ಶನೇಶ್ವರ ದೇವಸ್ಥಾನಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ 1,50,000 ರೂ. ಧನ ಸಹಾಯ
Team Udayavani, Jul 21, 2022, 7:36 PM IST
ಸಕಲೇಶಪುರ: ಪುರಾತನ ಕಾಲದ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ವತಿಯಿಂದ ನಿರಂತರವಾಗಿ ನೆರವು ನೀಡಲಾಗುತ್ತಿದೆ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯ ಹಾಸನ ಜಿಲ್ಲಾ ನಿರ್ದೇಶಕಿ ಮಮತಾ ಹರೀಶ್‌ರಾವ್ ಹೇಳಿದರು.
ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಗ್ರಾಮದ ಶ್ರೀ ಗುರು ಶನೈಶ್ವರ ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ವತಿಯಿಂದ ಮಂಜೂರಾದ 1,50,000ರೂ. ಗಳನ್ನು ದೇವಸ್ಥಾನ ಅಭಿವೃದ್ದಿ ಸಮಿತಿಗೆ ಹಸ್ತಾಂತರಿಸಿದ ನಂತರ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಡಾ.ವೀರೇಂದ್ರ ಹೆಗ್ಗಡೆ ರವರ ಮಾರ್ಗದರ್ಶನದಲ್ಲಿ ಹಲವಾರು ಸಾಮಾಜಿಕ ಚಟುವಟಿಕೆಗಳನ್ನು ಮಾಡಲಾಗುತ್ತಿದೆ.
ಧರ್ಮಸ್ಥಳ ಸಂಸ್ಥೆ ವತಿಯಿಂದ ಸಾವಿರಾರು ಪುರಾತನ ಕಾಲದ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ನೆರವು ನೀಡಲಾಗಿದೆ. ಈ ನಿಟ್ಟಿನಲ್ಲಿ ಪಶ್ಚಿಮಘಟ್ಟದ ತಪ್ಪಲಿನಲ್ಲಿರುವ ವಳಲಹಳ್ಳಿ ಗ್ರಾಮದ ಗುರು ಶನೇಶ್ವರ ದೇವಸ್ಥಾನದ ಗೋಪುರ ಜೀರ್ಣೋದ್ದಾರಕ್ಕೆ ಧರ್ಮಸ್ಥಳ ಸಂಸ್ಥೆ ವತಿಯಿಂದ ಸುಮಾರು 1,50,000 ರೂ. ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತಾಲೂಕಿನ ಯೋಜನಾಧಿಕಾರಿಗಳಾದ ಪುರುಷೋತ್ತಮ್. ವಲಯದ ಮೇಲ್ವಿಚಾರಕರಾದ ಚಿರಂತ್ ಹಾಗೂ ಸೇವಾಪ್ರತಿನಿಧಿಗಳಾದ ಶೃತಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
21ಎಸ್.ಕೆ.ಪಿ.ಪಿ 2 ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿ ವಳಲಹಳ್ಳಿ ಗ್ರಾಮದ ಶ್ರೀ ಗುರು ಶನೈಶ್ವರ ದೇವಸ್ಥಾನದ ಗೋಪುರ ನಿರ್ಮಾಣಕ್ಕೆ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ವತಿಯಿಂದ ಮಂಜೂರಾದ 1,50,000ರೂ. ಗಳನ್ನು ದೇವಸ್ಥಾನ ಅಭಿವೃದ್ದಿ ಸಮಿತಿಗೆ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆಯ ಅಧಿಕಾರಿಗಳು ಹಸ್ತಾಂತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
Devi Temple: ಹಾಸನಾಂಬೆ ದೇವಿ ದರ್ಶನ ಅವ್ಯವಸ್ಥೆ, ಭಕ್ತರ ಆಕ್ರೋಶ: ವಿಶೇಷ ಪಾಸ್ ರದ್ದು
Hasanambe Temple: ಇಂಥ ಹಲವು ಡಿಸಿಗಳನ್ನು ನೋಡಿದ್ದೇನೆ: ಎಚ್.ಡಿ.ರೇವಣ್ಣ ಕಿಡಿ
Party Clean: ಹೊಂದಾಣಿಕೆ ರಾಜಕಾರಣ ಮಾಡೋರಿಗೆ ಬಿಜೆಪಿಯಿಂದ ಗೇಟ್‌ಪಾಸ್: ಬಿ.ವೈ.ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.