ಖೈದಿಗಳ ದಿನಗೂಲಿ ಏರಿಕೆ ಸತ್ಯಕ್ಕೆ ದೂರವಾದದ್ದು: ಗೃಹ ಸಚಿವ ಆರಗ ಜ್ಞಾನೇಂದ್ರ
ಅಂತಹ ಆದೇಶ ಇದುವರೆಗೂ ಹೊರಡಿಸಿಲ್ಲ; ಭಾರಿ ಚರ್ಚೆ ಬಳಿಕ ಸ್ಪಷ್ಟನೆ
Team Udayavani, Jul 20, 2022, 3:27 PM IST
ಬೆಂಗಳೂರು : ಜೈಲಿನಲ್ಲಿರುವ ಖೈದಿಗಳಿಗೆ ದಿನಗೂಲಿ ಏರಿಕೆ ಮಾಡಲಾಗಿದೆ ಎಂಬ ವಿಷಯ ಸತ್ಯಕ್ಕೆ ದೂರವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ಮನಬಂದಂತೆ ವ್ಯಂಗ್ಯ ಚಿತ್ರಣ , ಮೀಮ್ ಮಾಡುವುದು, ಬರಹಗಳನ್ನು ಹಾಕಿದ್ದಾರೆ. ಖೈದಿಗಳ ದಿನಗೂಲಿಯನ್ನ 525 ರೂಗಳಿಗೆ ಏರಿಸಿದ್ದು ಬೇರೆ ಉದ್ಯೋಗಗಳಿಗಿಂತ ಜೈಲುವಾಸವೇ ಲಾಭದಾಯಕ ಎಂಬಂತೆ ಹಲವರು ಗೇಲಿ ಮಾಡಿ ಹರಿಬಿಟ್ಟಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅವರು ಈ ಸ್ಪಷ್ಟೀಕರಣ ನೀಡಿದ್ದಾರೆ.
ನಮ್ಮ ರಾಜ್ಯದಲ್ಲಿ ಸುಮಾರು ಹದಿನೈದು ಸಾವಿರ ಖೈದಿಗಳು ಜೈಲುವಾಸ ಅನುಭವಿಸುತ್ತಿದ್ದಾರೆ. ಜೈಲುವಾಸದಲ್ಲಿರುವ ಖೈದಿಗಳಿಗೆ ಕೂಲಿ ಹಣವನ್ನು 200 ರೂಗಳಿಂದ ಸ್ವಲ್ಪ ಹೆಚ್ಚಿಗೆ ಮಾಡುವ ಕುರಿತು ಪ್ರಸ್ತಾವನೆ ಮಾಡಲಾಗಿದೆಯೇ ಹೊರತೂ ಅಂತಹ ಆದೇಶ ಇದುವರೆಗೂ ಹೊರಡಿಸಿಲ್ಲ ಎಂದಿದ್ದಾರೆ.
ಜೈಲುಶಿಕ್ಷೆಯಲ್ಲಿರುವ ಹಲವು ಖೈದಿಗಳಿಂದ ಪ್ರತಿದಿನ ಕೆಲಸಕಾರ್ಯಗಳನ್ನು, ದುಡಿಮೆ ಮಾಡಿಸಲಾಗುತ್ತಿದ್ದು ಪ್ರತಿಯೊಬ್ಬ ಕೈದಿಯೂ ಕೆಲಸ ಮಾಡಬೇಕಾಗುತ್ತದೆ. ವಿವಿಧ ಕೆಲಸಗಳ ಮೂಲಕ ಕೈದಿಗಳ ಖಿನ್ನತೆಯನ್ನು ಹೋಗಲಾಡಿಸಿ ಅವರ ಮನಃಪರಿವರ್ತನೆ ಮಾಡುವುದು ಇದರ ಉದ್ದೇಶ. ಖೈದಿಗಳಿಗೆ ಕೈಮಗ್ಗ, ಕರಕುಶಲ ವಸ್ತುಗಳ ತಯಾರಿಕೆ , ಸೋಪ್ , ಮೇಣದಬತ್ತಿ ತಯಾರಿಕೆ ಸೇರಿದಂತೆ ಇಲಾಖೆಗೆ ಸೇರಿದ ಕೃಷಿ ಜಮೀನಿನಲ್ಲಿ ಹಣ್ಣು ತರಕಾರಿಗಳನ್ನು ಬೆಳೆದು ಮಾರಾಟ ಮಾಡಲಾಗುತ್ತದೆ. ಈ ಮೂಲಕ ಇಲಾಖೆಗೆ ಆದಾಯವೂ ಬರುತ್ತಿದೆ. ಆದರೆ ಶಿಕ್ಷೆಯಲ್ಲಿರುವ ಖೈದಿಗಳಿಗೆ ಈಗಲೂ ಕೊಡುತ್ತಿರುವುದು ದಿನಕ್ಕೆ 200 ರೂಗಳು. ಅದರಲ್ಲಿ ಊಟದ ಖರ್ಚು 100 ರೂಗಳನ್ನು ಸಹ ಕಳೆಯಲಾಗುತ್ತಿದೆ. ಖೈದಿಯಾದ ಮಾತ್ರಕ್ಕೆ ಆತನಿಂದ ಜೀತ ಮಾಡಿಸಿಕೊಳ್ಳುವ ಹಕ್ಕು ಯಾವ ಸರಕಾರಕ್ಕೂ ಇಲ್ಲ ಎಂದು ಹೇಳಿದ್ದಾರೆ.
ಈ ಕಾರಣದಿಂದಾಗಿ ಅವರಿಂದಲೇ ಬರುತ್ತಿರುವ ಲಾಭ ಬಳಸಿ ಅವರಿಗೆ ಸ್ವಲ್ಪ ಕೂಲಿ ಹೆಚ್ಚಿಸುವ ಯೋಚನೆ ಮಾಡಲಾಗಿದೆ ಅಷ್ಟೇ. ಕಾರಾಗೃಹವಾಸಿಗಳಲ್ಲಿ 50% ಗಿಂತಲೂ ಹೆಚ್ಚು ಅನಕ್ಷರಸ್ಥರೇ ಇದ್ದು ಈಗಾಗಲೇ ನಾನು ಗೃಹಸಚಿವನಾದ ಬಳಿಕ ಅವರಿಗೆಲ್ಲಾ ಅಕ್ಷರಾಭ್ಯಾಸ ನಡೆಸುವ ಯೋಜನೆಗೆ ಒತ್ತುಕೊಟ್ಟಿದ್ದು ಈಗಾಗಲೇ ಬಹಳಷ್ಟು ಪ್ರಗತಿ ಕಂಡುಬಂದಿದೆ.
ಸೆರೆವಾಸ ಮುಗಿಸಿ ಒಬ್ಬ ಪ್ರಜ್ಞಾವಂತ ನಾಗರೀಕನಾಗಿ ಬದುಕಬೇಕಾದ ಒಬ್ಬ ವ್ಯಕ್ತಿ ಬರಿಗೈಯಲ್ಲಿ ಮನೆಗೆ ಹೋದರೆ ಆತನ ಜೀವನ ಕಷ್ಟ. ತನ್ನ ಜೀವನಕ್ಕೆ ಏನೂ ಆಧಾರ, ಆದಾಯ ಇಲ್ಲದೇ ಸಮಾಜದ ದೃಷ್ಠಿಯಲ್ಲಿ ಅಸ್ಪೃಶ್ಯರಂತಾಗುವ ಆತ ಮತ್ತೆ ತನ್ನ ಜೀವನ ನಡೆಸಲು ಕೆಟ್ಟ ದಾರಿಯನ್ನೇ ಆರಿಸಿಕೊಳ್ಳುವ ಸಂಭವ ಇರುತ್ತದೆ. ಖೈದಿಗಳ ಕೂಲಿ ಏರಿಸಿದರೂ ಜೈಲಿನಿಂದ ಹೊರಬಂದ ನಂತರವೇ ಅವರಿಗೆ ಹಣ ನೀಡಲಾಗುತ್ತದೆ. ತಮ್ಮ ಕುಟುಂಬದ ನಿರ್ವಹಣೆಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ , ಸ್ವಂತ ಉದ್ಯೋಗಕ್ಕೆ ಇದು ಸಹಕಾರಿಯಾಗಲಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ.
ಈ ಎಲ್ಲಾ ಮಾನವೀಯತೆಯ ದೃಷ್ಠಿಯಿಂದ ಖೈದಿಗಳಿಂದ ಬರುತ್ತಿರುವ ಆದಾಯದಿಂದಲೇ ಅವರಿಗೆ ಸ್ವಲ್ಪ ಕೂಲಿ ಹೆಚ್ಚಿಸುವ ಯೋಚನೆ ಮಾಡಲಾಗಿದ್ದು ಇದರ ಸಾಧಕ ಬಾಧಕಗಳ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಖೈದಿಗಳ ಕೂಲಿ ಹೆಚ್ಚಿಸುವ ಆದೇಶ ಇನ್ನೂ ಜಾರಿಯಾಗಿಲ್ಲ ಆದರೆ ಹೀಗೊಂದು ಸದುದ್ದೇಶದ ಆಲೋಚನೆ ಮಾಡಲಾಗಿದೆಯಷ್ಟೆ.ಆದರೆ ಹಲವರು ಊಹಾಪೋಹಗಳನ್ನು ನಂಬಿ ಖೈದಿಗಳ ಸಂಬಳ ಶಿಕ್ಷಕರ ವೃತ್ತಿಗಿಂತಲೂ ಲೇಸು ಎಂದು ಎಲ್ಲೆಡೆ ಸುದ್ದಿ ಹರಡುತ್ತಿರುವುದು ತಿಳಿದುಬಂದಿದ್ದು ಈ ಬಗ್ಗೆ ಮೇಲಿನ ಸ್ಪಷ್ಟೀಕರಣ ನೀಡಬಯಸುತ್ತೇನೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.