ಸಂತೆಯಲಿ ಪ್ಲಾಸ್ಟಿಕ್ ಶೋಧ: ಬಿತ್ತು ದಂಡ
Team Udayavani, Jul 22, 2022, 3:33 PM IST
ವಾಡಿ: ಪಟ್ಟಣದಲ್ಲಿ ಗುರುವಾರ ನಡೆಯುತ್ತಿದ್ದ ವಾರದ ಸಂತೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ವರ್ತಕರಿಗೆ ಪುರಸಭೆ ಅಧಿಕಾರಿಗಳು ದಂಡ ವಿಧಿಸಿದರು.
ಗುರುವಾರದ ಸಂತೆಗೆ ವಿವಿಧೆಡೆಯಿಂದ ಆಗಮಿಸಿ ವ್ಯಾಪಾರದಲ್ಲಿ ತೊಡಗಿದ್ದ ತರಕಾರಿ, ಹಣ್ಣು, ಹೂ, ಬಟ್ಟೆ, ತೆಂಗು, ಭಜ್ಜಿ, ಜಿಲೇಬಿ, ಮಕ್ಕಳ ಆಟಿಕೆ ವ್ಯಾಪಾರಿಗಳು ಸಾಮಾನ್ಯ ರೀತಿಯಲ್ಲಿ ಸಹಜವಾಗಿ ಪ್ಲಾಸ್ಟಿಕ್ ಕೈಚೀಲ ಹಾಗೂ ಕ್ಯಾರಿಬ್ಯಾಗ್ ಇಟ್ಟುಕೊಂಡು ಖರೀದಿಗೆ ಬಂದ ಗ್ರಾಹಕರಿಗೆ ನೀಡುತ್ತಿದ್ದರು. ಈ ವೇಳೆ ಮಾರುಕಟ್ಟೆ ಪ್ರವೇಶಿಸಿದ ಪುರಸಭೆ ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ, ಪರಿಸರ ಅಭಿಯಂತರ ಪೂಜಾ ಫುಲಾರೆ, ಹಿರಿಯ ಆರೋಗ್ಯ ನೈರ್ಮಲ್ಯ ನಿರೀಕ್ಷಕಿ ಲತಾಮಣಿ ಎಲ್, ಕಿರಿಯ ನಿರೀಕ್ಷಕ ಬಸವರಾಜ ಪೂಜಾರಿ, ವ್ಯವಸ್ಥಾಪಕ ಮಲ್ಲಿಕಾರ್ಜುನ ಹಾರಕೂಡ, ವಿಶ್ವನಾಥ ಭಾಗೋಡಿ, ಶ್ರೀಮಂತ ಧುಮ್ಮನಸೂರ ನೇತೃತ್ವದ ತಂಡ ಪ್ಲಾಸ್ಟಿಕ್ ಶೋಧ ನಡೆಸಿತು.
ನಿಷೇಧಕ್ಕೊಳಪಟ್ಟ ಪ್ಲಾಸ್ಟಿಕ್ ಬಳಕೆಯಲ್ಲಿ ತೊಡಗಿದ ವ್ಯಾಪಾರಿಗಳಿಗೆ ದಂಡ ವಿಧಿಸುವ ಮೂಲಕ ಕಾನೂನಿನ ಬಿಸಿ ಮುಟ್ಟಿಸಿತು. ಈ ವೇಳೆ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ, ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ವಿಷಕಾರಿಯುಕ್ತ ತ್ಯಾಜ್ಯ ಪ್ಲಾಸ್ಟಿಕ್‌ನ್ನು ಯಾವುದೇ ಕಾರಣಕ್ಕೂ ಬಳಕೆ ಮಾಡಬಾರದು. ಮಾಡಿದರೇ ವ್ಯಾಪಾರಿಗಳು ದಂಡ ತೆತ್ತುವ ಜತೆಗೆ ಶಿಕ್ಷೆಗೂ ಗುರಿಯಾಗಬೇಕಾಗುತ್ತದೆ ಎಂದ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid Scam: ಕೋವಿಡ್ ಹಗರಣ ತಾರ್ಕಿಕ ಅಂತ್ಯ: ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್
Kalaburagi: ಭಾರತೀಯ ಸಂಸ್ಕೃತಿ ಉತ್ಸವ ಯಶಸ್ಸಿಗೆ ಸಕಲ ಸಿದ್ದತೆ
Kalaburagi: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹೊತ್ತಿ ಉರಿದ ಕಾಫಿಜಾ ಕೆಫೆ
ಸಿದ್ಧಗಂಗಾ ಮಠದ ಶ್ರೀಸಿದ್ದಲಿಂಗ ಹೆಸರಿನಲ್ಲಿ ದೇಣಿಗೆ ವಸೂಲಿ: ಹಳೆ ವಿದ್ಯಾರ್ಥಿಗಳ ಬೇಸರ
Agriculture: ನೆಟೆರೋಗದಿಂದ ತೊಗರಿ ಸಂಪೂರ್ಣ ನಾಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ
Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ
Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ
Mangaluru: ಎಂಸಿಸಿ ಬ್ಯಾಂಕ್ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ
Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.