ರಸಗೊಬ್ಬರಕ್ಕೆ ಹೆಚ್ಚಿನ ದರ ವಿಧಿಸಿದರೆ ಕ್ರಮ
Team Udayavani, Jul 24, 2022, 2:11 PM IST
ಜೇವರ್ಗಿ: ಹೆಚ್ಚಿನ ದರ ಪಡೆದು ಅಧಿಕೃತ ಬಿಲ್ ನೀಡದೇ ರಸಗೊಬ್ಬರ ಮಾರಿದರೆ ಅಂತವರ ರಸಗೊಬ್ಬರ ಮಾರಾಟ ಪರವಾನಗಿ ರದ್ಧುಪಡಿಸಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಶರಣಗೌಡ ರಂಗಣಗೌಡ ಎಚ್ಚರಿಸಿದರು.
ಪಟ್ಟಣದ ಕೃಷಿ ಇಲಾಖೆ ಕಚೇರಿ ಆವರಣದಲ್ಲಿ ರಸಗೊಬ್ಬರ ಮಾರಾಟ ಗಾರರ ಸಭೆ ನಡೆಸಿ ಮಾತನಾಡಿದ ಅವರು, ಕೆಲವು ರೈತರು ಕೃಷಿ ಕಚೇರಿಗೆ ಬಂದು ತಾಲೂಕಿನಲ್ಲಿ ಕೆಲವೊಂದು ರಸಗೊಬ್ಬರ ವಿತರಕರು ಡಿಎಪಿ, ಯೂರಿಯಾ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದಾಗಿ ದೂರಿದ್ದಾರೆ. ಕಾರಣ ರಸಗೊಬ್ಬರ ಮಾರಾಟಗಾರರು ಸರ್ಕಾರ ನಿಗದಿಪಡಿಸಿದ ಗರಿಷ್ಠ ಮಾರಾಟ ದರದಲ್ಲೇ ರಸಗೊಬ್ಬರ ಮಾರಬೇಕು. ರೈತರಿಗೆ ಕಡ್ಡಾಯವಾಗಿ ಅಧಿಕೃತ ಬಿಲ್ ನೀಡಬೇಕು ಎಂದು ಸೂಚಿಸಿದರು.
ಪ್ರತಿ ರಸಗೊಬ್ಬರ ವಿತರಕರು ತಮ್ಮ ಅಂಗಡಿಯಲ್ಲಿ ದಾಸ್ತಾನು ಇರುವ ರಸಗೊಬ್ಬರ ಮಾಹಿತಿಯನ್ನು ಕೃಷಿ ಇಲಾಖೆಗೆ ಪ್ರತಿದಿನ ಸಲ್ಲಿಸಬೇಕು ಎಂದು ಹೇಳಿದರು.
ತಾಂತ್ರಿಕ ಕೃಷಿ ಅಧಿಕಾರಿ ಪವನಕುಮಾರ ಕಟ್ಟಿಮನಿ, ಸಹಾಯಕ ಕೃಷಿ ಅಧಿಕಾರಿಗಳಾದ ಶಿವಲಿಂಗಪ್ಪ ಅವಂಟಿ, ಅನಿಲದೇವ, ತಾಲೂಕು ಆಗ್ರೋ ಅಸೋಷಿಯೇಶನ್ ಸಂಘದ ಅದ್ಯಕ್ಷ ದಯಾನಂದ ದೇವರಮನಿ, ಮಲ್ಲಿಕಾರ್ಜುನ ಪಾಟೀಲ ಬಿರಾಳ, ಈರಣ್ಣ ಬನ್ನೆಟ್ಟಿ, ಶಿವಶಂಕರ ಪಾಟೀಲ ಹಳ್ಳಿ, ಸತೀಶಬಾಬು ಹರವಾಳ, ಶರಣಗೌಡ ಹಳ್ಳಿ, ಮಹ್ಮದ್ ಸೋಫಿ ಗಂವ್ಹಾರ, ಶಿವರೆಡ್ಡಿ ಹಾಗೂ ತಾಲೂಕಿನ ವಿವಿಧ ರಸಗೊಬ್ಬರ ವಿತರಕರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್‌ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.