ಗ್ರಾಮೀಣ ಸಮಸ್ಯೆಗೆ ಮಾಧ್ಯಮ ಗಮನಹರಿಸಲಿ
Team Udayavani, Jul 23, 2022, 1:11 PM IST
ಆಳಂದ: ಪ್ರತಿಯೊಬ್ಬರು ಪತ್ರಿಕೆಗಳನ್ನು ಕೊಂಡು ಓದಬೇಕು, ಟಿವಿ, ಕಂಪ್ಯೂಟರ್ ಹಾಗೂ ಸಾಮಾಜಿಕ ಜಾಲತಾಣದಿಂದ ಪತ್ರಿಕೆಗಳ ಓದು ಕುಗ್ಗಬಾರದು ಎಂದು ಮಾಜಿ ಶಾಸಕ ಬಿ.ಆರ್. ಪಾಟೀಲ ಹೇಳಿದರು.
ಪಟ್ಟಣದ ಜೂನಿಯರ್ ಕಾಲೇಜಿನ ಆವರಣದಲ್ಲಿ ಶುಕ್ರವಾರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳು ನಗರ ಸಮಸ್ಯೆಗಳಿಗೆ ಒತ್ತು ನೀಡಿದಂತೆ ಗ್ರಾಮೀಣ ಸಮಸ್ಯೆಗಳಿಗೂ ಹೆಚ್ಚು ಗಮನಹರಿಸಿ, ಸರ್ಕಾರದ ಕಣ್ಣು ತೆರೆಸುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.
ಮಾಧ್ಯಮ ಸಮಾಜದ ನಾಲ್ಕನೇ ಸ್ತಂಭವಾಗಿದೆ. ಈ ಮಾಧ್ಯಮದ ಮೂಲಕ ಜನ ಜಾಗೃತಿ ಮೂಡಿಸುವ ಕೆಲಸ ವಾಗಬೇಕು. ಸಾಮಾಜಿಕ ಕಳಕಳಿ ಹೊಂದಿ ಜನಪರ ವರದಿ ನೀಡುವ ಕಾರ್ಯವಾಗಬೇಕು ಎಂದರು.
ಪ್ರಭುಲಿಂಗ ನಿಲೂರ ಮಾತ ನಾಡಿ, ಪತ್ರಕರ್ತರು ಸಮಸ್ಯೆ, ಸವಾಲುಗಳ ನಡುವೆ ವರದಿ ಮಾಡಿ ಜನರೆದುರು ಇಡುತ್ತಿದ್ದಾರೆ. ಇದಕ್ಕೆ ಜನರ ಸಹಕಾರ ಅಗತ್ಯವಾಗಿದೆ. ಪತ್ರಕರ್ತರು ವಾಸ್ತವಿಕತೆ ಅರಿತು ವರದಿ ಮಾಡಬೇಕು ಎಂದು ಹೇಳಿದರು.
ಪುರಸಭೆ ಅಧ್ಯಕ್ಷೆ ರಾಜಶ್ರೀ ಎಸ್. ಖಜೂರಿ ಉದ್ಘಾಟಿಸಿದರು. ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ್ ಯಡ್ರಾಮಿ ಮಾತನಾಡಿ, ಯುವ ಜನತೆ ಮಾಧ್ಯಮ ಕ್ಷೇತ್ರಕ್ಕೆ ಬಂದು ಸಮಾಜದ ಬದಲಾವಣೆಗೆ ಪ್ರಯತ್ನಿಸ ಬೇಕು ಎಂದು ಕರೆ ನೀಡಿದರು.
ತಹಶೀಲ್ದಾರ್ ಯಲ್ಲಪ್ಪ ಸುಬೇದಾರ, ಪಿಯು ಉಪನಿರ್ದೇಶಕ ಶಿವಶರಣಪ್ಪ ಮುಳೆಗಾಂವ, ಪತ್ರಕರ್ತ ಪ್ರಭುಲಿಂಗ ನಿಲೂರೆ ಮಾತನಾಡಿದರು.
ತಾಪಂ ಇಒ ವಿಲಾಸರಾಜ್, ಕ್ಷೇತ್ರ ಶಿಕ್ಷಣಾಧಿಕಾರಿ ಚಿತ್ರಶೇಖರ ದೇಗುಲಮಡಿ, ರೇಷ್ಮೆ ವಿಸ್ತರಣಾಧಿಕಾರಿ ಡಿ.ಬಿ.ಪಾಟೀಲ, ಬಿಸಿಎಂ ಅಧಿಕಾರಿ ಬಸವರಾಜ ಕಾಳೆ, ಜಿಪಂ ಎಇಇ ನಾಗಮೂರ್ತಿ ಶೀಲವಂತ, ತೋಟಗಾರಿಕೆ ಶಂಕರಗೌಡ, ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಗಮನಾಥ ರೇವತಗಾಂವ, ರಾಜ್ಯ ಸಮಿತಿ ಸದಸ್ಯ ಶಿವರಂಜನ ಸತ್ಯೆಂಪೇಟ್, ಸಂಪಾದಕ ಶಿವಲಿಂಗಪ್ಪ ದೊಡ್ಡಮನಿ, ಶಿವರಾಯ ದೊಡ್ಡಮನಿ, ವಿಜಯ ವಾರದ, ಕುಮಾರಸ್ವಾಮಿ, ಚಂದ್ರಶೇಖರ ಕವಲಗಾ, ಸಿಪಿಐ ಭಾಸು ಚವ್ಹಾಣ, ಪಿಎಸ್‌ಐ ತಿರುಮಲ್ಲೇಶ, ಕಲಬುರಗಿ ಅಕ್ಷರದಾಸೋಹ ಅಧಿಕಾರಿ ಭರತರಾಜ ಸಾವಳಗಿ, ಪಿಯು ಸರ್ಕಾರಿ ಪದವಿ ಕಾಲೇಜಿನ ಪ್ರಾಚಾರ್ಯ ಅರುಣಿತಾ, ಪಿಯು ಪ್ರಾಚಾರ್ಯ ಶಶಿಕಾಂತ ಮೇತ್ರಿ, ಬಾಲಕಿಯರ ಪಿಯು ಪ್ರಾಚಾರ್ಯ ಜೋಹರಾ ಪಾತೀಮಾ, ಮುಖ್ಯ ಶಿಕ್ಷಕ ಮಚೇಂದ್ರ ಪಾಂಚಾಳ ಇದ್ದರು. ಇದೇ ವೇಳೆ ಪತ್ರಕರ್ತರ ಪ್ರತಿಭಾವಂತ ಮಕ್ಕಳನ್ನು ಸನ್ಮಾನಿಸಲಾಯಿತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Stock Market: ಷೇರುಪೇಟೆ ಸೂಚ್ಯಂಕ 500ಕ್ಕೂ ಅಧಿಕ ಅಂಕ ಕುಸಿತ; 23,400ಕ್ಕೆ ಇಳಿದ ನಿಫ್ಟಿ
Yadagiri: ಸ್ನಾನಕ್ಕೆಂದು ತೆರಳಿದ ಇಬ್ಬರು ಬಾಲಕರು ನೀರುಪಾಲು
Baaghi 4: ಟೈಗರ್ ಶ್ರಾಫ್ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್ ಔಟ್
Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ
Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.