![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jul 21, 2022, 1:16 PM IST
ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್
ಮಂಗಳೂರು: ಇಲ್ಲಿನ ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ಲಿಪ್ ಲಾಕ್ ಮಾಡಿಕೊಂಡಿರುವ ವೀಡಿಯೋ ಒಂದು ವೈರಲ್ ಆಗಿದೆ. ಇದೀಗ ಈ ದೃಶ್ಯವನ್ನು ವೀಡಿಯೋ ಮಾಡಿ ಸಾಮಾಜಿಕ ತಾಣಗಳಲ್ಲಿ ವೈರಲ್ ಮಾಡಿರುವ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆಯ ಪಿಯುಸಿ ವಿದ್ಯಾರ್ಥಿಗಳು ಖಾಸಗಿ ಕೊಠಡಿಯಲ್ಲಿ ಕಿಸ್ಸಿಂಗ್ ನಲ್ಲಿ ತೊಡಗಿದ್ದರು ಎನ್ನಲಾಗಿದೆ. ಕಾಲೇಜು ಯೂನಿಫಾರಂನಲ್ಲೇ ಕಿಸ್ಸಿಂಗ್ ನಲ್ಲಿ ತೊಡಗಿರುವ ಈ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ.
ವಿದ್ಯಾರ್ಥಿಗಳ ತಂಡದ ಮಧ್ಯೆಯಿದ್ದ ವಿದ್ಯಾರ್ಥಿಯೊಬ್ಬ ವಿದ್ಯಾರ್ಥಿನಿಗೆ ಲಿಪ್ ಲಾಕ್ ಮಾಡಿರುವ ವೀಡಿಯೋ ವೈರಲ್ ಆಗಿದೆ. ಇದೀಗ ಈ ವಿಡಿಯೋ ಮಾಡಿ ವೈರಲ್ ಮಾಡಿರುವ ವಿದ್ಯಾರ್ಥಿಯನ್ನು ಮಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ಸಂಬಂಧ ಕಾನೂನು ತಜ್ಞರ ಸಲಹೆ ಪಡೆದ ಕ್ರಮಕ್ಕೆ ಮುಂದಾಗಿದ್ದಾರೆ.
ಇದನ್ನೂ ಓದಿ:ಲೋಕಾಯುಕ್ತಕ್ಕೆ ಮತ್ತೆ ಅಧಿಕಾರ ನೀಡುವ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆ: ಸಚಿವ ಸುನೀಲ್ ಸುಳಿವು
ಈ ವೀಡಿಯೋದಲ್ಲಿ ಮೂವರು ಯುವಕರು ಹಾಗೂ ಮೂವರು ವಿದ್ಯಾರ್ಥಿನಿಯರಿದ್ದಾರೆ. ಮೂವರು ವಿದ್ಯಾರ್ಥಿನಿಯರು ಕಾಲೇಜು ಯೂನಿಫಾರಂ, ಐಡಿ ಕಾರ್ಡ್ ಸಹಿತ ಇದ್ದರೆ, ಉಳಿದ ಮೂವರು ಯುವಕರು ಯೂನಿಫಾರಂನಲ್ಲಿಲ್ಲ. ಸದ್ಯ ಪೊಲೀಸರು ವಿದ್ಯಾರ್ಥಿನಿಯರು ಹಾಗೂ ಆ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಿದ್ದು, ಶೀಘ್ರವೇ ಅವರೆಲ್ಲರನ್ನೂ ವಿಚಾರಣೆ ನಡೆಸುವ ಸಾಧ್ಯತೆಯಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.