ವಸತಿ ಶಾಲೆ ಹೆಣ್ಣುಮಕ್ಕಳ ಕರಾಟೆ ಕೌಶಲ್ಯ ವೀಕ್ಷಿಸಿದ ಸಚಿವ ಶ್ರೀನಿವಾಸ ಪೂಜಾರಿ
ಕರಾಟೆ ಯೋಜನೆ ಅನುಷ್ಠಾನಕ್ಕೆ 18ಕೋಟಿ ರೂ. ವೆಚ್ಚ
Team Udayavani, Jul 21, 2022, 4:36 PM IST
ಕೆ.ಆರ್.ಪೇಟೆ : ರಾಜ್ಯ ವಸತಿ ಶಾಲೆಗಳ ಹೆಣ್ಣುಮಕ್ಕಳ ಆತ್ಮರಕ್ಷಣೆಗಾಗಿ ರೂಪಿಸಿರುವ ಓಬವ್ವ ಆತ್ಮರಕ್ಷಣಾ ಕಲೆ ‘ಕರಾಟೆ’ ಯೋಜನೆಯಡಿ ಕರಾಟೆ ಯೋಜನೆಯ ಅನುಷ್ಠಾನಕ್ಕಾಗಿ 18 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗುತ್ತಿದೆ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕು ಶೆಟ್ಟಿನಾಯಕನಕೊಪ್ಪಲು ಕಿತ್ತೂರು ರಾಣಿಚೆನ್ನಮ್ಮ ವಸತಿ ಶಾಲೆಗೆ ಗುರುವಾರ ಭೇಟಿ ನೀಡಿ ಹೆಣ್ಣು ಮಕ್ಕಳ ಕರಾಟೆ ಕೌಶಲ್ಯವನ್ನು ವೀಕ್ಷಿಸಿ ಅವರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಹೆಚ್ಚುತ್ತಿದ್ದು ಅವರಿಗೆ ಆತ್ಮರಕ್ಷಣೆ ಕಲೆ ಅಗತ್ಯವಾಗಿತ್ತು ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಓಬವ್ವ ಆತ್ಮರಕ್ಷಣಾ ಕಲೆ ಕರಾಟೆ ಯೋಜನೆಯನ್ನು ರಾಜ್ಯದ ಎಲ್ಲ ವಸತಿ ಶಾಲೆಗಳಲ್ಲಿ ಆರಂಭಿಸಿದ್ದು, ಸುಮಾರು ಒಂದು ಸಾವಿರ ಕರಾಟೆ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಮಕ್ಕಳ ಕರಾಟೆ ಕಲೆ ಹಾಗೂ ಸಮವಸ್ತ್ರಕ್ಕಾಗಿ 18ಕೋಟಿ ರೂ.ಗಳನ್ನು ವೆಚ್ಚಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು.
ಈ ಕರಾಟೆ ಕಲೆಯನ್ನು ಶ್ರದ್ಧೆಯಿಂದ ಕಲಿತರೆ ಬ್ಲಾಕ್ ಬೆಲ್ಟ್ ಪಡೆಯಬಹುದು. ಬ್ಲಾಕ್ ಬೆಲ್ಟ್ ಕಲಿತ ಹೆಣ್ಣುಮಕ್ಕಳು ಎಂಥ ಕಠಿಣ ಸಂದರ್ಭವನ್ನೂ ಎದುರಿಸಬಲ್ಲರು ಎಂದು ಅವರು ಹೇಳಿದರು.
ಬಡವರು, ಆರ್ಥಿಕವಾಗಿ ಹಿಂದುಳಿದವರು, ಅಲೆಮಾರಿಗಳ ಮಕ್ಕಳೇ ವಿಶೇಷವಾಗಿ ಈ ವಸತಿ ಶಾಲೆಗಳಿಗೆ ದಾಖಲಾಗುತ್ತಿದ್ದು ಈ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸರ್ಕಾರ ಬದ್ಧವಾಗಿದೆ. ಈ ಹಿನ್ನೆಲೆಯಲ್ಲಿ ವಸತಿಶಾಲೆಗಳನ್ನು ಮತ್ತಷ್ಟು ಬಲಪಡಿಸಲು ಕ್ರಮ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.
ಇತ್ತೀಚಿನ ಎಸ್ ಎಸ್ ಎಲ್ ಸಿ ಫಲಿತಾಂಶ ವಸತಿ ಶಾಲೆಯ ಗುಣಮಟ್ಟವನ್ನು ದಾಖಲಿಸಿದೆ ಎಂದ ಅವರು, ವಸತಿ ಶಾಲೆಯಲ್ಲಿ ಓದಿದ ಮಕ್ಕಳು ದೇಶದ ಅತ್ಯುನ್ನತ ಐಐಟಿ, ಐಐಎಂಗಳಲ್ಲಿ ಪ್ರವೇಶ ಪಡೆಯುತ್ತಿರುವುದು ನಮ್ಮ ಸರ್ಕಾರದ ಹೆಮ್ಮೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ವಿವಿಧ ಅಧಿಕಾರಿಗಳು, ಮುಖಂಡರು ಉಪಸ್ಥಿತರಿದ್ದರು. ಕಾರ್ಯಕ್ರಮ ನಂತರ ಇಲಾಖೆ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿದರು.
ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆಯ ಶೆಟ್ಟಿ ನಾಯಕನ ಕೊಪ್ಪಲು ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿದಾಗ ನಮ್ಮ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೆಮ್ಮೆಯ ಯೋಜನೆ ಓಬವ್ವ ಆತ್ಮ ರಕ್ಷಣೆ ಕಲೆ ಕರಾಟೆಯನ್ನು ವಿದ್ಯಾರ್ಥಿನಿಯರು ಆತ್ಮವಿಶ್ವಾಸದಿಂದ ಪ್ರದರ್ಶನ ಮಾಡಿದ್ದು ನೋಡಿ ಸಂತಸ ಪಟ್ಟೆ.@BSBommai pic.twitter.com/AObD6HgfA5
— Kota Shrinivas Poojari (@KotasBJP) July 21, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.