ಸಹಕಾರ ಕ್ಷೇತ್ರಕ್ಕೆ ತಂತ್ರಜ್ಞಾನದ ನೆರವು ಅಗತ್ಯ; ಬಿ.ಸಿ. ಆನಂದ್
ಸಹಕಾರ ಕ್ಷೇತ್ರದ ಅಭಿವೃದ್ಧಿಯಿಂದ ಮಾತ್ರ ರೈತರ ಆರ್ಥಿಕ ಪ್ರಗತಿ ಸಾಧ್ಯ
Team Udayavani, Jul 21, 2022, 2:48 PM IST
ದೊಡ್ಡಬಳ್ಳಾಪುರ: ತಂತ್ರಾಂಶ ಮತ್ತು ಸಹಕಾರ ಕ್ಷೇತ್ರ ಒಟ್ಟೊಟ್ಟಿಗೆ ಬೆಳೆಯಬೇಕು. ತಂತ್ರಜ್ಞಾನದೊಂದಿಗೆ ಸಹಕಾರ ಕ್ಷೇತ್ರವನ್ನು ಬೆಳೆಸಿದರೆ ದೇಶದ ಅಭಿವೃದ್ಧಿ ಸಾಧ್ಯ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ. ಆನಂದ್ ಕುಮಾರ್ ಹೇಳಿದರು.
ನಗರದ ಬಮೂಲ್ ಶಿಬಿರ ಕಚೇರಿಯಲ್ಲಿ ರಾಜ್ಯ ಸಹಕಾರ ಮಹಾಮಂಡಳಿ, ಜಿಲ್ಲಾ ಸಹಕಾರ ಒಕ್ಕೂಟ ಸಹಯೋಗದೊಂದಿಗೆ ತಾಲೂಕಿನ ಎಲ್ಲಾ ಹಾಲು ಉತ್ಪಾದಕ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಾಹಕರಿಗೆ ಒಂದು ದಿನದ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಇದರಿಂದ ಗ್ರಾಹಕರಿಗೆ, ರೈತರಿಗೆ ಸದಸ್ಯರಿಗೆ ಠೇವಣಿದಾರರಿಗೆ ಅತೀ ಶೀಘ್ರದಲ್ಲಿಯೇ ಸ್ಪಂದಿಸಿ ಅವರ ಸೇವೆ ನೀಡಲು ಸಾಧ್ಯವಾಗುತ್ತದೆ ಎಂದರು.
ಗುಣಮಟ್ಟ ಕಾಪಾಡಿಕೊಳ್ಳಲು ಸಹಕಾರಿ: ಗ್ರಾಮೀಣ ಪ್ರದೇಶಗಳಲ್ಲಿ ಎಲ್ಲಾ ಹಳ್ಳಿಗಳಲ್ಲಿಯೂ ಒಂದೇ ರಾಜಕೀಯ ವಾತಾವರಣ ಇರುವುದಿಲ್ಲ. ಬದಲಾಗಿ ಪ್ರತಿ ಗ್ರಾಮಗಳಲ್ಲಿಯೂ ಒಂದೊಂದು ವಾತಾವರಣ ಇರುತ್ತದೆ. ಆದರೆ, ಸಹಕಾರಿ ಕ್ಷೇತ್ರ ಎಲ್ಲೆಡೆ ಒಂದೇ ಆಗಿರುತ್ತದೆ. ಹೀಗಾಗಿ ಇಲ್ಲಿ ಪಡೆಯುವ ತರಬೇತಿಯೂ ಎಂಪಿಸಿಎಸ್‌ಗಳ ಬೆಳವಣಿಗೆ, ಒಗ್ಗಟ್ಟನ್ನು ರೂಪಿಸಲು ಸಹಕಾರಿಯಾಗಬೇಕು. ರೈತರೊಂದಿಗೆ ಉತ್ತಮ ಸ್ನೇಹ ಸಂಬಂಧವಿಟ್ಟುಕೊಂಡು ವ್ಯವಹರಿಸಿದರೆ ಹೆಚ್ಚಿನ ಹಾಲಿನ ಉತ್ಪಾದನೆ, ಗುಣಮಟ್ಟ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂದರು.
ಈ ಬಗ್ಗೆ ರೈತರಿಗೆ ತಿಳಿವಳಿಕೆ ಅಗತ್ಯವಿದ್ದು, ತರಬೇತಿ ಕಾರ್ಯಾಗಾರದಲ್ಲಿ ಹೊಸ ಹೊಸ ಅಂಶಗಳನ್ನು ತಿಳಿದು ರೈತರಿಗೆ ತಿಳಿಸಬೇಕಿದೆ. ಯಾವುದೇ ಸಮಸ್ಯೆ ಇದ್ದರೂ ಕೇಳಬೇಕು. ಕೇಳಿದಾಗಲೇ ಸಮಸ್ಯೆಗೆ ಪರಿಹಾರ ಸಿಗುವುದು. ಸಹಕಾರಿ ಕ್ಷೇತ್ರದ ಕಾನೂನುಗಳ ಬಗ್ಗೆಯೂ ಅರಿವು ಮೂಡಿಸಬೇಕು ಎಂದರು.
ರೈತರ ಆರ್ಥಿಕ ಪ್ರಗತಿ ಸಾಧ್ಯ: ಎಪಿಎಂಸಿ ಮಾಜಿ ಅಧ್ಯಕ್ಷ ತಿ.ರಂಗರಾಜು ಮಾತನಾಡಿ, ಈ ಹಿಂದೆ ಸಹಕಾರ ಸಂಘಗಳಲ್ಲಿ ಸಾಲ ವಿತರಣೆ ಮತ್ತು ಸಾಲ ಮರುಪಾವತಿ ತುಂಬಾ ಕಷ್ಟದ ವಿಷಯವಾಗಿತ್ತು. ಆದರೆ, ಈಗ ಸಹಕಾರ ಸಂಘಗಳ ಮೂಲಕ ಸಾಲ ವಿತರಣೆ ಮತ್ತು ಸಾಲ ಮರುಪಾವತಿ ತುಂಬಾ ಸುಲಭವಾಗಿರುತ್ತದೆ. ಸಹಕಾರ ಕ್ಷೇತ್ರದ ಅಭಿವೃದ್ಧಿಯಿಂದ ಮಾತ್ರ ರೈತರ ಆರ್ಥಿಕ ಪ್ರಗತಿ ಸಾಧ್ಯ ಎಂದರು.
ತರಬೇತಿ ಕಾರ್ಯಾಗಾರ ಶಿಬಿರದಲ್ಲಿ ಸಹಕಾರ ಸಂಘಗಳ ಕಾಯ್ದೆ, ಕಾನೂನು, ಇತ್ತೀಚಿನ ತಿದ್ದುಪಡಿಗಳು, ಮುಖ್ಯ ಕಾರ್ಯನಿರ್ವಾಹಕರ ಹಕ್ಕು ಕರ್ತವ್ಯ ಮತ್ತು ಜವಾಬ್ದಾರಿ ಕುರಿತು ನಿವೃತ್ತ ಸಹಕಾರ ಸಂಘಗಳ ಅಪರ ನಿಬಂಧಕ ಎಚ್.ಎಸ್. ನಾಗರಾಜಯ್ಯ, ಸಹಕಾರ ಸಂಘಗಳಲ್ಲಿ ಚುನಾವಣೆ ಕುರಿತು ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಬಿ.ಎನ್ ಶೀಲ ಹಾಗೂ ಹೈನು ರಾಸುಗಳ ನಿರ್ವಹಣೆ ಕುರಿತು ಹಾಲು ಒಕ್ಕೂಟದ ಉಪ ವ್ಯವಸ್ಥಾಪಕ ಎಲ….ಬಿ ನಾಗರಾಜು ಉಪನ್ಯಾಸ ನೀಡಿದರು. ಜಿಲ್ಲಾ ಸಹಕಾರಿ ಒಕ್ಕೂಟದ ಅಧ್ಯಕ್ಷ ನಾಗರಾಜು, ಉಪಾಧ್ಯಕ್ಷ ಶ್ರೀನಿವಾಸಮೂರ್ತಿ, ನಿರ್ದೇಶಕ ಡಿ.ಸಿದ್ದರಾಮಯ್ಯ ಮತ್ತಿತರರು ಇದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.