ಪಾಕಿಸ್ಥಾನ vs ಶ್ರೀಲಂಕಾ ದ್ವಿತೀಯ ಟೆಸ್ಟ್: ಮೊದಲ ದಿನ ಲಂಕಾ ಮೇಲುಗೈ
Team Udayavani, Jul 24, 2022, 6:25 PM IST
ಗಾಲೆ: ಪ್ರವಾಸಿ ಪಾಕಿಸ್ಥಾನ ವಿರುದ್ಧ ರವಿವಾರ ಆರಂಭಗೊಂಡ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ಮೇಲುಗೈ ಸಾಧಿಸಿದೆ. ಮೊದಲ ದಿನದಾಟದ ಅಂತ್ಯಕ್ಕೆ 6 ವಿಕೆಟ್ ಕಳೆದುಕೊಂಡು 315 ರನ್ ಪೇರಿಸಿದೆ.
ತಮ್ಮ ಅಮೋಘ ಬ್ಯಾಟಿಂಗ್ ಪ್ರದರ್ಶನವನ್ನು ಮುಂದುವರಿಸಿದ ದಿನೇಶ್ ಚಂಡಿಮಾಲ್ 80 ರನ್ ಕೊಡುಗೆ ಸಲ್ಲಿಸಿದರು. ಆರಂಭಿಕರಾದ ಒಶಾದ ಫೆರ್ನಾಂಡೊ 50 ಮತ್ತು ದಿಮುತ್ ಕರುಣಾರತ್ನೆ 40 ರನ್ ಹೊಡೆದರು. ಇವರಿಬ್ಬರ ಮೊದಲ ವಿಕೆಟ್ ಜತೆಯಾಟದಲ್ಲಿ 92 ರನ್ ಒಟ್ಟುಗೂಡಿತು.
ಈ ಹಂತದಲ್ಲಿ ಶ್ರೀಲಂಕಾ ಕ್ಷಿಪ್ರ ಕುಸಿತವೊಂದನ್ನು ಕಂಡಿತು. 120 ರನ್ ಆಗುವಷ್ಟರಲ್ಲಿ 3 ವಿಕೆಟ್ ಬಿತ್ತು. ಆಗ ಏಂಜೆಲೊ ಮ್ಯಾಥ್ಯೂಸ್ (42) ಚಂಡಿಮಾಲ್ ಕುಸಿತಕ್ಕೆ ತಡೆಯೊಡ್ಡಿ ನಿಂತರು. ಧನಂಜಯ ಡಿ ಸಿಲ್ವ 33 ರನ್ ಹೊಡೆದರು. 42 ರನ್ ಗಳಿಸಿರುವ ನಿರೋಷನ್ ಡಿಕ್ವೆಲ್ಲ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಪಾಕಿಸ್ಥಾನ ಪರ ಆಘಾ ಸಲ್ಮಾನ್ 2 ವಿಕೆಟ್ ಉರುಳಿಸಿದರು. ಗಾಲೆಯಲ್ಲೇ ಆಡಲಾದ ಮೊದಲ ಟೆಸ್ಟ್ ಪಂದ್ಯವನ್ನು ಪಾಕ್ 4 ವಿಕೆಟ್ಗಳಿಂದ ಜಯಿಸಿತ್ತು. ಸರಣಿಯನ್ನು ಸಮಬಲಕ್ಕೆ ತರಬೇಕಾದರೆ ಶ್ರೀಲಂಕಾ ಈ ಕೊನೆಯ ಪಂದ್ಯವನ್ನು ಗೆಲ್ಲಲೇಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಎಲ್ಲಾ 10 ತಂಡಗಳು ಹೀಗಿವೆ ನೋಡಿ
IPL Mega Auction: ಮೊದಲ ದಿನದ ಹರಾಜಿನ ಬಳಿಕ ಆರ್ ಸಿಬಿ ತಂಡ ಹೀಗಿದೆ ನೋಡಿ
Singapore: ಇಂದಿನಿಂದ ವಿಶ್ವ ಚೆಸ್: ಗುಕೇಶ್-ಲಿರೆನ್ ಮುಖಾಮುಖಿ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ
IPL Auction: ಕೇನ್, ಮಯಾಂಕ್, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.