![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Jul 22, 2022, 6:23 PM IST
ಮಂಗಳೂರು:ಶ್ರೀಕೃಷ್ಣ ದೇವಿ ಪ್ರಸಾದ್ ಸ್ವಾಮೀಜಿ (51) ಅವರ ಆಶ್ರಮ ತಲಕಳ ಧರ್ಮ ಚಾವಡಿಯಲ್ಲಿ ಶುಕ್ರವಾರ, ಜುಲೈ 22 ರಂದು ಶವವಾಗಿ ಪತ್ತೆಯಾಗಿದ್ದಾರೆ.ಆತ್ಮಹತ್ಯೆ ಶಂಕಿತಸಲಾಗಿದೆ.
ಸನ್ಯಾಸ ಸ್ವೀಕರಿಸುವ ಮೊದಲು ಶ್ರೀಕೃಷ್ಣ ದೇವಿ ಪ್ರಸಾದ್ ಸ್ವಾಮೀಜಿ ಮುಂಬೈನಲ್ಲಿ ಹೋಟೆಲ್ ಉದ್ಯಮಿಯಾಗಿದ್ದರು. ನಂತರ ಅವರು ಲೌಕಿಕ ಭೋಗಗಳನ್ನು ತ್ಯಜಿಸಿ ಕೊಳಂಬೆ ಗ್ರಾಮದ ತಲಕಳ ಕಂದಾವರ ಪಂಚಾಯತ್ ವ್ಯಾಪ್ತಿಯ ಬಳಿ ನಿರ್ಮಿಸಿದ ಆಶ್ರಮದಲ್ಲಿ ವಾಸಿಸುತ್ತಿದ್ದರು.
ಅವರಿಗೆ ಮದುವೆಯಾಗಿದ್ದು, ಮಗಳಿದ್ದಾಳೆ.
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅಸ್ವಾಭಾವಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.