಾಲೆಗೆ ಬೀಗ ಜಡಿದು ರಸ್ತೆಯಲ್ಲಿ ಕುಳಿತು ಮಂಗಳವಾರ ಪ್ರತಿಭಟನೆ ನಡೆಸಿದರು.
ಅರಕೇರಾ (ಕೆ) ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಒಟ್ಟು 256 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, 9 ಮತ್ತು 10 ನೇ ತರಗತಿ ವಿದ್ಯಾರ್ಥಿಗಳಿಗೆ ಒಬ್ಬರೇ ಶಿಕ್ಷಕಿ ಗಣಿತ ವಿಷಯ ಬೋಧನೆ ಮಾಡುತ್ತಾರೆ. ಆದರೆ ಕಳೆದ 4 ವರ್ಷಗಳಿಂದ ವಿಷಯ ಬೋಧನೆ ಅರ್ಥವಾಗುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದರು.
ಗಣಿತ ಶಿಕ್ಷಕರನ್ನು ವರ್ಗಾವಣೆ ಮಾಡಬೇಕು ಅಲ್ಲದೇ ಉತ್ತಮ ಭೋಧನೆ ಮಾಡುವರನ್ನು ನಿಯೋಜಿಸಬೇಕು. ನಮಗೆ ನ್ಯಾಯ ಒದಗಿಸಬೇಕು ಎಂದು ವಿದ್ಯಾರ್ಥಿಗಳು ಘೋಷಣೆ ಕೂಗುತ್ತ ಹೈದರಾಬಾದ್-ಯಾದಗಿರಿ ಜಿಲ್ಲಾ ಮುಖ್ಯ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿ ನಮಗೆ ಉತ್ತಮ ಗಣಿತ ಶಿಕ್ಷಕರನ್ನು ನಿಯೋಜಿಸುವವರೆಗೂ ಶಾಲೆಯೊಳಗೆ ಹೋಗುವುದಿಲ್ಲ ಹಾಗೂ ಸ್ಥಳಕ್ಕೆ ಡಿಡಿಪಿಐ ಭೇಟಿ ನೀಡಿ ಸಮಸ್ಯೆ ಪರಿಹರಿಸುವಂತೆ ಪಟ್ಟು ಹಿಡಿದರು.
ಪೋಷಕರು ಡಿಡಿಪಿಐ ಶಾಂತಕುಮಾರ ಪಾಟೀಲ್ ಅವರಿಗೆ ಕರೆ ಮಾಡಿ ವಿಷಯ ಪ್ರಸ್ತಾಪಿಸಿದಾಗ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಬೆಳಗ್ಗೆ ಶಾಲೆಗೆ ಭೇಟಿ ನೀಡಿದ್ದಾರೆ. ಸಮಸ್ಯೆ ತಿಳಿದು ಎರಡು ದಿನಗಳಲ್ಲಿ ಬೇರೆ ಗಣಿತ ಶಿಕ್ಷಕರನ್ನು ನಿಯೋಜಿಸಿ ಅನುಕೂಲ ಮಾಡಿಕೊಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದ ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಹಿಂಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ
Yadagiri: ರೈತರಿಗೆ ಭೂಮಿ ನೀಡಿದ್ದೇ ಕಾಂಗ್ರೆಸ್ ಪಕ್ಷ: ವಿ.ಎಸ್.ಉಗ್ರಪ್ಪ
ಕಳ್ಳರ ಮಾಹಿತಿ ನೀಡಿದ್ದೇ ಮುಳುವಾಯ್ತು… ಜೈಲಿನಿಂದ ಬರುತ್ತಿದ್ದಂತೆ ವ್ಯಕ್ತಿಯ ಹತ್ಯೆ
Hunasagi: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕಾಷ್ಟ ಶಿಲ್ಪಿ ಕಂಚಗಾರ ಇನ್ನಿಲ್ಲ
Yadgiri: ಯಾವುದೇ ರೈತರ ಭೂಮಿ ವಕ್ಫ್ ಗೆ ವರ್ಗಾವಣೆಯಾಗಿಲ್ಲ: ಸಚಿವ ದರ್ಶನಾಪುರ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.