ಪತ್ನಿ ಕೊಂದವನಿಗೆ ಜೀವಾವಧಿ ಶಿಕ್ಷೆ:ವಿಜಯಪುರ ಜಿಲ್ಲಾ ನ್ಯಾಯಾಲಯ ತೀರ್ಪು
ಶೀಲ ಶಂಕಿಸಿ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಹತ್ಯೆ
Team Udayavani, Jul 22, 2022, 6:42 PM IST
ವಿಜಯಪುರ : ಶೀಲ ಶಂಕಿಸಿ ಪತ್ನಿ ಮೇಲೆ ಸೀಮೆಎಣ್ಣೆ ಸುರಿದು ಹತ್ಯೆಗೈದ ಪತಿಗೆ ವಿಜಯಪುರ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ನೀಡಿ, 50 ಸಾವಿರ ದಂಡ ವಿಧಿಸಿ ಶುಕ್ರವಾರ ತೀರ್ಪು ನೀಡಿದೆ.
ಇಂಡಿ ತಾಲೂಕಿನ ಕೆ.ಡಿ. ಗ್ರಾಮದ ಅಮೃತ ಭೀಮಶ್ಯಾ ಮುಚ್ಚಂಡಿ ಶಿಕ್ಷೆಗೆ ಗುರಿಯಾದವ. ಗಂಡನಿಂದಲೇ ಹತ್ಯೆಯಾದ ದುರ್ದೈವಿ ಮಹಿಳೆ ಲಕ್ಷ್ಮೀ. ಮದ್ಯ ವ್ಯಸನಿಯಾಗಿದ್ದ ಅಮೃತ ತನ್ನ ಪತ್ನಿ ಲಕ್ಷ್ಮೀ ಶೀಲದ ಬಗ್ಗೆ ಸಂಶಯ ಹೊಂದಿದ್ದ. ಸಂಶಯದಿಂದಲೇ ತನ್ನ ಪತ್ನಿ ಯಾರೊಂದಿಗೆ ಮಾತನಾಡಿದರೂ ಸರಿ, ಜಮೀನು ಕೆಲಸಕ್ಕೆ ಹೋದರೂ ಆಕೆಯ ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದ.
2015 ಸೆಪ್ಟೆಂಬರ್ 19 ರಂದು ರಾತ್ರಿ ಮದ್ಯ ಸೇವಿಸಿ ಮನೆಗೆ ಬಂದಿದ್ದ ಅಮೃತ, ಪತ್ನಿಯೊಂದಿಗೆ ಜಗಳ ತೆಗೆದು, ಹಲ್ಲೆ ನಡೆಸಿದ್ದ. ಅಲ್ಲದೇ ಕೊಲ್ಲುವುದಾಗಿ ಜೀವ ಬೆದರಿಕೆಯನ್ನೂ ಹಾಕಿದ್ದ. ಕೊನೆಗೆ ರಾತ್ರಿ 11-45 ರ ಸುಮಾರಿಗೆ ಮನೆಯಲ್ಲಿ ಮಲಗಿದ್ದ ಪತ್ನಿ ಲಕ್ಷ್ಮೀ ಮೇಲೆ ಸೀಮೆ ಎಣ್ಣೆ ಸುರಿದು ಹತ್ಯೆ ಬೆಂಕಿ ಹಚ್ಚಿದ್ದ.
ಲಕ್ಷ್ಮೀ ಸುಟ್ಟಗಾಯಗಳಿಂದ ನಡೆಸಿದ ಚೀರಾಟ ಕೇಳಿ ಆಕೆಯ ಮಗ ಹಾಗೂ ಸುತ್ತಲಿನವರು ಓಡಿ ಬಂದು ಆಕೆಯನ್ನು ಇಂಡಿ ಸರ್ಕಾರಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದರು. ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಆಕೆಯನ್ನು ವಿಜಯಪುರ ಚಿಕಿತ್ಸೆ ಕೊಡಿಸಿ, ಸೋಲ್ಲಾಪುರ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಳು.
ಈ ಕುರಿತು ಗಾಯಾಳು ಲಕ್ಷ್ಮೀ ಪೊಲೀಸರಿಗೆ ದೂರು ನೀಡಿ, ಪೊಲೀಸರಿಗೆ ಗಂಡನ ಕೃತ್ಯದ ವಿವರ ನೀಡಿದ್ದಳು. ಪೊಲೀಸರು ತನಿಖೆ ನಡೆಸಿ, ಅಮೃತ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನಾಲ್ಕನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಮಧ್ವೇಶ ದಬೇರ ಇವರು ಶುಕ್ರವಾರ ಅಮೃತ್ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ.
ಸರ್ಕಾರದ ಪರವಾಗಿ 4ನೇ ಅಧಿಕ ಸರ್ಕಾರಿ ಅಭಿಯೋಜಕ ವಿ.ಜಿ.ಮಾಮನಿ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ವೃಕ್ಷಥಾನ್ ಹೆರಿಟೇಜ್ ರನ್ಗೆ ಸ್ಪೀಕರ್ ಯು.ಟಿ.ಖಾದರ್ ಚಾಲನೆ
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
Vijayapura: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನಾವು ಕೇಳಿಲ್ಲ: ಶಾಸಕ ಯತ್ನಾಳ್
ನನ್ನನ್ನು ಪಕ್ಷದಿಂದ ಹೊರ ಹಾಕಲಾರದೆ ಹತಾಶೆ: ವಿಜಯೇಂದ್ರ ಬಣದ ಬಗ್ಗೆ ಯತ್ನಾಳ್ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.