ಸೋನಿಯಾ ಗಾಂಧಿ ಮೇಲೆ ಸುಳ್ಳು ಆರೋಪ ಮಾಡಿ ಕಿರುಕುಳ ನೀಡುತ್ತಿದೆ: ರಮಾನಾಥ ರೈ
Team Udayavani, Jul 22, 2022, 11:34 AM IST
ಮಂಗಳೂರು: ಸೋನಿಯಾ ಗಾಂಧಿಯವರ ಮೇಲೆ ಸುಳ್ಳು ಆರೋಪ ಮಾಡಿ ವಿಚಾರಣೆಗೆ ಒಳಪಡಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಕಿಡಿಕಾರಿದರು.
ಸೋನಿಯಾಗಾಂಧಿಯವರ ಇಡಿ ವಿಚಾರಣೆ ವಿರುದ್ದ ಮಂಗಳೂರಿನ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆಯಲ್ಲಿ ನಡೆದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಸೋನಿಯಾ ಗಾಂಧಿಯವರು ಪ್ರಧಾನಿಯಾಗಬಹುದಿತ್ತು. ಆದರೆ ಅವರು ನಯವಾಗಿ ತಿರಸ್ಕರಿಸಿದ್ದರು. ಅವರಿಗೆ ಅಧಿಕಾರದ ಆಸೆ ಇರಲಿಲ್ಲ. ಕಾಂಗ್ರೆಸ್ ವರ್ಚಸ್ಸು ಕುಗ್ಗುಸುವ, ಹೆದರಿಸುವ ಪ್ರಯತ್ನವಾಗಿ ಸರಕಾರ ವಿಚಾರಣೆ ಮಾಡುತ್ತಿದೆ ಎಂದರು.
ಈಶ್ವರಪ್ಪನವರ ಪ್ರಕರಣದಲ್ಲಿ ಬಿ ರಿಪೋರ್ಟ್ ಹಾಕಿದ್ದಾರೆ. ಬೇಕಾದವರನ್ನು ರಕ್ಷಿಸುತ್ತಿದ್ದಾರೆ. ಬಿಜೆಪಿಯವರ ಮೇಲೆ ಇಡಿ ತನಿಖೆ ನಡೆಯುತ್ತಿಲ್ಲ. ಬಿಜೆಪಿ ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡುತ್ತಿದೆ ಎಂದು ಹೇಳಿದರು.
ಇದನ್ನೂ ಓದಿ: ದ್ರೌಪದಿ ಮುರ್ಮು ಅವರಿಗೆ ದಾಖಲೆ ಮತದ ಗೆಲುವು: ನಳಿನ್ ಕುಮಾರ್ ಕಟೀಲ್ ಅಭಿನಂದನೆ
ಬಳಿಕ ಮಾತನಾಡಿದ ಮಾಜಿ ಶಾಸಕ ಮಧು ಬಂಗಾರಪ್ಪ, ಬಿಜೆಪಿಯವರು ದೇಶವನ್ನು ಅಧೋಗತಿಗೆ ಕೊಂಡೊಯ್ಯುತ್ತಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಕಿರುಕುಳ ನೀಡುತ್ತಿರುವುದು ಖಂಡನೀಯ ಎಂದರು.
ಈ ವೇಳೆ ಮಾಜಿ ಶಾಸಕ ಜೆ.ಆರ್. ಲೋಬೋ, ಶಕುಂತಳಾ ಶೆಟ್ಟಿ, ಮೊಯಿದಿನ್ ಬಾವಾ, ಐವನ್ ಡಿಸೋಜಾ, ಮುಖಂಡರಾದ ಮಿಥುನ್ ರೈ ಮೊದಲಾದವರು ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.