ರಾಜ್ಯದ “ಮೆಂಟಲ್ ಹೆಲ್ತ್ ಇನೀಶಿಯೇಟಿವ್’ ಮೆಚ್ಚಿದ ಕೇಂದ್ರ ಸರ್ಕಾರ
ರಾಜ್ಯದ ಯೋಜನೆ ದೇಶಾದ್ಯಂತ ಜಾರಿ!
Team Udayavani, Jul 23, 2022, 6:55 AM IST
ಕೊರೊನಾ ಕಾಲದಲ್ಲಿ ದೈಹಿಕವಾಗಿ ಜನ ಎಷ್ಟು ಜರ್ಜರಿತವಾಗಿದ್ದರೋ, ಅದೇ ರೀತಿ ಮಾನಸಿಕವಾಗಿಯೂ ಆಘಾತಗೊಂಡಿದ್ದರು. ಅದರಲ್ಲೂ ಕೊರೊನಾ ಬಂದಿದೆ ಎಂದು ಗೊತ್ತಾದ ತಕ್ಷಣವೇ ಕೆಲವರು ಆತ್ಮಹತ್ಯೆಗೂ ಶರಣಾಗಿದ್ದರು. ಹೀಗಾಗಿ, ಆಗ ಜನರಲ್ಲಿ ಮಾನಸಿಕ ದೃಢತೆ ಹೆಚ್ಚಿಸಲು ರಾಜ್ಯ ಸರ್ಕಾರ ಆರಂಭಿಸಿದ್ದ “ಮೆಂಟಲ್ ಹೆಲ್ತ್ ಇನಿಶಿಯೇಟಿವ್ಸ್’ ಹಲವಾರು ಮಂದಿಯ ಪ್ರಾಣ ಉಳಿಸಿದೆ. ಈ ಯೋಜನೆ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ದೇಶಾದ್ಯಂತ ಜಾರಿ ಮಾಡಲು ಹೊರಟಿದೆ ಎಂದು ಸ್ವತಃ ಡಾ.ಕೆ.ಸುಧಾಕರ್ ಅವರೇ ಹೇಳಿದ್ದಾರೆ.
ಏನಿದು ಯೋಜನೆ?
ಮಾನಸಿಕ ರೋಗಿಗಳ ನೆರವಿಗಾಗಿ ಆರಂಭಿಸಲಾಗಿರುವ ಯೋಜನೆ ಇದು. ಕೊರೊನಾ ಕಾಲದಲ್ಲಿ ಮಾನಸಿಕವಾಗಿ ನೊಂದವರಿಗೆ ಧೈರ್ಯ ತುಂಬಲು ನಿಮ್ಹಾನ್ಸ್ ಸಹಯೋಗದಲ್ಲಿ ಆಪ್ತ ಸಮಾಲೋಚನೆ ಆರಂಭಿಸಲಾಗಿದೆ. ಜೊತೆಗೆ ಇದರಲ್ಲೇ ಆನ್‌ಲೈನ್ ಸೇವೆಯನ್ನೂ ಆರಂಭಿಸಲಾಯಿತು. ಇದು ಯಶಸ್ವಿಯಾಗಿದ್ದು, ಒಂದೂವರೆ ವರ್ಷದಲ್ಲಿ 25 ಲಕ್ಷ ಜನರಿಗೆ ಆಪ್ತ ಸಮಾಲೋಚನೆ ಮಾಡಲಾಗಿದೆ.
ಎರಡು ವರ್ಷಗಳ ಹಿಂದಿನ ಚಿಂತನೆ
ಕೊರೊನಾ ಬಂದ ಆರಂಭದಲ್ಲಿ ಜನರಲ್ಲಿ ಇದರ ಬಗ್ಗೆ ವಿಪರೀತ ಭಯವಿತ್ತು. ಕೊರೊನಾ ಪಾಸಿಟಿವ್ ಎಂದ ಕೂಡಲೇ ಎಷ್ಟೋ ಮಂದಿ ಭಯದಿಂದಲೇ ಸಾವನ್ನಪ್ಪಿದ್ದರೆ, ಇನ್ನೂ ಕೆಲವರು ಮಾನಸಿಕವಾಗಿ ಧೈರ್ಯ ಕಳೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಅಂದರೆ, ಕೊರೊನಾ ಪಾಸಿಟಿವ್ ಎಂದು ವರದಿ ಬಂದ ಕೂಡಲೇ ರೋಗಿಯೊಬ್ಬರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದರು. ಇದನ್ನು ನೋಡಿ, ಕೊರೊನಾ ಆರಂಭದಲ್ಲೇ ಈ ಯೋಜನೆ ಆರಂಭಕ್ಕೆ ಚಿಂತನೆ ನಡೆಸಲಾಗಿತ್ತು.
ಕೇಂದ್ರದಿಂದಲೂ ಜಾರಿ
ಈ ಯೋಜನೆಯನ್ನು ಕೇಂದ್ರ ಸರ್ಕಾರ ಮೆಚ್ಚಿದೆ ಎಂದು ಹೇಳಿದವರು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್. ನಿಮ್ಹಾನ್ಸ್‌ನಲ್ಲಿ ವಿಶ್ವ ಮೆದುಳು ಆರೋಗ್ಯ ದಿನ ಹಾಗೂ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ “ಬ್ರೈನ್ ಹೆಲ್ತ್ ಕ್ಲಿನಿಕ್’ ಉದ್ಘಾಟನಾ ಸಮಾರಂಭದಲ್ಲಿ ಈ ಬಗ್ಗೆ ಮಾತನಾಡಿ, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ನಿಮ್ಹಾನ್ಸ್‌ನ ವೈದ್ಯರನ್ನು ಶ್ಲಾ ಸಿದರು.
ನಿಮ್ಹಾನ್ಸ್ ಪಾತ್ರವೇನು?
ಗ್ರಾಮೀಣ ಪ್ರದೇಶದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಂಬಿಬಿಎಸ್ ಮಾಡಿದ ವೈದ್ಯರಿದ್ದಾರೆ. ಮಾನಸಿಕ ರೋಗಿಗಳು ಇವರ ಬಳಿ ಬಂದಾಗ ಚಿಕಿತ್ಸೆ ನೀಡಲು ವಿಶೇಷ ತರಬೇತಿ ಬೇಕು. ಬೆಂಗಳೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ನಿಮ್ಹಾನ್ಸ್‌ನ ತಜ್ಞರು ಈಗಾಗಲೇ 100 ವೈದ್ಯರಿಗೆ ತರಬೇತಿ ನೀಡಿದೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ಜಾರಿ ಮಾಡಲಾಗಿದೆ. ಮಾನಸಿಕ ರೋಗಿಗಳು ನೇರವಾಗಿ ನಿಮ್ಹಾನ್ಸ್‌ಗೆ ಬರದೇ ಸ್ಥಳೀಯ ಮಟ್ಟದಲ್ಲೇ ಸೇವೆ ಪಡೆಯಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.