ಗ್ರಂಥಾಲಯಕ್ಕೂ ಕ್ರೀಡಾ ಸಾಮಗ್ರಿ ಪೂರೈಕೆ!

ಗ್ರಾಮೀಣ ಪ್ರದೇಶದ ಮಕ್ಕಳ ಬೌದ್ಧಿಕ ವಿಕಸನಕ್ಕಾಗಿ ಸಿಇಒ ಪ್ರಿಯಾಂಕಾ ಮಹತ್ವದ ಹೆಜ್ಜೆ

Team Udayavani, Jul 24, 2022, 5:34 PM IST

17

ಕಾರವಾರ: ಜಿಲ್ಲೆಯ ಗ್ರಾಮೀಣ ಭಾಗದ ಪ್ರತಿಯೊಬ್ಬ ಮಗುವಿನ ದೈಹಿಕ, ಮಾನಸಿಕ ಹಾಗೂ ಬೌದ್ಧಿಕ ವಿಕಸನಕ್ಕಾಗಿ ಜಿಲ್ಲೆಯ 229 ಗ್ರಾಪಂ ಗ್ರಂಥಾಲಯಗಳಿಗೆ ಗ್ರಾಪಂಗಳಿಂದ ಸಂಗ್ರಹಿಸಲಾಗುತ್ತಿರುವ ಶೇ.6 ರಷ್ಟು ಗ್ರಂಥಾಲಯ ಕರದಿಂದಲೇ ಒಳಾಂಗಣ ಕ್ರೀಡೆಗೆ ಸಂಬಂಧಿಸಿದ ಕ್ರೀಡಾ ಸಾಮಗ್ರಿ ಹಾಗೂ ಬೌದ್ಧಿಕ ವಿಕಸನಕ್ಕೆ ಪೂರಕವಾದ ಸಾಧನಗಳನ್ನು ಪೂರೈಸಲು ಮಹತ್ವದ ಹೆಜ್ಜೆ ಇಟ್ಟಿದ್ದಾರೆ.

ಮಾಧ್ಯಮಗಳಿಗಿಂದು ಈ ಸಂಬಂಧ ಮಾಹಿತಿ ನೀಡಿದ ಅವರು, ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗ್ರಾಪಂ ಗ್ರಂಥಾಲಯಗಳ ಡಿಜಿಟಲೀಕರಣ ಮಾಡಲಾಗಿದೆ. ಗ್ರಂಥಾಲಯ ಡಿಜಿಟಲೀಕರಣದಡಿ ಈಗಾಗಲೇ ಜಿಲ್ಲೆಯ ಎಲ್ಲಾ ಗ್ರಾಪಂ ಗ್ರಂಥಾಲಯಗಳನ್ನು ಡಿಜಿಟಲೀಕರಿಸಲಾಗುತ್ತಿದೆ. ಗ್ರಾಪಂ ಗ್ರಂಥಾಲಯಗಳಿಗೆ ಒಳಾಂಗಣ ಕ್ರೀಡೆಗೆ ಸಂಬಂಧಿಸಿದ ಕ್ರೀಡಾ ಸಾಮಗ್ರಿ ಹಾಗೂ ಬೌದ್ಧಿಕ ವಿಕಸನಕ್ಕೆ ಪೂರಕವಾದ ಒಗಟು ಬಿಡಿಸುವ ಆಟಿಕೆ, ರುಬಿಕ್‌ ಕ್ಯೂಬ್‌, ಕೇರಂ, ಚೆಸ್‌, ಹಾವು-ಏಣಿ ಬೋರ್ಡ್‌, ಎಣಿಸುವ ಮಣಿಗಳ ಸರ, ಅಬಾಕಸ್‌ ಸಾಧನಗಳನ್ನು ಗ್ರಾಪಂಗಳ ಗ್ರಂಥಾಲಯ ಕರ ಹಣದಲ್ಲಿ ಖರಿದಿಸಿ ಪೂರೈಸಲಾಗುತ್ತಿದೆ ಎಂದು ವಿವರಿಸಿದರು.

ಜತೆಗೆ ಕಳೆದ ಸಾಲಿನಲ್ಲಿ ಡಿಜಿಟಲೀಕರಣಗೊಳಿಸಿದ ಗ್ರಾಪಂ ಗ್ರಂಥಾಲಯಗಳಲ್ಲಿನ ಗಣಕ ಯಂತ್ರಗಳ ಉತ್ತಮ ಕಾರ್ಯನಿರ್ವಹಣೆ, ಎಲ್ಲ ಗ್ರಾಪಂಗಳಿಗೆ 1 ರಿಂದ 10ನೇ ತರಗತಿವರೆಗಿನ (ಎನ್‌ಸಿಇಆರ್‌ಟಿ ಟೆಕ್ಸಟ್‌ ಬುಕ್‌ ಸೇರಿ) ಪಠ್ಯಪುಸ್ತಕ ಪೂರೈಸಲಾಗಿದೆ. ಗ್ರಂಥಾಲಯಗಳಿಗೆ ಮಕ್ಕಳ ನೋಂದಣಿ ಸಂಖ್ಯೆಯನ್ನು ಶೇ.100 ರಷ್ಟು ಪ್ರಗತಿ ಸಾಧನೆಗೆ ಪ್ರೋತ್ಸಾಹಿಸಲಾಗುತ್ತಿದೆ.

ಓದುವ ಬೆಳಕು ಕಾರ್ಯಕ್ರಮದಡಿ ಶಿಕ್ಷಣ ಇಲಾಖೆ ಶಾಲಾ ಮಕ್ಕಳನ್ನು ವಾರಕ್ಕೊಮ್ಮೆ ಗ್ರಂಥಾಲಯಕ್ಕೆ ಕರೆತರಲು, ಶಾಲೆ, ಸಮಯ, ದಿನಾಂಕ ನಿಗದಿ ಹಾಗೂ ಶಾಲೆಯಿಂದ ಒಬ್ಬ ಶಿಕ್ಷಕರು ಮಕ್ಕಳನ್ನು ನಿಗದಿತ ವೇಳಾಪಟ್ಟಿಯಂತೆ ಗ್ರಂಥಾಲಯಕ್ಕೆ ಕರೆತರುವ ಯೋಜನೆ ರೂಪಿಸಲಾಗಿದೆ.

ಈ ಯೋಜನೆ ಮಾಹಿತಿಯನ್ನು ಸುತ್ತೋಲೆ ಮೂಲಕ ಬಿಇಒಗಳಿಗೆ ಸೂಚಿಸಲಾಗಿದೆ. ಪ್ರತಿ ಶಾಲೆಯ ಶಿಕ್ಷಕರಲ್ಲಿ ಒಬ್ಬರು ನಿಯತವಾಗಿ ಮಕ್ಕಳನ್ನು ಶಾಲೆಗೆ ತರಬೇಕು. ಈ ಸಂಬಂಧ ಗ್ರಂಥಪಾಲಕರು ಹಾಗೂ ಶಾಲಾ ಮುಖ್ಯಸ್ಥರಿಗೆ ಗ್ರಾಪಂ ಗ್ರಂಥಾಲಯಗಳಿಗೆ ಶಿಕ್ಷಕರ ಜತೆ ಮಕ್ಕಳನ್ನು ಕಳಿಸಬೇಕೆಂಬ ಸೂಚನೆ ನೀಡಬೇಕು. ಈ ಹೊಣೆಗಾರಿಕೆ ಬಿಇಒರದ್ದು.

ಗ್ರಾಮದಲ್ಲಿನ ಸಂಪನ್ಮೂಲ ವ್ಯಕ್ತಿಗಳನ್ನು ಗುರುತಿಸಿ ಗ್ರಂಥಾಲಯಕ್ಕೆ ಮಕ್ಕಳು ಭೇಟಿ ನೀಡಿದ ಸಂದರ್ಶನದಲ್ಲಿ ಓದುವ ಹವ್ಯಾಸ, ಕ್ರೀಡೆ ಇವುಗಳ ಬಗ್ಗೆ ಉಚಿತ ಮಾರ್ಗದರ್ಶನ ಕೊಡಿಸಲು ಕಾರ್ಯಕ್ರಮ ರೂಪಿಸಬೇಕು. ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳು ಗ್ರಾಪಂ ಗ್ರಂಥಾಲಯಕ್ಕೆ ಪುಸ್ತಕ ಖರೀದಿಸುವ ಸಂದರ್ಭದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದ ಪುಸ್ತಕಗಳನ್ನು ಜಿಪಂ ಶಿಫಾರಸ್ಸು ಮಾಡಿದ ಪುಸ್ತಕಗಳನ್ನು ಮಾತ್ರ ಖರೀದಿಸಬೇಕು. ಎಲ್ಲಾ ಗ್ರಾಪಂ ಗ್ರಂಥಾಲಯಗಳಲ್ಲಿ ಈಗಾಗಲೇ ಪೂರೈಸಲಾದ ಕರಿಯರ್‌ ಗೈಡೆನ್ಸ್‌ ಚಾರ್ಟ್‌ನ್ನು ಉತ್ತಮ ಗುಣಮಟ್ಟದ ಪ್ರಿಂಟ್‌ ನಲ್ಲಿ ತೆಗೆದು ಗ್ರಂಥಾಲಯಗಳಲ್ಲಿ ಪ್ರಕಟಿಸಲು ಸೂಚಿಸಲಾಗಿದೆ ಎಂದಿದ್ದಾರೆ.

ಇದೊಂದು ವಿನೂತನ ಕಾರ್ಯಕ್ರಮವಾಗಿದ್ದು, ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸಲು ಪ್ರಯತ್ನ ಮಾಡಲಾಗುತ್ತಿದೆ. ಮಕ್ಕಳು ಮಾನಸಿಕ ಹಾಗೂ ಬೌದ್ಧಿಕ ವಿಕಾಸಕ್ಕೆ ಇದೊಂದು ಹೆಜ್ಜೆ. ಗ್ರಾಮೀಣ ಮಕ್ಕಳು ಸದೃಢರಾಗಲಿ ಎಂಬ ಉದ್ದೇಶದಿಂದ ಕ್ರೀಡಾ ಸಾಮಗ್ರಿ ಹಾಗೂ ಆಟಿಕೆ ಸಾಧನಗಳ ಪೂರೈಕೆಗೆ ಯೋಜನೆ ಸಿದ್ಧಪಡಿಸಿ ಕಾರ್ಯ ರೂಪಕ್ಕೆ ತರಲಾಗುತ್ತಿದೆ.  -ಪ್ರಿಯಾಂಕಾ ಎಂ., ಜಿಪಂ ಸಿಇಒ, ಉತ್ತರ ಕನ್ನಡ.

ಗ್ರಾಪಂ ಗ್ರಂಥಾಲಯಗಳ ಡಿಜಿಟಲೀಕರಣ ಹಾಗೂ ಮಕ್ಕಳ ಸವಾಂìಗೀಣ ಅಭಿವೃದ್ಧಿಗೆ ಪೂರಕವಾಗುವಂತೆ ಜಿಪಂ ಗ್ರಂಥಾಲಯಗಳಿಗೆ ಸ್ಪರ್ಧಾತ್ಮಕ ಪುಸ್ತಕ, ಆಟಿಕೆ ಸಾಧನ ಪೂರೈಸುವ ಕಾರ್ಯ ಮಹತ್ವದ್ದಾಗಿದೆ. ಇದರಿಂದ ಮಕ್ಕಳು ಮೊಬೈಲ್‌ ಫೋನ್‌ ವ್ಯಸನ ಕಡಿಮೆಯಾಗಬಹುದು.  -ಗಣಪತಿ ಆಗೇರ, ಮುಖ್ಯಾಧ್ಯಾಪಕರು, ಕೆಪಿಎಸ್‌ ಸ.ಮಾ.ಹಿ.ಪ್ರಾ. ಶಾಲೆ, ಅಮದಳ್ಳಿ

ಟಾಪ್ ನ್ಯೂಸ್

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

1-honey

Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ‌,ಮಗಳು

5-dandeli

Dandeli: ವಿದ್ಯುತ್ ಕಂಬದ ಜಿಓಎಸ್ ಕಳವು‌ ಮಾಡಿದ್ದ ಆರೋಪಿ;ಮಾಲು ಸಹಿತ ವಶಕ್ಕೆ ಪಡೆದ ಪೊಲೀಸರು

10

Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

Karnataka By Poll Results: ಮತಎಣಿಕೆ-ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು “ಕೈ” ಮುನ್ನಡೆ‌

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.